ಬೆಂಗಳೂರು: ವಶಕ್ಕೆ ಪಡೆಯಲು ಬಂದಿದ್ದ ಪಿಎಸ್ಐಗೆ ರಿವಾಲ್ವರ್ ತೋರಿಸಿ ಪರಾರಿಯಾಗಿದ್ದ ಮಾದಕ ಸರಬರಾಜುಗಾರನನ್ನು ಎಚ್ಎಸ್ಆರ್ ಲೇಔಟ್ ಹಾಗೂ ಕೇರಳ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಕೇರಳ ಮೂಲದ ಜಾಫರ್ ಬಂಧಿತ ಆರೋಪಿ.
ಕೇರಳದ ಕುರತಿಕಾಡ್ ಠಾಣೆಯಲ್ಲಿ ದಾಖಲಾಗಿದ್ದ ಎನ್.ಡಿ.ಪಿ.ಎಸ್ ಪ್ರಕರಣದ ಆರೋಪಿಯಾಗಿದ್ದ ಜಾಫರ್ನನ್ನು ಅಲ್ಲಿನ ಪೊಲೀಸರು ವಶಕ್ಕೆ ಪಡೆಯಲು ಬಂದಿದ್ದ ಆಗಸ್ಟ್ 24ರ ರಾತ್ರಿ ಆರೋಪಿ ಎಚ್ಎಸ್ಆರ್ ಲೇಔಟ್ ವ್ಯಾಪ್ತಿಯಲ್ಲಿದ್ದ. ಈ ವೇಳೆ ಪಿಎಸ್ಐ ಸುನುಮಾನ್ ಅವರಿಗೆ ರಿವಾಲ್ವಾರ್ ತೋರಿಸಿ ಆರೋಪಿ ತನ್ನ ಸಹಚರನೊಂದಿಗೆ ಕಾರಿನಲ್ಲಿ ಎಸ್ಕೇಪ್ ಆಗುವಲ್ಲಿ ಯಶಸ್ವಿಯಾಗಿದ್ದ.
ಘಟನೆ ಸಂಬಂಧ ಕುರತಿಕಾಡ್ ಠಾಣಾ ಪಿಎಸ್ಐ ಸುನುಮಾನ್ ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಶಸ್ತ್ರಾಸ್ತ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಕೇರಳ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿದ ಎಚ್ಎಸ್ಆರ್ ಲೇಔಟ್ ಪೊಲೀಸರು ಕೋಲಾರ ಬಳಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ಮಧ್ಯಪ್ರದೇಶದಿಂದ ಕಲಬುರಗಿಗೆ ನಾಡ ಪಿಸ್ತೂಲ್ ಪೂರೈಕೆ: ಮಧ್ಯವರ್ತಿ ಸೇರಿ ಇಬ್ಬರ ಬಂಧನ