ETV Bharat / state

ಚಿಕ್ಕ ಕೋಣೆಯಲ್ಲಿದ್ದ 9 ಜನರಿಗೆ ಕೊರೊನಾ ಪಾಸಿಟಿವ್, ವರದಿ ಪಡೆದು ಮುಂದಿನ ಕ್ರಮ: ಸುಧಾಕರ್

54 ವರ್ಷದ ವ್ಯಕ್ತಿಗೆ ತೀವ್ರ ಉಸಿರಾಟದ ಸಮಸ್ಯೆ ಇತ್ತು. ಕೊರೊನಾ ಪರೀಕ್ಷೆ ಮಾಡಿದಾಗ ವರದಿಯಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಅವರ ಸಂಪರ್ಕದಲ್ಲಿದ್ದ 9 ಜನ ಬಿಹಾರಿಗಳನ್ನ ತಪಾಸಣೆ ಮಾಡಲಾಗಿ, ಪಾಸಿಟಿವ್​ ವರದಿ ಬಂದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಶಿಕ್ಷಣ ಸಚಿವ ಡಾ.ಸುಧಾಕರ್
ಶಿಕ್ಷಣ ಸಚಿವ ಡಾ.ಸುಧಾಕರ್
author img

By

Published : Apr 23, 2020, 2:18 PM IST

Updated : Apr 23, 2020, 3:42 PM IST

ಬೆಂಗಳೂರು: ಇಂದು ಬೆಂಗಳೂರಿನಲ್ಲಿ‌ ಪತ್ತೆಯಾದ ಎಲ್ಲಾ 9 ಕೊರೊನಾ ಪಾಸಿಟಿವ್ ಪ್ರಕರಣ ಒಬ್ಬರಿಂದಲೇ ಬಂದಿದ್ದು, ಈ ಸಂಬಂಧ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಗಿ ಸಂಖ್ಯೆ 419 ರ 54 ವರ್ಷದ ವ್ಯಕ್ತಿಗೆ ತೀವ್ರ ಉಸಿರಾಟದ ಸಮಸ್ಯೆ ಇತ್ತು. ಕೊರೊನಾ ಪರೀಕ್ಷೆ ಮಾಡಿದಾಗ ವರದಿಯಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಅವರ ಸಂಪರ್ಕದಲ್ಲಿದ್ದ 9 ಜನ ಬಿಹಾರಿಗಳನ್ನ ತಪಾಸಣೆ ಮಾಡಲಾಗಿ, ಪಾಸಿಟಿವ್​ ವರದಿ ಬಂದಿದೆ ಎಂದು ಮಾಹಿತಿ ನೀಡಿದರು.

ಬೊಮ್ಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಅವರೆಲ್ಲಾ ಕೆಲಸ ಮಾಡುತ್ತಿದ್ದರು. ಅವರೆಲ್ಲರೂ ಚಿಕ್ಕಕೋಣೆಯಲ್ಲಿ ವಾಸವಾಗಿದ್ದರು. ಅವರೆಲ್ಲಾ ಎಷ್ಟು ಜನರನ್ನ ಭೇಟಿ ಮಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದರು.

Last Updated : Apr 23, 2020, 3:42 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.