ETV Bharat / state

ಮುದ್ದ ಹನುಮೇಗೌಡ ಕಾಂಗ್ರೆಸ್ ಸೇರ್ಪಡೆಗೆ ಅಭ್ಯಂತರವಿಲ್ಲ: ಸಚಿವ ಡಾ.ಜಿ.ಪರಮೇಶ್ವರ್ - ಯಾವುದೇ ಅಭ್ಯಂತರವಿಲ್ಲ

ಮಾಜಿ ಸಂಸದ ಮುದ್ದ ಹನುಮೇಗೌಡ ಕಾಂಗ್ರೆಸ್ ಸೇರ್ಪಡೆಗೆ ಯಾವುದೇ ಅಭ್ಯಂತರವಿಲ್ಲ ಎಂದು ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

Former MP  no objection  joining the Congress  Parameshwar  ಕಾಂಗ್ರೆಸ್ ಸೇರ್ಪಡೆ  ಯಾವುದೇ ಅಭ್ಯಂತರವಿಲ್ಲ  ಪರಮೇಶ್ವರ್
ಸಚಿವ ಡಾ.ಜಿ. ಪರಮೇಶ್ವರ್
author img

By ETV Bharat Karnataka Team

Published : Jan 12, 2024, 2:33 PM IST

ಸಚಿವ ಡಾ.ಜಿ. ಪರಮೇಶ್ವರ್ ಹೇಳಿಕೆ

ಬೆಂಗಳೂರು: ಮಾಜಿ ಸಂಸದ ಮುದ್ದ ಹನುಮೇಗೌಡ ಅವರು ನನ್ನನ್ನೂ ಸಹ ತುಮಕೂರಿನ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಅವರು ಪಕ್ಷಕ್ಕೆ ಸೇರ್ಪಡೆಯಾಗಲು ಯಾವುದೇ ಅಭ್ಯಂತರವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಸದಾಶಿವನಗರ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಮುದ್ದ ಹನುಮೇಗೌಡ ಪಕ್ಷಕ್ಕೆ ಸೇರ್ಪಡೆಯಾಗಲು ಯಾವುದೇ ಅಭ್ಯಂತರವಿಲ್ಲ. ಈ ಬಗ್ಗೆ ಒಮ್ಮತದಿಂದ ತೀರ್ಮಾನ ತೆಗೆದುಕೊಳ್ಳುತ್ತೇವೆ. ಈ ವಿಚಾರವನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಗಮನಕ್ಕೆ ತಂದಿದ್ದು, ಜಿಲ್ಲೆಯ ನಾಯಕರು ತೀರ್ಮಾನ ಮಾಡುವಂತೆ ಹೇಳಿದ್ದಾರೆ ಎಂದರು.

ಚುನಾವಣೆಯ ಟಿಕೆಟ್ ನೀಡಲು ಪಕ್ಷದಲ್ಲಿ ಕೆಲವು ಮಾನದಂಡಗಳಿವೆ. ಅದನ್ನು ಪಾಲಿಸಬೇಕಾಗುತ್ತದೆ. ನನಗೆ ಟಿಕೆಟ್ ಕೊಡಬೇಕೆಂದು ಷರತ್ತು ಹಾಕಬಾರದು ಎಂಬುದನ್ನು ಅಧ್ಯಕ್ಷರು ಹೇಳಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಜಿಲ್ಲೆಯ ನಾಯಕರ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಪಕ್ಷದ ಹಿತವನ್ನು ಕಾಪಾಡುವುದು ಮುಖ್ಯ ಎಂದು ಸ್ಪಷ್ಟಪಡಿಸಿದರು.

ಐದು ಕ್ಲಸ್ಟರ್ ರಚನೆ: ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಐದು ಕ್ಲಸ್ಟರ್ ಮಾಡಿದೆ. ಮೊದಲ ಕ್ಲಸ್ಟರ್ಸ್‌ನಲ್ಲಿ ಕರ್ನಾಟಕ, ತೆಲಂಗಾಣ, ಕೇರಳ ರಾಜ್ಯಗಳಿವೆ. ಮೊದಲ ಕ್ಲಸ್ಟರ್‌ನಲ್ಲಿರುವ ಎಲ್ಲ ರಾಜ್ಯಗಳ ನಾಯಕರು ಆಗಮಿಸಿದ್ದರು. ಸಭೆಯಲ್ಲಿ ಕೆಲವು ನಿರ್ದಿಷ್ಟ ಸೂಚನೆಗಳನ್ನು ನೀಡಿದ್ದಾರೆ ಎಂದು ತಿಳಿಸಿದರು.

ಪಂಚಾಯಿತಿ ಹಂತಗಳಲ್ಲಿ ಸಮಿತಿಗಳ ರಚನೆ ಮಾಡುವುದು, ಪ್ರಚಾರ ಯಾವ ರೀತಿ ಕೈಗೊಳ್ಳಬೇಕು ಹಾಗೂ ಅಭ್ಯರ್ಥಿಗಳ ಆಯ್ಕೆ ನಂತರ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಕುರಿತು ಬಹಳ ವ್ಯವಸ್ಥಿತವಾಗಿ ನಾಯಕರು ಸೂಚನೆ ಕೊಟ್ಟಿದ್ದಾರೆ ಎಂದರು.

ಈ ಹಿಂದೆ ಪ್ರತಿ ಕ್ಷೇತ್ರಕ್ಕೆ ಒಬ್ಬರನ್ನು ವೀಕ್ಷಕರನ್ನು ನೇಮಿಸಲಾಗುತ್ತಿತ್ತು. ಈ ಬಾರಿ, ಅದರ ಬದಲಿಗೆ ಸಮನ್ವಯಕಾರರನ್ನು (Coordinator) ನೇಮಿಸಲಾಗಿದೆ. ವಾರ್ ರೂಮ್ ಎನ್ನುವುದನ್ನು ಕನೆಕ್ಟ್ ಸೆಂಟರ್ ಎಂದು ಬದಲಿಸಲಾಗಿದೆ. ಇದೆಲ್ಲವನ್ನೂ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ರಾಷ್ಟ್ರೀಯ ಕೋರ್ಡಿನೇಷನ್ ಚೇರ್ಮನ್ ಶಶಿಕಾಂತ್ ಸೆಂಥಿಲ್ ಅವರು ವಿವರಿಸಿದ್ದಾರೆ. ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ, ಕೆರಳ ಸೇರಿದಂತೆ ದಕ್ಷಿಣ ಭಾರತದ ಜಿಲ್ಲೆಗಳಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಬಗ್ಗೆ ಸೂಚನೆ ನೀಡಿದರು. ಕನೆಕ್ಟ್ ಸೆಂಟರ್ ಮೂಲಕ ನೇರವಾಗಿ ಕೋರ್ಡಿನೇಟರ್ ಜೊತೆ ಸಂಪರ್ಕದಲ್ಲಿದ್ದು ಕೆಲಸ ಮಾಡಬೇಕು ಎಂಬುದನ್ನು ತಿಳಿಸಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್​ ವಿವರಿಸಿದರು.

ಶಶಿಕಾಂತ್ ಸೆಂಥಿಲ್ ಅವರು ರಾಜ್ಯದ ಎಲ್ಲಾ ಸಚಿವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ, ಚುನಾವಣೆಯಲ್ಲಿ ರಾಜ್ಯದ ಮೇಲೆ ಹೈಕಮಾಂಡ್ ಇಟ್ಟಿರುವ ನಿರೀಕ್ಷೆ ಹಾಗೂ ಸಚಿವರ ಜವಾಬ್ದಾರಿಗಳ ಬಗ್ಗೆ ತಿಳಿಸಿದ್ದಾರೆ ಅಂತಾ ಸಚಿವರು ಹೇಳಿದರು.

ಅಲ್ಪಸಂಖ್ಯಾತರ ಮತಗಳನ್ನು ಸೆಳೆಯಲು ಬಿಜೆಪಿ ತಂತ್ರ ರೂಪಿಸಿರುವ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಮತದಾರರ ಹತ್ತಿರ ಹೋಗಲು ಆಕ್ಷೇಪಣೆ ಇಲ್ಲ. ಯಾರು ಬೇಕಾದರೂ ಮತ ಕೇಳಬಹುದು. ಭಾರತೀಯ ಜನತಾ ಪಾರ್ಟಿಯವರು ಚುನಾವಣೆಯನ್ನು ಎದುರಿಸುವ ವಿಧಾನ ಹಾಗೂ ಚುನಾವಣಾ ವಿಧಾನ ಬೇರೆ ರೀತಿಯಾಗಿರುತ್ತದೆ. ಆದರೆ, ಅಂತಿಮವಾಗಿ ಮತದಾರರು ಮಾಡುವ ತೀರ್ಮಾನವನ್ನು ಯಾರೂ ಊಹಿಸಲು ಸಾಧ್ಯವಿಲ್ಲ ಎಂದರು.

ಸುರ್ಜೇವಾಲಾ ಮತ್ತೆ ರಾಜ್ಯ ಭೇಟಿ: ದೆಹಲಿಯಲ್ಲಿ ನಡೆದ ಸಭೆಯಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಬಗ್ಗೆ ಯಾವುದೇ ರೀತಿಯ ಚರ್ಚೆಯಾಗಿಲ್ಲ. ಚುನಾವಣಾ ತಂತ್ರಗಾರಿಕೆ ಬಗ್ಗೆ ಮಾತ್ರ ಚರ್ಚೆಯಾಗಿದೆ. ಈ ವೇಳೆ, ಆದಷ್ಟು ಬೇಗ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮ ಮಾಡಿ ಪಟ್ಟಿ ಬಿಡುಗಡೆ ಮಾಡುವಂತೆ ತಿಳಿಸಿದ್ದೇವೆ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಪ್ರದೇಶ ಚುನಾವಣಾ ಸಮಿತಿ ಸಭೆ ಕರೆದು ಇಲ್ಲಿ ತೀರ್ಮಾನ ಮಾಡಿ, ಅದನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ನೀಡುತ್ತೇವೆ ಎಂದಿದ್ದಾರೆ. ಇನ್ನೆರಡು ದಿನಗಳಲ್ಲಿ ರಾಜ್ಯಕ್ಕೆ ಆಗಮಿಸಿ ಸಭೆ ನಡೆಸಬಹುದು ಎಂದು ತಿಳಿಸಿದರು.

ಅಭ್ಯರ್ಥಿ ಸೋತರೆ ಕೆಲಸ ಮಾಡಿಲ್ಲ ಎಂದರ್ಥ: ಚುನಾವಣಾ ಜವಾಬ್ದಾರಿಯನ್ನು ಹೆಚ್ಚು ಗಂಭೀರವಾಗಿ ತೆಗೆದುಕೊಂಡು ನಿರ್ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ. ಯಾವ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲಲು ಸಾಧ್ಯವಿದೆಯೋ ಅಂತಹ ಕಡೆ ಸೋತರೆ ಅಲ್ಲಿ ಸರಿಯಾಗಿ ಕೆಲಸ ಮಾಡಿಲ್ಲ ಎಂದು ತಿಳಿದುಕೊಳ್ಳಬೇಕಾಗುತ್ತದೆ ಎಂಬುದನ್ನು ತಿಳಿಸಿದ್ದಾರೆ ಎಂದು ಹೇಳಿದರು.

ಹಾವೇರಿ ಪ್ರಕರಣವನ್ನು ನಿರ್ಲಕ್ಷ್ಯ ಮಾಡುವ ಪ್ರಶ್ನೆಯೇ ಇಲ್ಲ. ಯಾವುದೇ ರೀತಿಯ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳನ್ನು ರಕ್ಷಣೆ ಮಾಡುವುದಿಲ್ಲ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೊಂಡಿದ್ದಾರೆ‌ ಎಂದು ಸಚಿವ ಪರಮೇಶ್ವರ್​ ತಿಳಿಸಿದರು.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಸಿಎಂ ಚಾಲನೆ - LIVE

ETV Bharat Logo

Copyright © 2025 Ushodaya Enterprises Pvt. Ltd., All Rights Reserved.