ETV Bharat / state

ಡ್ರಗ್ಸ್ ಪ್ರಕರಣ; ಬಿನೀಶ್ ಕೊಡಿಯೇರಿಗೆ ನ್ಯಾಯಾಂಗ ಬಂಧನ - Bineesh Kodiyeri latest news

ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿರುವ ಕುರಿತು ಹೆಚ್ಚಿನ ತನಿಖೆ ನಡೆಸಲು ಎನ್​ಸಿಬಿ ಅಧಿಕಾರಿಗಳು ಆರೋಪಿ ಬಿನೀಶ್​ನನ್ನು ಮೂೂರು ದಿನಗಳ ಕಾಲ ವಶಕ್ಕೆ ಪಡೆದಿದ್ದರು. ಕಸ್ಟಡಿ ಅವಧಿ ಮುಗಿದ ಬಳಿಕ ಆರೋಪಿಯನ್ನು ಇಂದು ನಗರದ ಎನ್​ಡಿಪಿಎಸ್​ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Drugs case; Bineesh Kodiyeri remanded to judicial custody
ಬಿನೀಶ್ ಕೊಡಿಯೇರಿ
author img

By

Published : Nov 20, 2020, 8:47 PM IST

ಬೆಂಗಳೂರು : ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿರುವ ಮತ್ತು ಹವಾಲಾ ಮೂಲಕ ಹಣ ಸಾಗಿಸಿರುವ ಆರೋಪದಡಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್​ನನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಡ್ರಗ್ಸ್ ಜಾಲದ ಪ್ರಮುಖ ಆರೋಪಿ ಅನೂಪ್ ಜೊತೆಗೆ ವ್ಯವಹಾರ ಇಟ್ಟುಕೊಂಡಿದ್ದು ಹಾಗೂ ಹವಾಲಾ ಮೂಲಕ ಹಣ ಸಾಗಣೆ ಮಾಡಿದ್ದ ಆರೋಪದಡಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿನೀಶ್​ನನ್ನು ಬಂಧಿಸಿದ್ದರು. ಸಾಕಷ್ಟು ವಿಚಾರಣೆ ನಡೆಸಿದ ಬಳಿಕ ಇಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿರುವ ಕುರಿತು ಹೆಚ್ಚಿನ ತನಿಖೆ ನಡೆಸಲು ಎನ್​ಸಿಬಿ ಅಧಿಕಾರಿಗಳು ಆರೋಪಿ ಬಿನೀಶ್​ನನ್ನು ಮೂೂರು ದಿನಗಳ ಕಾಲ ವಶಕ್ಕೆ ಪಡೆದಿದ್ದರು. ಕಸ್ಟಡಿ ಅವಧಿ ಮುಗಿದ ಬಳಿಕ ಆರೋಪಿಯನ್ನು ಇಂದು ನಗರದ ಎನ್​ಡಿಪಿಎಸ್​ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.