ETV Bharat / state

CAA, NRC ಕುರಿತು ನಾಟಕ ಪ್ರದರ್ಶನ: ಬೀದರ್ ಶಾಲಾ ಮಂಡಳಿ ವಿರುದ್ಧದ ದೇಶದ್ರೋಹ ಪ್ರಕರಣ ರದ್ದು - High Court quashed the sedition case

ಸಿಎಎ ಹಾಗೂ ಎನ್ಆರ್​​ಸಿ ಬಗ್ಗೆ ಬೀದರ್ ಶಾಹೀನ್ ಶಾಲೆಯಲ್ಲಿ ನಾಟಕ ಪ್ರದರ್ಶನ ಮಾಡಿದ್ದ ಕುರಿತಂತೆ ಶಾಲಾ ಆಡಳಿತ ಮಂಡಳಿಯ ನಾಲ್ವರ ವಿರುದ್ಧ ದಾಖಲಿಸಿದ್ದ ದೇಶದ್ರೋಹ ಪ್ರಕರಣ ರದ್ದುಗೊಂಡಿದೆ.

drama-on-caa-nrc-high-court-quashed-the-sedition-case-against-bidar-school
CAA, NRC ಕುರಿತು ನಾಟಕ ಪ್ರದರ್ಶನ : ಬೀದರ್ ಶಾಲೆ ವಿರುದ್ಧದ ದೇಶದ್ರೋಹ ಪ್ರಕರಣ ರದ್ದು
author img

By

Published : Jun 14, 2023, 6:56 PM IST

Updated : Jul 7, 2023, 9:16 PM IST

ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ನಾಗರೀಕರ ನೋಂದಣಿ (ಎನ್ಆರ್​​ಸಿ) ಕುರಿತು ಬೀದರ್ ಶಾಹೀನ್ ಶಾಲೆಯ ಮಕ್ಕಳು ನಾಟಕ ಪ್ರದರ್ಶನ ಮಾಡಿದ್ದ ಕುರಿತಂತೆ ಶಾಲೆಯ ಆಡಳಿತ ಮಂಡಳಿಯ ನಾಲ್ವರ ವಿರುದ್ಧ ದಾಖಲಿಸಿದ್ದ ದೇಶದ್ರೋಹ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಶಾಹೀನ್ ಶಾಲೆಯ ಮುಖ್ಯಸ್ಥರಾದ ಅಲ್ಲಾವುದ್ದೀನ್, ಅಬ್ದುಲ್ ಖಾಲೀಕ್, ಮೊಹಮ್ಮದ್ ಬಿಲಾಲ್ ಇನಾಂದರ್ ಮತ್ತು ಮೊಹಮ್ಮದ್ ಮೆಹ್ತಾಬ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ಗೌಡರ್ ಅವರ ನೇತೃತ್ವದ ಏಕಸದಸ್ಯ ಪೀಠವು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಆದೇಶದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ. ಸಾಮಾಜಿಕ ಕಾರ್ಯಕರ್ತ ನೀಲೇಶ್ ರಕ್ಷ್ಯಾಲ್ ಎಂಬವರು ದಾಖಲಿಸಿದ್ದ ದೂರಿನ ಮೇರೆಗೆ ಬೀದರ್ ನ್ಯೂ ಟೌನ್ ಪೊಲೀಸ್​ ಠಾಣೆಯಲ್ಲಿ ಶಾಹೀನ್ ಶಾಲೆಯ ಆಡಳಿತ ಮಂಡಳಿಯ ನಾಲ್ವರು ಆರೋಪಿಗಳ ವಿರುದ್ಧ ದೇಶದ್ರೋಹದ ಆರೋಪದ ಅಡಿ ಪ್ರಕರಣ ದಾಖಲಿಸಲಾಗಿತ್ತು.

ಹೈಕೋರ್ಟ್ ಆದೇಶದಲ್ಲೇನಿದೆ: ಪ್ರಧಾನ ಮಂತ್ರಿಯ ವಿರುದ್ಧ ಶಾಹೀನ್ ಬಾಗ್ ಶಾಲೆಯ ಮಕ್ಕಳ ಹೇಳಿಕೆಗಳು ಅವಹೇಳನಾಕಾರಿ ಹಾಗೂ ಬೇಜಾವ್ದಾರಿಯಾಗಿದೆ. ಈ ರೀತಿಯ ಹೇಳಿಕೆಗಳನ್ನು ದೇಶದ್ರೋಹ ಎಂದು ಹೇಳಲಾಗದು. ಸರ್ಕಾರದ ನೀತಿಗಳನ್ನು ರಚನಾತ್ಮಕವಾಗಿ ಟೀಕಿಸುವುದಕ್ಕೆ ಅವಕಾಶವಿದೆ. ಆದರೆ, ನೀತಿ ನಿರ್ಧಾರಗಳನ್ನು ಕೈಗೊಳ್ಳವಂತಹ ಸಾಂವಿಧಾನಿಕ ಹುದ್ದೆಗಳನ್ನು ಅವಮಾನಿಸುವುದಕ್ಕೆ ಅವಕಾಶವಿಲ್ಲ.

ಪ್ರಕರಣದಲ್ಲಿ ಕೇಂದ್ರ ಸರ್ಕಾರ ಜಾರಿ ಮಾಡಿರುವ ವಿವಿಧ ಕಾಯಿದೆಗಳನ್ನು ಟೀಕಿಸಲಾಗಿದೆ. ಈ ಕಾಯಿದೆಗಳು ಜಾರಿಯಾದಲ್ಲಿ ಮುಸ್ಲೀಮರ ದೇಶವನ್ನು ತೊರೆಯಬೇಕಾಗುತ್ತದೆ ಎಂದು ಆರೋಪಿಸಲಾಗಿದೆ. ಆದರೆ, ಇದರಲ್ಲಿ ಹಿಂಸಾಚಾರ ಮತ್ತು ಸಾರ್ವಜನಿಕ ಆಸ್ವಸ್ಥತೆಗೆ ಪ್ರಚೊಧನೆ ನೀಡುವಂತಹ ಅಂಶಗಳಿಲ್ಲ. ಜೊತೆಗೆ, ಈ ನಾಟಕವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು, ಇದರಲ್ಲಿ ಸಾರ್ವಜನಿಕರನ್ನು ಪ್ರಚೋದನೆ ನೀಡಲಾಗಿದೆ ಎಂಬ ಅಂಶ ಹೇಳಲಾಗುವುದಿಲ್ಲ ಎಂದು ಪೀಠ ತಿಳಿಸಿದೆ.

ಶಾಲಾ ಆಡಳಿತ ಮಂಡಳಿಗೆ ಕಿವಿಮಾತು: ಮಕ್ಕಳಲ್ಲಿ ಶಿಕ್ಷಣ ಸಂಬಂಧಿಸಿದ ಸೃಜನಶೀಲ ವಿಷಯಗಳ ಕುರಿತ ಜ್ಞಾನ ಮತ್ತು ತಂತ್ರಜ್ಞಾನವನ್ನು ವೃದ್ಧಿಸುವಂತಹ ನಾಟಕಗಳ ಪ್ರದರ್ಶನಕ್ಕೆ ಅವಕಾಶ ನೀಡಬೇಕು. ಆದರೆ, ಸರ್ಕಾರವನ್ನು ಟೀಕಿಸುವುದಕ್ಕೆ ಅವಕಾಶ ನೀಡಬಾರದು. ವಿದ್ಯಾರ್ಥಿಯಾಗಿದ್ದಾಗಲೇ ಈ ರೀತಿಯಲ್ಲಿ ಟೀಕೆ ಮಾಡುವುದಕ್ಕೆ ಅವಕಾಶ ನೀಡಿದಲ್ಲಿ ಮಕ್ಕಳ ಮನಸ್ಸು ಕಲ್ಮಶವಾಗಲಿದೆ ಎಂದು ಪೀಠ ಸಲಹೆ ನೀಡಿದೆ.

ಪ್ರಕರಣದ ಹಿನ್ನೆಲೆ: ಬೀದರ್​ನ ಶಾಹೀನ್ ಶಾಲೆಯಲ್ಲಿ ಸಿಎಎ ಮತ್ತು ಎನ್ಆರ್​​ಸಿ ಸಂಬಂಧಿಸಿದಂತೆ 4, 5 ಮತ್ತು ಆರನೇ ತರಗತಿ ವಿದ್ಯಾರ್ಥಿಗಳಿಂದ ಪ್ರಸ್ತುತಪಡಿಸಲಾದ ನಾಟಕದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ನಿಂದಿಸುವ ಸಂಭಾಷಣೆ ಇತ್ತು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯ ನೀಲೇಶ್ ರಕ್ಷ್ಯಾಲ್ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಅಲ್ಲದೆ, ಸಂಸತ್​​ನಲ್ಲಿ ಒಪ್ಪಿಗೆ ಪಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಕ್ಕಳಲ್ಲಿ ತಪ್ಪು ಮಾಹಿತಿ ಬಿತ್ತಲು ಶಾಲಾ ಆಡಳಿತ ಮಂಡಳಿ ಸದಸ್ಯರು ಪ್ರಯತ್ನಿಸಿದ್ದಾರೆ. ಈ ಮೂಲಕ ಕೋಮು ಪ್ರಚೋದನೆಗೆ ನಾಂದಿ ಹಾಡಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿತ್ತು. ಪ್ರಕರಣದ ವಿಚಾರಣೆಯ ಹಂತದಲ್ಲಿರುವಾಗಲೇ ನಾಟಕದ ಭಾಗವಾಗಿ ಸಂಭಾಷಣೆ ಮಾಡಿದ್ದ ಶಾಲೆಯ ಮುಖ್ಯ ಶಿಕ್ಷಕಿ ಫರೀದಾ ಬೇಗಂ ಮತ್ತು ವಿದ್ಯಾರ್ಥಿಯೊಬ್ಬರ ತಾಯಿ ತಾಯಿ ನಜಬುನ್ನೀಸಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಪಮಾನಿಸಿದ್ದಾರೆ ಎಂದು ಬಂಧಿಸಲಾಗಿತ್ತು. ವಿಚಾರಣಾಧೀನ ನ್ಯಾಯಾಲಯವು ಅವರಿಗೆ 2020 ರ ಫೆಬ್ರವರಿ 14 ರಂದು ಜಾಮೀನು ಮಂಜೂರು ಮಾಡಿತ್ತು.

ಇದನ್ನೂ ಓದಿ : ಲಂಚ ಸ್ವೀಕಾರ ಆರೋಪ: ಕೆಪಿಟಿಸಿಎಲ್ ನೌಕರರ ವಿರುದ್ಧದ ವಿಚಾರಣೆ 2 ತಿಂಗಳಲ್ಲಿ ಪೂರ್ಣಗೊಳಿಸಲು ಹೈಕೋರ್ಟ್ ಸೂಚನೆ

ಸಿಎಎಗೆ ದೇಶಾದ್ಯಂತ ಪರ- ವಿರೋಧ: ದೇಶಾದ್ಯಂತ ಪರ- ವಿರೋಧ, ಪ್ರತಿಭಟನೆಗೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಂಸತ್ತು 2019ರ ಡಿಸೆಂಬರ್​​ 11ರಂದು ಅಂಗೀಕರಿಸಿತ್ತು. ಹಿಂದೂ, ಸಿಖ್, ಬೌದ್ಧ, ಜೈನ, ಪಾರ್ಸಿ, ಕ್ರಿಶ್ಚಿಯನ್ ಅಥವಾ ಯಾವುದೇ ಅಲ್ಪಸಂಖ್ಯಾತ ಗುಂಪಿಗೆ ಸೇರಿದವರು ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನದಿಂದ ಡಿಸೆಂಬರ್ 31, 2014 ರಂದು ಅಥವಾ ಮೊದಲು ಬಂದವರು ಈ ಕಾಯ್ದೆಯಿಂದ ವಿನಾಯಿತಿ ಪಡೆದಿದ್ದರು. ಸಂವಿಧಾನದ 6ನೇ ಪರಿಚ್ಛೇದದ ವ್ಯಾಪ್ತಿಯಲ್ಲಿ ಬರುವ ಅಂದರೆ, ಬುಡಕಟ್ಟು ಪ್ರಾಬಲ್ಯ ಹೊಂದಿರುವ ಸ್ವಾಯತ್ತ ಜಿಲ್ಲಾ ಮಂಡಳಿಗಳನ್ನು ಹೊಂದಿರುವ ಅಸ್ಸಾಂ, ಮೇಘಾಲಯ, ತ್ರಿಪುರ ಮತ್ತು ಮಿಜೋರಾಂಗಳಿಗೆ ಅನ್ವಯ ಆಗುವುದಿಲ್ಲ. ಸಿಎಎ ಕಾಯ್ದೆ ಜಾರಿಯಾದ ಬೆನ್ನಲ್ಲೇ ಅನೇಕ ರಾಜ್ಯಗಳಲ್ಲಿ ಪ್ರತಿಭಟನೆ ಕಾವೇರಿತ್ತು.

ಇದನ್ನೂ ಓದಿ : High Court News: ಸಾಕ್ಷ್ಯಾಧಾರಗಳಿಲ್ಲದೆ ದೂರು ದಾಖಲಿಸುವುದು ವ್ಯಕ್ತಿಯ ಜೀವನ, ಘನತೆ ಉಲ್ಲಂಘಿಸಿದಂತೆ- ಹೈಕೋರ್ಟ್

Last Updated : Jul 7, 2023, 9:16 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.