ETV Bharat / state

ಯತ್ನಾಳ್ ಅವರದ್ದು ವೈಯಕ್ತಿಕ ಹೇಳಿಕೆ, ಮೋದಿ ಕ್ಷಮೆ ಕೇಳುವ ಪ್ರಶ್ನೆ ಉದ್ಭವಿಸಲ್ಲ: ಅಶ್ವತ್ಥ್​ನಾರಾಯಣ್

author img

By

Published : Apr 28, 2023, 3:18 PM IST

ಬಸನಗೌಡ ಪಾಟೀಲ್​ ಯತ್ನಾಳ್ ಅವರ ಹೇಳಿಕೆ ಪಕ್ಷದ ಹೇಳಿಕೆಯಾಗುವುದಿಲ್ಲ. ಹಾಗಾಗಿ ಪ್ರಧಾನಿ ಮೋದಿ ಕ್ಷಮೆ ಕೇಳುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥ್​ನಾರಾಯಣ್ ಅವರು ತಿಳಿಸಿದ್ದಾರೆ.

ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥ್​ನಾರಾಯಣ್
ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥ್​ನಾರಾಯಣ್
ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥ್ ​ನಾರಾಯಣ್

ಬೆಂಗಳೂರು : ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರೆದಿರುವುದನ್ನು ಪಕ್ಷ ಒಪ್ಪಲ್ಲ. ಆದರೆ, ಅವರ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ. ಹಾಗಾಗಿ ಮೋದಿ ಕ್ಷಮೆ ಯಾಚಿಸುವ ಪ್ರಶ್ನೆಯೇ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥ್ ​ನಾರಾಯಣ್ ಸ್ಪಷ್ಟಪಡಿಸಿದ್ದಾರೆ.

ಮಲ್ಲೇಶ್ವರದಲ್ಲಿರುವ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ನೀಡಿದ್ದ ಹೇಳಿಕೆಗೆ ಪ್ರತಿಯಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೋನಿಯಾ ಗಾಂಧಿ ಅವರಿಗೆ ವಿಷಕನ್ಯೆ ಎಂದು ಸಂಬೋಧಿಸಿದ್ದಾರೆ. ಯತ್ನಾಳ್ ಬದಲು ಪ್ರಧಾನಿ ಕ್ಷಮೆ ಕೇಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಆದರೆ, ಇದು ಯತ್ನಾಳ್ ಅವರ ವೈಯಕ್ತಿಕ ಹೇಳಿಕೆಯಾಗಿದೆ. ಇದು ಪಕ್ಷದ ಹೇಳಿಕೆಯಲ್ಲ. ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷರು ಹೇಳಿಕೆ ನೀಡಿದ್ದಾರೆ. ಹಾಗಾಗಿ ಅದು ಕಾಂಗ್ರೆಸ್ ಪಕ್ಷದ ಹೇಳಿಕೆಯಾಗಲಿದೆ. ಆದರೆ, ಯತ್ನಾಳ್ ಹೇಳಿಕೆ ಪಕ್ಷದ ಹೇಳಿಕೆಯಾಗಲ್ಲ. ಹಾಗಾಗಿ ಪ್ರಧಾನಿ ಮೋದಿ ಕ್ಷಮೆ ಕೇಳುವ ಪ್ರಶ್ನೆಯೇ ಉದ್ಭವವಾಗಲ್ಲ ಎಂದರು.

ಯತ್ನಾಳ್ ಹೇಳಿಕೆಯನ್ನು ಬಿಜೆಪಿ ಒಪ್ಪಲ್ಲ. ಯಾರೂ ಕೂಡ ಇಂತಹ ಹೇಳಿಕೆ ನೀಡಬಾರದು. ಯಾರೇ ಇಂತಹ ಹೇಳಿಕೆ ನೀಡಿದರೂ ಅದನ್ನು ನಮ್ಮ‌ ಪಕ್ಷ ಕೂಡ ಒಪ್ಪಲ್ಲ ಎಂದರು. ಮೋದಿ ಬಗ್ಗೆ ಖರ್ಗೆ ವಿಷ ಸರ್ಪಕ್ಕೆ ಹೋಲಿಸಿದ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಅಶ್ವತ್ಥ​ ನಾರಾಯಣ್, ಕಾಂಗ್ರೆಸ್ ಪಕ್ಷದ ಸೋನಿಯಾ ಗಾಂಧಿ ಹಾಗೂ ಇತರ ನಾಯಕರು ಯಾವಾಗೆಲ್ಲಾ ಮೋದಿ ವಿರುದ್ಧ ಇಂತಹ ಹೇಳಿಕೆ ನೀಡಿದ್ದರೋ ಆಗೆಲ್ಲಾ ಕಾಂಗ್ರೆಸ್ ಪಕ್ಷ ಸಂಪೂರ್ಣ ಧೂಳಿಪಟ ಆಗಿದೆ. ಈಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆ ಖಂಡನೀಯ. ಅವರ ಹೇಳಿಕೆಯನ್ನು ಬಿಜೆಪಿ ಸಂಪೂರ್ಣವಾಗಿ ಖಂಡಿಸಲಿದೆ ಎಂದರು.

ಪ್ರಣಾಳಿಕೆ ಅಂತಿಮ ಹಂತದಲ್ಲಿದೆ : ಬಿಜೆಪಿ ಪ್ರಣಾಳಿಕೆ ಅಂತಿಮ ಹಂತದಲ್ಲಿದೆ. ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆಯ ಬೇಡಿಕೆ ಇದೆ. ಅದನ್ನೂ ನೋಡಲಾಗುತ್ತದೆ. ಆದಷ್ಟು ಬೇಗ ಪ್ರಣಾಳಿಕೆ ಬಿಡುಗಡೆ ಮಾಡುತ್ತೇವೆ. ನಾಯಕರೆಲ್ಲಾ ರಾಜ್ಯ ಪ್ರವಾಸದಲ್ಲಿದ್ದಾರೆ. ಅವರ ಸಮಯ ನೋಡಿ ಬಿಡುಗಡೆ ಮಾಡುತ್ತೇವೆ ಎಂದರು.

ಬಿಜೆಪಿಗೆ ಜೆಡಿಎಸ್ ಮೊದಲ ಎದುರಾಳಿ : ಹಾಸನ ಸೇರಿದಂತೆ ರಾಜ್ಯದ ಯಾವ ಕ್ಷೇತ್ರದಲ್ಲಿಯೂ ಯಾವ ಪಕ್ಷದ ಜೊತೆಯೂ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿಲ್ಲ. ಎಲ್ಲ 224 ಕ್ಷೇತ್ರದಲ್ಲಿಯೂ ಬಿಜೆಪಿ ಪ್ರಬಲ ಹೋರಾಟ ಮಾಡುತ್ತೇವೆ. ಪ್ರೀತಂಗೌಡ ಹೇಳಿಕೆ ಪಕ್ಷದ ಹೇಳಿಕೆಯಲ್ಲ. ನಮಗೆ ಜೆಡಿಎಸ್ ಪಕ್ಷವೇ ಮೊದಲ ಎದುರಾಳಿಯಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್ ಸ್ಪಷ್ಟಪಡಿಸಿದ್ದಾರೆ.

ನಮ್ಮ ಮೊದಲ ಪ್ರತಿಸ್ಪರ್ಧಿಯೇ ಜೆಡಿಎಸ್: ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ. ಜೆಡಿಎಸ್ ಗೆ ಹಾಕುವ ಮತ ಬಿಜೆಪಿಗೆ ಹಾಕಿದಂತೆಯೇ. ರಾಷ್ಟ್ರೀಯ ನಾಯಕರ ಮಟ್ಟದಲ್ಲಿ ಹೊಂದಾಣಿಕೆ ಆಗಿದೆ ಎನ್ನುವ ಪ್ರೀತಂಗೌಡ ಹೇಳಿಕೆಗೂ ಪಕ್ಷಕ್ಕೂ ಸಂಬಂಧ ಇಲ್ಲ. ಇದು ಅವರ ವೈಯಕ್ತಿಕ ಹೇಳಿಕೆಯಾಗಿದೆ. ನಮ್ಮ ಮೊದಲ ಪ್ರತಿಸ್ಪರ್ಧಿಯೇ ಜೆಡಿಎಸ್. ಯಾವ ಕಾರಣಕ್ಕೂ ಯಾರ ಜೊತೆಯೂ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. 224 ಕ್ಷೇತ್ರದಲ್ಲೂ ನಾವು ಸ್ಪರ್ಧೆ ಮಾಡಿದ್ದು, ಹೋರಾಟ ಮಾಡುತ್ತೇವೆ. ಎಲ್ಲಿಯೂ ಹೊಂದಾಣಿಕೆ ಮಾಡಿಕೊಂಡಿಲ್ಲ. ಜೆಡಿಎಸ್ ಕಾಂಗ್ರೆಸ್​ನ ಬಿಟೀಂ ಆಗಿದೆ. ನಾವು ನಂಬರ್ ಒನ್ ವಿರೋಧ ಪಕ್ಷವಾಗಿ ಕಾಂಗ್ರೆಸ್ ಅನ್ನು ಪರಿಗಣಿಸಿದ್ದೇವೆ ಎಂದರು.

ಸೋಲುವ ಭೀತಿಯಿಂದ ವರುಣಾದಲ್ಲಿ ಕಾಂಗ್ರೆಸ್​ನಿಂದ ಕಲ್ಲು ತೂರಾಟ : ವರುಣಾ ಕ್ಷೇತ್ರದಲ್ಲಿ ಸೋಲುವ ಭೀತಿಗೆ ಸಿಲುಕಿರುವ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದೆ. ನಮ್ಮ ಅಭ್ಯರ್ಥಿ ಸೋಮಣ್ಣ ಪ್ರಚಾರದ ವೇಳೆ ಕಲ್ಲು ತೂರಾಟ ನಡೆಸಿ ತೋಳ್ಬಲ ಪ್ರದರ್ಶನ ನಡೆಸಿದೆ. ಇದಕ್ಕೆಲ್ಲಾ ನಾವು ಹೆದರಲ್ಲ. ಅಲ್ಲಿ ನಮ್ಮ ಗೆಲುವು ಖಚಿತ, ಸೋಮಣ್ಣ ಗೆಲ್ಲಲಿದ್ದಾರೆ. ಬಿಜೆಪಿ ಸರ್ಕಾರವೇ ಮತ್ತೆ ರಚನೆಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾರ್ಯಕರ್ತರನ್ನು ಹೆದರಿಸುವ ಪ್ರಯತ್ನ ಮಾಡಿದ್ದಾರೆ: ನಮ್ಮ ಕಾರ್ಯಕರ್ತರ ಮೇಲೆ ವರುಣಾದಲ್ಲಿ ಆದ ಹಲ್ಲೆಯನ್ನು ಖಂಡಿಸುತ್ತೇನೆ. ಕಾಂಗ್ರೆಸ್ ನಾಯಕರು ವ್ಯವಸ್ಥಿತವಾಗಿ ಹಲ್ಲೆ ನಡೆಸಿ ನಮ್ಮ ಕಾರ್ಯಕರ್ತರನ್ನು ಹೆದರಿಸುವ ಪ್ರಯತ್ನ ಮಾಡಿದ್ದಾರೆ. ವರುಣಾ ಕ್ಷೇತ್ರದಲ್ಲಿ ಪ್ರಜಾಪ್ರಭುತ್ವದಲ್ಲಿ ಮತದ ಮೂಲಕ ತಮ್ಮ ಶಕ್ತಿ, ನಂಬಿಕೆ, ವಿಶ್ವಾಸ ವ್ಯಕ್ತಪಡಿಸುವ ಬದಲು ತೋಳ್ಬಲದ ಶಕ್ತಿ ಪ್ರದರ್ಶನವನ್ನು ಕಾಂಗ್ರೆಸ್ ಮಾಡಿದೆ. ಭಯ ಭೀತಿಯಿಂದ ಅವರು ಹೀಗೆ ಮಾಡಿದ್ದಾರೆ. ನಮ್ಮ ಕಾರ್ಯಕರ್ತರನ್ನು ಅಟ್ಟಾಡಿಸಿಕೊಂಡು ಹೋಗಿದ್ದಾರೆ. ಕಲ್ಲು ತೂರಿಸಿದ್ದಾರೆ.

ಅಭ್ಯರ್ಥಿಯಾಗಿರುವ ಸಚಿವ ಸೋಮಣ್ಣ, ಸಂಸದ ಪ್ರತಾಪ್ ಸಿಂಹ ವಿರುದ್ಧ ಕಲ್ಲು ತೂರಾಟ ಮಾಡಿದ್ದಾರೆ. ಇದಕ್ಕೆಲ್ಲಾ ನಾವು ಹೆದರಲ್ಲ, ನಮ್ಮ ಕಾರ್ಯಕರ್ತರ ಜೊತೆ ನಾವಿದ್ದೇವೆ. ಅವರಿಗೆ ಧೈರ್ಯ ತುಂಬಿದ್ದೇವೆ. ಕಲ್ಲು ತೂರಿದವರ ವಿರುದ್ಧ ಕ್ರಮ ಆಗಲಿದೆ. ವರುಣಾದಲ್ಲಿ ಬಿಜೆಪಿ ಗೆಲ್ಲಲಿದೆ. ಬಿಜೆಪಿ ಸರ್ಕಾರವೇ ಮತ್ತೆ ಬರಲಿದೆ ಎಂದರು.

ಮತ್ತೆ ನಾವೇ ಅಧಿಕಾರಕ್ಕೆ ಬರಲಿದ್ದೇವೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೊಸ ಶಿಕ್ಷಣ ನೀತಿಯನ್ನು ತೆಗೆಯುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಶಿಕ್ಷಣ ನೀತಿಯಲ್ಲೂ ರಾಜಕೀಯ ಮಾಡೋದು ಎಷ್ಟು ಸರಿ?. ಆದರೆ ಅವರು ಅಧಿಕಾರಕ್ಕೆ ಬರಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬರಲಿದ್ದೇವೆ. ಹೊಸ ಶಿಕ್ಷಣ ನೀತಿಯೇ ಮುಂದುವರೆಯಲಿದೆ ಎಂದು ಡಿ‌ ಕೆ ಶಿವಕುಮಾರ್ ಹೇಳಿಕೆಗೆ ಅಶ್ವತ್ಥ್ ನಾರಾಯಣ್ ತಿರುಗೇಟು ನೀಡಿದರು‌.

ಇದನ್ನೂ ಓದಿ: ಸೋನಿಯಾ 'ವಿಷಕನ್ಯೆ' ಎಂದ ಯತ್ನಾಳ​ರನ್ನು ಪಕ್ಷದಿಂದ ವಜಾ ಮಾಡಿ, ಪಿಎಂ, ಸಿಎಂ ಕ್ಷಮೆಯಾಚಿಸಬೇಕು: ಡಿಕೆಶಿ ಆಗ್ರಹ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.