ETV Bharat / state

ಶಿಕ್ಷಕರ ವರ್ಗಾವಣೆಗೆ ಕರಡು ನಿಯಮ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ - ಈಟಿವಿ ಭಾರತ ಕನ್ನಡ

ಶಿಕ್ಷಕರ ವರ್ಗಾವಣೆ ತಿದ್ದುಪಡಿ ಕಾಯ್ದೆ 2022 ಸಂಬಂಧ ಶಿಕ್ಷಣ ಇಲಾಖೆ ಕರಡು ನಿಯಮಾವಳಿ ಪ್ರಕಟಗೊಳಿಸಿದ್ದು, ಕರಡು ನಿಯಮಾವಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.

KN_BNG
ಶಿಕ್ಷಕರ ವರ್ಗಾವಣೆಗೆ ಕರಡು ನಿಯಮ ಪ್ರಕಟ
author img

By

Published : Nov 16, 2022, 7:58 PM IST

ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಇದ್ದ ಹಲವು ನಿರ್ಬಂಧಗಳಿಗೆ ಬ್ರೇಕ್ ಹಾಕಿರುವ ರಾಜ್ಯ ಸರ್ಕಾರ, ಶಿಕ್ಷಕರ ವರ್ಗಾವಣೆಗೆ ಕರಡು ನಿಯಮ ಪ್ರಕಟ ಮಾಡಿ ಆದೇಶ ಹೊರಡಿಸಿದೆ.

ಶಿಕ್ಷಕರ ವರ್ಗಾವಣೆ ತಿದ್ದುಪಡಿ ಕಾಯ್ದೆ 2022 ಸಂಬಂಧ ಶಿಕ್ಷಣ ಇಲಾಖೆ ಕರಡು ನಿಯಮಾವಳಿ ಪ್ರಕಟಗೊಳಿಸಿದ್ದು, ಕರಡು ನಿಯಮಾವಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆ-2020ಕ್ಕೆ ತಿದ್ದುಪಡಿ ಮಾಡಿ, ಸಚಿವ ಸಂಪುಟ ಸಭೆ ಅನುಮೋದನೆ ಪಡೆಯಲಾಗಿತ್ತು. ನಂತರ ಅಧಿವೇಶನದಲ್ಲಿ ಮಂಡಿಸಲಾಗಿತ್ತು.

ಈಗ ಕರಡು ಅಧಿಸೂಚನೆ ಹೊರಡಿಸಲಾಗಿದ್ದು, ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಿದ ದಿನದಿಂದ 15 ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದೆ. ಪರಸ್ಪರ ವರ್ಗಾವಣೆಗೆ ಒಂದು ಬಾರಿ ಮಾತ್ರ ಅವಕಾಶ ಇತ್ತು. ಇನ್ನು ಮುಂದೆ ಆ ನಿರ್ಬಂಧ ಇರುವುದಿಲ್ಲ. ಕೆಲಸಕ್ಕೆ ಸೇರಿದ ಮೊದಲ ಐದು ವರ್ಷ ಹಾಗೂ ನಿವೃತ್ತಿಗೆ ಮೊದಲಿನ ಐದು ವರ್ಷ ವರ್ಗಾವಣೆಗೆ ಅವಕಾಶ ಇರುವುದಿಲ್ಲ. ಆದರೆ, ಒಮ್ಮೆ ವರ್ಗಾವಣೆಯಾದ ಬಳಿಕ ಮತ್ತೆ ಮೂರು ವರ್ಷ ಅರ್ಜಿ ಸಲ್ಲಿಸುವಂತಿಲ್ಲ.

ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳು (377 ಜೆ ಅನ್ವಯ), ಮಲೆನಾಡು ವಲಯ ಹಾಗೂ ನಂಜುಂಡಪ್ಪ ವರದಿಯ ಅನ್ವಯ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶ ಎಂದು ಗುರುತಿಸಲಾಗಿರುವ ತಾಲೂಕುಗಳಿಗೆ ಹೋಗಲು ಬಯಸುವವರಿಗೆ ವಿಶೇಷ ಆದ್ಯತೆ ಸಿಗಲಿದೆ. ಸಾರ್ವತ್ರಿಕ ವರ್ಗಾವಣೆ ಒಟ್ಟು ವೃಂದ ಬಲದ ಶೇ 11ರಷ್ಟು ಮಿತಿ ಇರುತ್ತದೆ. ವಿಶೇಷ ಆದ್ಯತೆಯಡಿ ವರ್ಗಾವಣೆ ಬಯಸುವವರಿಗೆ ಈ ನಿಯಮ ಅನ್ವಯವಾಗದು. ಉಳಿದೆಲ್ಲ ನಿಯಮಗಳು ಮುಂದುವರಿಯಲಿವೆ.

ಯಾವುದೇ ಒಂದು ಘಟಕ ಹಾಗೂ ವೃಂದದಲ್ಲಿ ಕನಿಷ್ಠ 10 ವರ್ಷ ಅಥವಾ ಎಲ್ಲ ವೃಂದಗಳೂ ಸೇರಿ 15 ವರ್ಷ ಕೆಲಸ ಮಾಡಿದ ಶಿಕ್ಷಕರನ್ನು ಶೇ 25ರಷ್ಟು ಮಿತಿಯ ಒಳಗೆ ಖಾಲಿ ಹುದ್ದೆಗಳಿರುವ ತಾಲೂಕಿಗೆ ವರ್ಗಾವಣೆ ಮಾಡಲು ಅವಕಾಶ ಇರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಆದಾಯ ತೆರಿಗೆ ವಂಚನೆ ಆರೋಪ: ಆಸ್ಪತ್ರೆ, ಲ್ಯಾಬ್, ಡಯಾಗ್ನಸ್ಟಿಕ್ ಸೆಂಟರ್‌ಗಳ ಮೇಲೆ‌ ಐಟಿ ದಾಳಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.