ETV Bharat / state

CM Siddaramaiah warns: ಕಲುಷಿತ ನೀರು ಸೇವಿಸಿ ಸಾವು: ಪ್ರಕರಣ ಮರುಕಳಿಸಿದರೆ ಜಿ.ಪಂ ಸಿಇಒ ಹೊಣೆ ಮಾಡಿ ಅಮಾನತ್ತಿಗೆ ಸೂಚಿಸಿ: ಸಿಎಂ ಎಚ್ಚರಿಕೆ - ಕಲುಷಿತ ನೀರು ಸೇವಿಸಿ ಸಾವು

ಕುಡಿಯುವ ನೀರಿನ ಸಮಸ್ಯೆ ಕುರಿತು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ನೀರಿನ ಸಮಸ್ಯೆ ಉದ್ಭವಿಸಿದ 24 ಗಂಟೆಯೊಳಗೆ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳೂ ಸಹ ಈ ಕುರಿತು ಮುನ್ನೆಚ್ಚರಿಕೆ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.

Chief Minister Siddaramaiah
ಮುಖ್ಯಮಂತ್ರಿ ಸಿದ್ದರಾಮಯ್ಯ
author img

By

Published : Jun 12, 2023, 4:34 PM IST

ಬೆಂಗಳೂರು: ರಾಜ್ಯದ 8 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಲಜೀವನ್‌ ಮಿಷನ್ ಯೋಜನೆಯ ಪ್ರಗತಿಯ ಕುರಿತಂತೆ ಮತ್ತು ಇಂದಿರಾ ಕ್ಯಾಂಟೀನ್‌ ನಿರ್ವಹಣೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಸಭೆಯ ಮುಖ್ಯಾಂಶ ಇಂತಿದ್ದು, ರಾಜ್ಯದ ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಲಾಯಿತು. ರಾಜ್ಯದಲ್ಲಿ ಮುಂಗಾರು ಜೂನ್‌ 10ರಂದು ಪ್ರಾರಂಭವಾಗಿದೆ. ಜೂನ್‌ 1ರಿಂದ 11ರವರೆಗಿನ ಮಾಹಿತಿ ಪ್ರಕಾರ ರಾಜ್ಯದ ವಾಡಿಕೆ ಮಳೆಗಿಂತ ಶೇ.67ರಷ್ಟು ಕೊರತೆ ಇದೆ. ಮುಂದಿನ ದಿನಗಳಲ್ಲಿ ಇದು ವಾಡಿಕೆಯಷ್ಟು ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ಕಳೆದ ಕೆಲವು ದಿನಗಳಲ್ಲಿ ಮಳೆಯ ಕೊರತೆಯಿಂದಾಗಿ ಕೆಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆಯಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

ರಾಜ್ಯದ 15 ಜಿಲ್ಲೆಗಳಲ್ಲಿ 322 ಗ್ರಾಮಗಳಲ್ಲಿ ಟ್ಯಾಂಕರ್‌ ಮೂಲಕ ಹಾಗೂ 148 ಗ್ರಾಮಗಳಲ್ಲಿ ಖಾಸಗಿ ಬೋರ್​ವೆಲ್‌ಗಳನ್ನು ಬಾಡಿಗೆಗೆ ಪಡೆದು ಕುಡಿಯುವ ನೀರು ಒದಗಿಸಲಾಗುತ್ತಿದೆ. ಪೂರ್ವ ಮುಂಗಾರು ಕೊರತೆಯ ಕಾರಣ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿತ್ತು. ಮುಂಗಾರು ಪ್ರಾರಂಭವಾಗಿರುವುದರಿಂದ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಬಗೆಹರಿಯುವ ನಿರೀಕ್ಷೆ ಇದೆ. ಅಲ್ಲದೆ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಕೊರತೆ ಇರದಿದ್ದರೂ ಕಲುಷಿತ ನೀರಿನ ಸಮಸ್ಯೆ ಉಂಟಾಗಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಇದರ ವರದಿಯನ್ನಾಧರಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ಜಿಪಂ ಸಿಇಒಗಳು ತಾಲ್ಲೂಕಿಗೆ ಭೇಟಿ ನೀಡಬೇಕು. ಪಿಡಿಒಗಳ ಕಾರ್ಯನಿರ್ವಹಣೆ ಬಗ್ಗೆ ನಿಗಾ ವಹಿಸಬೇಕು. ಜಲಜೀವನ್‌ ಮಿಷನ್‌ ಯೋಜನೆಯಡಿ ನೀರಿನ ಪೈಪ್‌ ಲೈನ್‌ ಅಳವಡಿಸಿರುವುದರ ಗುಣಮಟ್ಟ ಪರಿಶೀಲಿಸಿ. ಕೊಳವೆ ಒಡೆದುಹೋಗುವುದು ಮತ್ತಿತರ ಸಮಸ್ಯೆ ಉಂಟಾದರೆ ಕ್ರಮ ಕೈಗೊಳ್ಳಲು ಸೂಚಿಸಲಾಯಿತು.

ಅಧಿಕಾರಿಗಳಿಗೆ ಸೂಚನೆ: ಕುಡಿಯುವ ನೀರಿನ ಸಮಸ್ಯೆ ಕುರಿತು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ನೀರಿನ ಸಮಸ್ಯೆ ಉದ್ಭವಿಸಿದ 24 ಗಂಟೆಯೊಳಗೆ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳೂ ಸಹ ಈ ಕುರಿತು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಯಿತು.

ಯಾವುದೇ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವ ಆಗಿದ್ದರೆ, ಕೂಡಲೇ ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಆಡಳಿತಾತ್ಮಕ ವಿಚಾರಗಳಿಗೆ ವಿಳಂಬ ಧೋರಣೆ ಸರಿಯಲ್ಲ. ಈ ಕುರಿತು ಅಧಿಕಾರ ಪ್ರತ್ಯಾಯೋಜನೆ ಮಾಡುವ ಕುರಿತೂ ಚಿಂತನೆ ನಡೆಸಲು ಸೂಚನೆ ನೀಡಲಾಯಿತು. ಜಲಜೀವನ್‌ ಮಿಷನ್‌ ಮೂಲಕ ನೀರು ಒದಗಿಸಿದ ಗ್ರಾಮಗಳಲ್ಲಿ ಇಒ, ಎಂಜಿನಿಯರುಗಳು ತಪಾಸಣೆ ನಡೆಸಿ, ಪೈಪ್‌ ಲೈನ್​ಗಳನ್ನು ಪರಿಶೀಲಿಸಿ, ಸಮಸ್ಯೆಗಳಿದ್ದಲ್ಲಿ ಸರಿ ಪಡಿಸಬೇಕು. ಕಲುಷಿತ ನೀರು ಸೇವನೆ ಪ್ರಕರಣಗಳು ಮರುಕಳಿಸಬಾರದು ಎಂದು ಎಚ್ಚರಿಕೆ ನೀಡಲಾಯಿತು.

ಎಲ್ಲ ಜನರಿಗೂ ಶುದ್ಧ ಕುಡಿಯುವ ನೀರು ಒದಗಿಸುವುದು ನಿಮ್ಮ ಜವಾಬ್ದಾರಿ. ಅನುದಾನದ ಅಗತ್ಯವಿದ್ದರೆ ಒದಗಿಸಲಾಗುವುದು. ನೆಪ ಹೇಳಿ, ಜವಾಬ್ದಾರಿಯನ್ನು ಇನ್ನೊಬ್ಬರಿಗೆ ವಹಿಸಬೇಡಿ. ಕುಡಿಯುವ ನೀರಿನ ಸಮಸ್ಯೆ ಅತ್ಯಂತ ಸೂಕ್ಷ್ಮ ವಿಷಯ. ಮಳೆ ಬಂದು ಕುಡಿಯುವ ನೀರಿನ ಸಮಸ್ಯೆ ಬಗೆಹರಿದರೆ ಒಳ್ಳೆಯದು. ಇಲ್ಲವಾದರೆ, ಅಧಿಕಾರಿಗಳು ದಿನದ 24 ಗಂಟೆಯೂ ಜಾಗೃತರಾಗಿದ್ದು ನೀರಿನ ಸಮಸ್ಯೆ ಬಗೆಹರಿಸಬೇಕು. ಇದಕ್ಕಾಗಿ ನಿಮಗೆ ಒದಗಿಸಿದ ಸವಲತ್ತುಗಳನ್ನು ಬಳಸಿಕೊಂಡು ಕ್ರಮ ಕೈಗೊಳ್ಳಿ. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಂಪರ್ಕದಲ್ಲಿದ್ದು ನೀರಿನ ಸಮಸ್ಯೆ ಕುರಿತು ಸರಿಯಾದ ಮಾಹಿತಿ ಒದಗಿಸಬೇಕು. ಜಾನುವಾರುಗಳಿಗೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರ ವಹಿಸಬೇಕು. ಮುನ್ನೆಚ್ಚರಿಕೆ ಕ್ರಮಗಳಿಗೆ ಆದ್ಯತೆ. ಸಮಸ್ಯೆ ಬಗೆಹರಿಸಲು ಎಲ್ಲ ಬೆಂಬಲ ನೀಡಲಾಗುವುದು. ತಪ್ಪು ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.

ಜಲ ಜೀವನ್‌ ಮಿಷನ್‌ ಯೋಜನೆ: ರಾಜ್ಯದಲ್ಲಿ ಜಲ ಜೀವನ್‌ ಮಿಷನ್‌ ಯೋಜನೆಯ ಅನುಷ್ಠಾನ ಕುರಿತಂತೆ ಪರಿಶೀಲನೆ ನಡೆಸಲಾಯಿತು. ಈ ಯೋಜನೆಯಡಿ ಸುಸ್ಥಿರ ನೀರಿನ ಮೂಲ ಇರುವ ಯೋಜನೆಗಳನ್ನು ಗುರುತಿಸಿ, ಅವುಗಳನ್ನು ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸಲು ನಿರ್ಧರಿಸಲಾಯಿತು. ಈ ಯೋಜನೆ ಕಾಮಗಾರಿ ಹಾಗೂ ರಾಜ್ಯದಲ್ಲಿ ಅಳವಡಿಸಿರುವ ಆರ್​ಓ ಪ್ಲಾಂಟ್​ಗಳ ಕುರಿತು ಥರ್ಡ್‌ ಪಾರ್ಟಿ ಆಡಿಟ್‌ ನಡೆಸಲು ತೀರ್ಮಾನಿಸಲಾಯಿತು.

ಇಂದಿರಾ ಕ್ಯಾಂಟೀನ್: ಇಂದಿರಾ ಕ್ಯಾಂಟೀನ್​ಗಳಿಗೆ ಭೇಟಿ ನೀಡಿ, ಸುಸ್ಥಿತಿ ಮತ್ತು ಕಾರ್ಯನಿರ್ವಹಣೆ ಕುರಿತು ವರದಿ ಸಲ್ಲಿಸಲು ಸೂಚಿಸಲಾಯಿತು. ದುರಸ್ತಿ ಅಗತ್ಯ ಇರುವಲ್ಲಿ ಕೂಡಲೇ ಕ್ರಮ ಕೈಗೊಂಡು, ಸುಸ್ಥಿತಿಯಲ್ಲಿರಬೇಕು. ಆಹಾರದ ಗುಣಮಟ್ಟ ಕಾಯ್ದುಕೊಳ್ಳಬೇಕು. ನಿಗದಿ ಪಡಿಸಿದ ಮೆನುವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಹೊಸದಾಗಿ ಟೆಂಡರ್‌ ಪ್ರಕ್ರಿಯೆಯನ್ನು ವಿಕೇಂದ್ರೀಕರಣಗೊಳಿಸಿ 8 ವಲಯಗಳಲ್ಲಿ ಟೆಂಡರ್‌ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು. ಪಾರದರ್ಶಕತೆ ಕಾಯ್ದುಕೊಳ್ಳಲು ಸೂಚಿಸಲಾಯಿತು.

ಸ್ವಚ್ಛತೆ, ಗುಣಮಟ್ಟ ಹಾಗೂ ಪ್ರಮಾಣದಲ್ಲಿ ಯಾವುದೇ ರಾಜಿ ಮಾಡಬಾರದು. ಉತ್ತರ ಕರ್ನಾಟಕದಲ್ಲಿ ಸ್ಥಳೀಯ ಆಹಾರ ಒದಗಿಸಲು ಸೂಚನೆ ನೀಡಲಾಯಿತು. ಸಚಿವರು, ಶಾಸಕರನ್ನು ಉಪಾಹಾರ ಸ್ವೀಕರಿಸಲು ಆಹ್ವಾನಿಸಿ. ಗುಣಮಟ್ಟ ಕಾಪಾಡಲು ಅನುಕೂಲ. ಕಾಲೇಜು, ಆಸ್ಪತ್ರೆ, ಬಸ್‌ ನಿಲ್ದಾಣ, ತಾಲ್ಲೂಕು ಕಚೇರಿಗಳಂತಹ ಜನ ಸೇರುವ ಸ್ಥಳಗಳಲ್ಲಿ ಹೊಸ ಇಂದಿರಾ ಕ್ಯಾಂಟೀನ್‌ ಸ್ಥಾಪಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಯಿತು. ಬಿಬಿಎಂಪಿಗೆ ಸರ್ಕಾರದಿಂದ ಶೇ. 50 ಹಾಗೂ ಬಿಬಿಎಂಪಿಯಿಂದ ಶೇ. 50 ಅನುದಾನ ಭರಿಸಲು ತೀರ್ಮಾನಿಸಲಾಯಿತು. ಇತರ ನಗರ ಸ್ಥಳೀಯ ಸಂಸ್ಥೆಗಳಿಗೆ ಶೇ. 70 ಅನುದಾನ ಸರ್ಕಾರದಿಂದ ಹಾಗೂ ನಗರ ಸ್ಥಳೀಯ ಸಂಸ್ಥೇಯಿಂದ ಶೇ. 30 ರಷ್ಟು ಭರಿಸಲು ತೀರ್ಮಾನಿಸಲಾಯಿತು.

ಬಾಲ ಕಾರ್ಮಿಕರ ನೇಮಕಾತಿ ಶಿಕ್ಷಾರ್ಹ ಅಪರಾಧ-ಸಿಎಂ: ಬಾಲ ಕಾರ್ಮಿಕರ ನೇಮಕಾತಿ ಶಿಕ್ಷಾರ್ಹ ಅಪರಾಧವಾಗಿದ್ದು, ಈ ಕುರಿತು ಸಾರ್ವಜನಿಕರು, ಪೋಷಕರು ಹಾಗೂ ಉದ್ದಿಮೆದಾರರಿಗೆ ಈ ಕುರಿತ ಜಾಗೃತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯ ಅಂಗವಾಗಿ ಸೋಮವಾರ ಬೆಂಗಳೂರಿನ ಎಂ.ಜಿ ರಸ್ತೆಯ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಪೋಷಕರು, ಮಾತ್ರವಲ್ಲದೇ ಉದ್ಯಮ ನಡೆಸುವವರೂ ಈ ಬಗ್ಗೆ ಜಾಗೃತರಾಗಬೇಕು. ಈ ನಿಟ್ಟಿನಲ್ಲಿ ಪ್ರಮಾಣವಚನ ಬೋಧನೆ ಮಾಡಲಾಗಿದೆ. ಮಕ್ಕಳು ಕಲಿಯುವ ವಯಸ್ಸಿನಲ್ಲಿ ದುಡಿಮೆ ಮಾಡಿದರೆ ವಿದ್ಯಾಭ್ಯಾಸದಿಂದ ವಂಚಿತರಾಗುತ್ತಾರೆ. ಎಲ್ಲರೂ ವಿದ್ಯೆ ಕಲಿಯಬೇಕು ಅದು ಮೂಲಭೂತ ಹಕ್ಕು ಎಂದು ಸಂವಿಧಾನ ಹೇಳುತ್ತದೆ. 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ತೆಗೆದುಕೊಳ್ಳಬಾರದು. ಒಂದು ವೇಳೆ ಕೆಲಸಕ್ಕೆ ತೆಗೆದುಕೊಂಡರೆ ಅದು ಕಾನೂನಿಗೆ ವಿರುದ್ಧ. ಅವರ ಮೇಲೆ ಕಾನೂನಿನ ಕ್ರಮ ತೆಗೆದುಕೊಳ್ಳಬಹುದು. ಜಾಗೃತಿ ಮೂಡಿಸುವುದು ಹಾಗೂ ದುರುದ್ದೇಶದಿಂದ ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.

ಕಲುಷಿತ ನೀರಿನ ದುರಂತ: ಮರುಕಳಿಸಿದರೆ ಸಿಇಒ ಸಸ್ಪೆಂಡ್ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ಸಭೆ ನಡೆಸಿದರು. ಯಾವುದೇ ಕಾರಣಕ್ಕೂ ಶುದ್ಧ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಅಗತ್ಯ ಕ್ರಮ ವಹಿಸಲು ಸೂಚನೆಗಳನ್ನು ನೀಡಿದರು.

ಇದೇ ಸಂದರ್ಭ ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರಿನ ಅನಾಹುತ ಮರು ಕಳಿಸಿದರೆ ನೇರವಾಗಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಹೊಣೆ ಮಾಡಿ ಅಮಾನತ್ತುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದ ವೇಳೆ ಈ ಎಚ್ಚರಿಕೆ ನೀಡಿದರು. ಮೊದಲ ಅನಾಹುತ ಸಂಭವಿಸಿದಾಗಲೇ ಏಕೆ ಎಚ್ಚೆತ್ತುಕೊಳ್ಳಲಿಲ್ಲ? ಮತ್ತೆ ಘಟನೆ ಮರುಕಳಿಸಿದೆ. ನೀವು ಏನ್ ಮಾಡ್ತಾ ಇದೀರಿ? ಕಚೇರಿಯಲ್ಲಿ ಕುಳಿತು ಕೆಲಸ ಮಾಡಬಾರದು. ಸ್ಥಳಕ್ಕೆ ಭೇಟಿ ನೀಡಿ ಸಮಗ್ರವಾಗಿ ಅಧ್ಯಯನ ನಡೆಸಿ ಮತ್ತೆ ಕಲುಷಿತ ನೀರಿನ ಅನಾಹುತ ಆಗಬಾರದು. ಮತ್ತೆ ಮರುಕಳಿಸಿದರೆ ನೀವೇ ಹೊಣೆ ಆಗುತ್ತೀರಿ. ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ತನಿಖೆಗೆ ಆದೇಶ: ಕೊಪ್ಪಳ ಜಿಲ್ಲೆ ಸೇರಿ ಎಲ್ಲೆಲ್ಲಿ ಕಲುಷಿತ ನೀರು ಕುಡಿದು ಜನರ ಆರೋಗ್ಯ ಮತ್ತು ಜೀವಕ್ಕೆ ಸಮಸ್ಯೆ ಆಗಿದೆಯೊ ಆ ಬಗ್ಗೆ ತನಿಖೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು. ಈಗಾಗಲೇ ಸ್ಥಳೀಯವಾಗಿ ತನಿಖೆ ನಡೆಯುತ್ತಿದೆ. ಬೆಂಗಳೂರು ಕೇಂದ್ರದಿಂದಲೂ ತಂಡವನ್ನು ಕಳುಹಿಸಿ ತನಿಖೆ ನಡೆಸಲಾಗುವುದು. ಎರಡೂ ವರದಿಗಳು ಬಂದ ಬಳಿಕ ತಪ್ಪಿತಸ್ಥರನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಕಾರ್ಯದರ್ಶಿಗಳು ಮುಖ್ಯಮಂತ್ರಿಗಳಿಗೆ ತಿಳಿಸಿದರು. ಸಭೆಯಲ್ಲಿ ಸಚಿವರಾದ ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ರಹಿಂ ಖಾನ್ ಉಪಸ್ಥಿತರಿದ್ದರು.

ಇದನ್ನೂ ಓದಿ: D K Shivakumar: ಅಲೆಮಾರಿ ಜನಾಂಗದ ಸ್ಥಿತಿಗತಿ ಅಧ್ಯಯನಕ್ಕೆ ಆಯೋಗ ರಚನೆ: ಡಿಸಿಎಂ ಡಿಕೆ ಶಿವಕುಮಾರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.