ETV Bharat / state

ಪತಿಯಿಂದ ವರದಕ್ಷಿಣೆ ಕಿರುಕುಳ ಆರೋಪ: ಮಹಿಳೆ ಆತ್ಮಹತ್ಯೆ

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ರಾಜಾಜಿನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರು ವರ್ಷಗಳ ಹಿಂದೆ ಶಹನಾಬ್‌ಖಾನ್ ನುಮ್ರಾಸ್​​ರನ್ನು ಮದುವೆಯಾಗಿದ್ದರು. ಈ ಸಂಬಂಧ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

woman commits suicide
ಮಹಿಳೆ ಆತ್ಮಹತ್ಯೆ
author img

By

Published : Jan 24, 2022, 3:40 PM IST

ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಾಜಿನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತುಮಕೂರು ಮೂಲದ ನುಮ್ರಾಸ್ (31) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಘಟನೆ ಸಂಬಂಧ ಆಕೆಯ ಪತಿ ಶಹನಾಬ್‌ಖಾನ್ ಎಂಬಾತನನ್ನು ಬಂಧಿಸಲಾಗಿದೆ.

ಆರು ವರ್ಷಗಳ ಹಿಂದೆ ಶಹನಾಬ್‌ಖಾನ್ ನುಮ್ರಾಸ್​​ರನ್ನು ಮದುವೆಯಾಗಿದ್ದು, ತುಮಕೂರಿನಲ್ಲಿ ಕುಟುಂಬ ಸಮೇತ ವಾಸವಾಗಿದ್ದರು. ಶುಕ್ರವಾರ ಸಂಜೆ ರಾಜಾಜಿನಗರದ ಬಾಷ್ಯಂ ವೃತ್ತದಲ್ಲಿರುವ ನುಮ್ರಾಸ್ ಸಹೋದರಿ ಮನೆಗೆ ದಂಪತಿ ಬಂದಿದ್ದರು. ಈ ವೇಳೆ ಶನಿವಾರ ದಂಪತಿ ನಡುವೆ ಗಲಾಟೆಯಾಗಿತ್ತು ಎನ್ನಲಾಗ್ತಿದೆ. ರಾತ್ರಿ 9 ಗಂಟೆ ಸುಮಾರಿಗೆ ಆಕೆ ಕೋಣೆಯ ಬಾಗಿಲು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನುವಾರ ಬೆಳಗ್ಗೆ ಮನೆಯವರಿಗೆ ಅವರು ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಗೊತ್ತಾಗಿದೆ.

ಇದನ್ನೂ ಓದಿ: ಮಂಗಳೂರು: ರೈಲಿನಲ್ಲಿ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ 1.48 ಕೋಟಿ ನಗದು, ₹40 ಲಕ್ಷದ ಚಿನ್ನಾಭರಣ ವಶ

ಈ ಸಂಬಂಧ ಆಕೆಯ ಪೋಷಕರು ವರದಕ್ಷಿಣೆ ಕಿರುಕುಳ ಆರೋಪ ಮಾಡಿ ದೂರು ನೀಡಿದ್ದಾರೆ. ಈ ಹಿನ್ನೆಲೆ ಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು-ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.