ಬೆಂಗಳೂರು: ಚಾಲನೆ ವೇಳೆ ಡ್ರೈವರ್ಗೆ ಎದೆನೋವು ಕಾಣಿಸಿಕೊಂಡ ಪರಿಣಾಮ ನಿಯಂತ್ರಣ ತಪ್ಪಿ ಪಾದಚಾರಿ ಮಾರ್ಗದ ಮೇಲೆ ಬಸ್ ಹತ್ತಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ.
ಇಂದು ಸಂಜೆ 7.50ರ ಸುಮಾರಿಗೆ ನಾಗವಾರ ಹೆಣ್ಣೂರು ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ. ಬಸ್ ಚಾಲನೆ ಮಾಡುವಾಗ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ನೋವು ತಾಳಲಾರದೆ ಚಾಲಕ ಪುಟ್ಪಾತ್ ಮೇಲೆ ಬಸ್ ಹರಿಸಿದ್ದಾನೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಬಸ್ನಲ್ಲಿ ಕೇವಲ ನಾಲ್ಕು ಮಂದಿ ಮಾತ್ರ ಪ್ರಯಾಣಿಸುತ್ತಿದ್ದರು. ಮಾಹಿತಿ ಆಧರಿಸಿ ಸ್ಥಳಕ್ಕೆ ಬಾಣಸವಾಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯರ ಸಹಾಯದಿಂದ ಚಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಓದಿ: ಬೆಂಗಳೂರಲ್ಲಿ ಅಬ್ಬರಿಸುತ್ತಿದೆ ಕೋವಿಡ್: ಅಗತ್ಯಬಿದ್ರೆ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ..