ETV Bharat / state

ಯೋಗ ಕೇಂದ್ರ ಶಂಕು ಸ್ಥಾಪನೆಗೆ ಅಮೆರಿಕ ಮಾಜಿ ಅಧ್ಯಕ್ಷ ಒಬಾಮಾ ಮಂಡ್ಯ ಭೇಟಿ; ಸಿಎಂ ಭೇಟಿಯಾದ ಎಲ್ ಎನ್ ಮೂರ್ತಿ - ಅಮೆರಿಕ ಮಾಜಿ ಅಧ್ಯಕ್ಷ ಬರಾಕ್​ ಒಬಾಮಾ

ಮಂಡ್ಯದ ಹಲ್ಲೆಗೆರೆಯಲ್ಲಿ ನಿರ್ಮಿಸುತ್ತಿರುವ ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರದ ಶಂಕುಸ್ಥಾಪನೆಗೆ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್​ ಒಬಾಮಾ ದಂಪತಿ ಆಗಮಿಸಲಿದ್ದಾರೆ.

ಸಿಎಂ ಭೇಟಿಯಾದ ಎಲ್ ಎನ್ ಮೂರ್ತಿ
ಸಿಎಂ ಭೇಟಿಯಾದ ಎಲ್ ಎನ್ ಮೂರ್ತಿ
author img

By ETV Bharat Karnataka Team

Published : Aug 31, 2023, 7:09 PM IST

ಬೆಂಗಳೂರು : ಮಂಡ್ಯಗೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ದಂಪತಿ ಭೇಟಿ ಹಿನ್ನೆಲೆ ಅಮೆರಿಕದ ವೈದ್ಯ ಡಾ. ಲಕ್ಷ್ಮಿನರಸಿಂಹ ಮೂರ್ತಿ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಶಾಸಕರಾದ ರವಿಕುಮಾರ್ ಗಣಿಗ, ಬಾಬು ಬಂಡಿಸಿದ್ದೇಗೌಡ ನೇತೃತ್ವದ ನಿಯೋಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು.

ಟ್ರಸ್ಟ್​ನಿಂದ ಮಂಡ್ಯದ ಹಲ್ಲೆಗೆರೆಯಲ್ಲಿ ನಿರ್ಮಿಸುತ್ತಿರುವ ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರ ಶಂಕುಸ್ಥಾಪನೆಗೆ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ದಂಪತಿ, ಟಿಬೆಟಿಯನ್ ಧರ್ಮಗುರು ದಲೈಲಾಮಾ ಡಿಸೆಂಬರ್ ತಿಂಗಳಲ್ಲಿ ಆಗಮಿಸಲಿದ್ದಾರೆ. ಈ ಹಿನ್ನೆಲೆ ಹಲ್ಲೆಗೆರೆಯಲ್ಲಿ ಹೆಲಿಪ್ಯಾಡ್, ರಸ್ತೆ, ಚರಂಡಿ, ವಿದ್ಯುದ್ದೀಪ, ಕುಡಿಯುವ ನೀರು ಮುಂತಾದ ಸೌಕರ್ಯಗಳನ್ನು ಸರ್ಕಾರದ ವತಿಯಿಂದ ಒದಗಿಸಿ ಕೊಡುವಂತೆ ನಿಯೋಗವು ಮನವಿ ಮಾಡಿತು.

ಈ ಕೇಂದ್ರವು ಹಲ್ಲೆಗೆರೆ, ಮಂಡ್ಯ ಜಿಲ್ಲೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ದೊಡ್ಡ ಕೊಡುಗೆಯಾಗಲಿದೆ ಎಂದು ನಿಯೋಗದ ಸದಸ್ಯರು ಕೇಂದ್ರದ ಕಾರ್ಯ ಸ್ವರೂಪವನ್ನು ವಿವರಿಸಿದರು. ಮಾತ್ರವಲ್ಲ, ಟ್ರಸ್ಟ್ ಮಾಡುತ್ತಿರುವ ಸಾಮಾಜಿಕ ಕಾರ್ಯವನ್ನು ವಿವರಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಅವರು, ನೀವು ಮಾಡುವ ಒಳ್ಳೆಯ ಕಾರ್ಯಗಳಿಗೆ ನಿಮ್ಮ ಜತೆ ನಾವಿದ್ದೇವೆ. ಬೇಕಾದ ಎಲ್ಲ ಬೆಂಬಲ ನೀಡಲಿದ್ದೇವೆ. ಶೀಘ್ರದಲ್ಲೇ ಅಧಿಕಾರಿಗಳ ಸಭೆ ಕರೆದು ಸಂಬಂಧಪಟ್ಟ ವಿಷಯಗಳ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ಭರವಸೆ ನೀಡಿದರು.

ವಿಧಾನ ಪರಿಷತ್ ಶಾಸಕ ದಿನೇಶ ಗೂಳಿಗೌಡ, ಶಾಸಕರಾದ ರವಿಕುಮಾರ್ ಗಣಿಗ, ಬಾಬು ಬಂಡಿಸಿದ್ದೇಗೌಡ, ಅಮೆರಿಕದ ಅಕ್ಕ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಶಿವಮೂರ್ತಿ ಕಿಲಾರ ಮುಂತಾದವರು ನಿಯೋಗದಲ್ಲಿದ್ದು, ಸಿಎಂಗೆ ವಿವರಣೆ ನೀಡಿದರು.

ಅಮೆರಿಕದಿಂದ ಹಲ್ಲೆಗೆರೆಗೆ: ಅಮೆರಿಕ ಹಾಲಿ ಅಧ್ಯಕ್ಷ ಜೋ ಬೈಡನ್ ಅವರ ವೈದ್ಯಕೀಯ ಸಲಹೆಗಾರ ಡಾ. ವಿವೇಕ್ ಮೂರ್ತಿ ಅವರು ಭಾರತೀಯ ಮೂಲದವರು. ಡಾ. ವಿವೇಕ ಮೂರ್ತಿ ಅಮೆರಿಕದ ಹಿಂದಿನ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೂ ವೈದ್ಯಕೀಯ ಸಲಹೆಗಾರರಾಗಿದ್ದರು.

ಡಾ. ವಿವೇಕ್ ಮೂರ್ತಿ ಅವರ ತಂದೆ, ಅನಿವಾಸಿ ಭಾರತೀಯ ಡಾ. ಲಕ್ಷ್ಮಿನರಸಿಂಹ ಮೂರ್ತಿ ಅವರ ಸ್ವಂತ ಊರು ಮಂಡ್ಯ ಜಿಲ್ಲೆಯ ಹಲ್ಲೆಗೆರೆಯಾಗಿದ್ದು, ಇಲ್ಲಿ 13 ಎಕರೆ ಪಿತ್ರಾರ್ಜಿತ ಜಮೀನಿದೆ. ಅದರಲ್ಲಿ ಭೂತಾಯಿ ಟ್ರಸ್ಟ್ ನಿಂದ ಸುಮಾರು 80 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ‌ಮಟ್ಟದ ಯೋಗ ಮತ್ತು ಧ್ಯಾನ ಕೇಂದ್ರ ತೆರೆಯಲು ಯೋಜಿಸಿದ್ದಾರೆ. ಭೂತಾಯಿ ಟ್ರಸ್ಟ್ ನಿಂದ ಮೂರ್ತಿ ಕುಟುಂಬ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ.

ಟ್ರಸ್ಟ್​ನ ಕಾರ್ಯಗಳಿಗೆ ಮಂಡ್ಯ ಜಿಲ್ಲಾಡಳಿತ‌ ಸಂಪೂರ್ಣ ಸಹಕಾರ ನೀಡುತ್ತಿದೆ. ಈ ಟ್ರಸ್ಟ್​ಗೆ ಪರಿಷತ್​ ಸದಸ್ಯ ದಿನೇಶ ಗೂಳಿಗೌಡ ಅವರು ತಮ್ಮ‌ ಪ್ರದೇಶಾಭಿವೃದ್ಧಿ ನಿಧಿಯಿಂದ 10 ಲಕ್ಷ ರೂಪಾಯಿ ಅನುದಾನವನ್ನು ನೀಡುವುದಾಗಿ ಘೋಷಿಸಿದ್ದರು. ಇತ್ತೀಚೆಗೆ ಎಲ್ ಎ‌ನ್ ಮೂರ್ತಿ ಅವರಿಗೆ ವಿವಿಧ ಸಂಘ, ಸಂಸ್ಥೆಗಳಿಂದ ಸನ್ಮಾನ ಮಾಡಲಾಗಿತ್ತು.

ಇದನ್ನೂ ಓದಿ: ವಿಧಾನಸೌಧದ ಮುಂಭಾಗ ಯೋಗ ಪ್ರದರ್ಶನ, ರಾಜ್ಯಪಾಲರಿಂದ ಚಾಲನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.