ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಡ್ರೈವರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಈ ನೇಮಕಾತಿ ನಡೆಯಲಿದೆ. ಈ ಹುದ್ದೆಗಳನ್ನು ನಿಯೋಜನೆ ಆಧಾರದ ಮೇಲೆ ಭರ್ತಿ ಮಾಡಲಾಗುವುದು. ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಸೆಪ್ಟೆಂಬರ್ 15 ಆಗಿದೆ.
ಹುದ್ದೆ ವಿವರ: ರಾಜ್ಯದ ವಿವಿಧ ಜಿಲ್ಲೆಯಲ್ಲಿ ಖಾಲಿ ಇರುವ ಒಟ್ಟು 28 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಚಿಕ್ಕೋಡಿಯಲ್ಲಿ 1, ಕಲಬುರ್ಗಿ 1, ಧಾರವಾಡ 1, ಗದಗ 1, ಕಾರವಾರ 1, ಎಂಎಂಎಸ್ ಬೆಂಗಳೂರು 15, ಮಂಡ್ಯ 1, ಮೈಸೂರು 3, ಪುತ್ತೂರು 1, ಶಿವಮೊಗ್ಗ 1, ಉಡುಪಿ 1, ಕೋಲಾರದಲ್ಲಿ 1 ಹುದ್ದೆಗಳ ಭರ್ತಿ ನಡೆಯಲಿದೆ.
ವಿದ್ಯಾರ್ಹತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಪೂರ್ಣಗೊಳಿಸಿರಬೇಕು. ಹಗರು ಮತ್ತು ಭಾರಿ ವಾಹನಗಳ ಚಾಲನೆ ಪರವಾನಗಿ ಪ್ರಮಾಣ ಪತ್ರ ಹೊಂದಿರಬೇಕು. ಮೋಟಾರು ಮೆಕಾನಿಸಮ್ ಬಗ್ಗೆ ಜ್ಞಾನವನ್ನು ಹೊಂದಿರಬೇಕು. ಕನಿಷ್ಠ 3 ವರ್ಷ ಹಗುರ ಮತ್ತು ಭಾರಿ ವಾಹನಗಳ ಚಾಲನೆ ಅನುಭವ ಹೊಂದಿರಬೇಕು.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯೋಮಿತಿ 56 ವರ್ಷಗಳನ್ನು ಮೀರಿರಬಾರದು.
ಆಯ್ಕೆ: ಅಭ್ಯರ್ಥಿಗಳ ವಾಹನ ಚಾಲನಾ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು. ಈ ಹುದ್ದೆಗಳಿಗೆ ಮಾಸಿಕ 19,900- 63,200 ವೇತನವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಯನ್ನು ನಿಯೋಜನೆ ಆಧಾರದ ಮೇಲೆ ನಡೆಸಲಾಗುತ್ತಿದೆ. ಬೇರೆ ಇಲಾಖೆ ಅಥವಾ ಸಚಿವಾಲಯದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ನೌಕರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳುನ್ನು ಮರು ನೇಮಕಾತಿ ನಡೆಸಲಾಗುವುದು. ಅವರಿಗೆ ಎರಡು ವರ್ಷ ಪ್ರೊಬೇಷನರಿ ಅವಧಿ ನೀಡಲಾಗಿದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಗತ್ಯ ದಾಖಲಾತಿ ಮತ್ತು ಪ್ರಮಾಣ ಪತ್ರದೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆ ವಿಳಾಸ
ದಿ ಮ್ಯಾನೇಜರ್ ಮೇಲ್ ಮೋಟರ್ ಸರ್ವಿಸ್, ಬೆಂಗಳೂರು -560001
ಈ ಹುದ್ದೆಗೆ ಅಭ್ಯರ್ಥಿಗಳು ಆಗಸ್ಟ್ 8ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 15 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ವೀಕ್ಷಣೆಗೆ indiapost.gov.in ಈ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: Jobs in Davanagere: ದಾವಣಗೆರೆ ಜಿಲ್ಲಾ ಪಂಚಾಯತ್ನಲ್ಲಿವೆ ವಿವಿಧ ಹುದ್ದೆ.. ಬೇಗ ಅರ್ಜಿ ಸಲ್ಲಿಸಿ