ETV Bharat / state

ಮದ್ಯದ ಅಮಲಿನಲ್ಲಿ ಐವರಿಗೆ ಡಿಕ್ಕಿ.. ಬೆಂಗಳೂರಲ್ಲಿ ನಿವೃತ್ತ ಯೋಧ ಸಾವು - ಪಾದಚಾರಿ ಮಾರ್ಗದ ಮೇಲೆ ಕಾರು ಹತ್ತಿಸಿ

ನಿವೃತ್ತ ಯೋಧ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತದ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Drunk man rams car into eatery  kills retired soldier in Bengaluru  deadly accident video viral  accident captured in cctv  ಮದ್ಯದ ಅಮಲಿನಲ್ಲಿ ಐವರಿಗೆ ಡಿಕ್ಕಿ  ನಿವೃತ್ತ ಯೋಧ ಸಾವು  ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ  ನಿವೃತ್ತ ಯೋಧ ಮೃತಪಟ್ಟ ಪ್ರಕರಣ  ಅಪಘಾತದ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆ  ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿ ಡಿಕ್ಕಿ  ಅಪಘಾತದಲ್ಲಿ ಗಂಭೀರವಾಗಿ ಗಾಯ  ಪಾದಚಾರಿ ಮಾರ್ಗದ ಮೇಲೆ ಕಾರು ಹತ್ತಿಸಿ  ರವಿಶಂಕರ್ ರಾವ್ ಸೇರಿ ಐವರಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಐವರಿಗೆ ಡಿಕ್ಕಿ
author img

By

Published : Oct 12, 2022, 1:52 PM IST

Updated : Oct 12, 2022, 2:43 PM IST

ಬೆಂಗಳೂರು: ಚಾಲಕನೊಬ್ಬ ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿ ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಯೋಧರೊಬ್ಬರು ಮೃತಪಟ್ಟಿದ್ದಾರೆ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೆಬ್ಬಾಳ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ಕೊಡಿಗೇಹಳ್ಳಿಯ ವಿರುಪಾಕ್ಷಾಪುರ ನಿವಾಸಿ ರವಿಶಂಕರ್ ರಾವ್ ಮೃತಪಟ್ಟಿದ್ದರು. ಘಟನೆಯಲ್ಲಿ ಅವರ ಸ್ನೇಹಿತರಾದ ಮಂಜುನಾಥ್, ನವೀನ್ ಹಾಗೂ ಹೋಟೆಲ್ ಸಿಬ್ಬಂದಿ ರಾಘವೇಂದ್ರ ಸೇರಿ ನಾಲ್ವರಿಗೆ ಗಾಯವಾಗಿತ್ತು.

ಅಪಘಾತದ ಸಿಸಿಟಿವಿ ವಿಡಿಯೋ

ನಿವೃತ್ತ ಯೋಧರಾಗಿರುವ ರವಿಶಂಕರ್‌ ರಾವ್, ಖಾಸಗಿ ಸೆಕ್ಯೂರಿಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ರಾತ್ರಿ ಕೆಲಸ ಮುಗಿಸಿಕೊಂಡು ಮಂಜುನಾಥ್, ನವೀನ್ ಜತೆ ಮನೆಗೆ ಹೋಗುತ್ತಿದ್ದರು. ದಾರಿ ಮಧ್ಯೆ ಕೊಡಿಗೇಹಳ್ಳಿ ಮುಖ್ಯರಸ್ತೆಯಲ್ಲಿ ಊಟ ಪಾರ್ಸೆಲ್ ತೆಗೆದುಕೊಂಡು ಹೋಗಲು ಪಾದಚಾರಿ ಮಾರ್ಗದಲ್ಲಿ ನಿಂತಿದ್ದರು. ಈ ವೇಳೆ ಕೊಡಿಗೇಹಳ್ಳಿ ಕಡೆಯಿಂದ ವೇಗವಾಗಿ ಬಂದ ಕಾರು ಚಾಲಕ ಏಕಾಏಕಿ ಪಾದಚಾರಿ ಮಾರ್ಗದ ಮೇಲೆ ಕಾರು ಹತ್ತಿಸಿ, ರವಿಶಂಕರ್ ರಾವ್ ಸೇರಿ ಐವರಿಗೆ ಡಿಕ್ಕಿ ಹೊಡೆದಿದ್ದಾನೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರವಿಶಂಕರ್ ರಾವ್ ಮೃತಪಟ್ಟಿದ್ದಾರೆ. ಇತರರಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಕಾರು ಚಾಲಕ ಕೂಡ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಹೆಬ್ಬಾಳ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಓದಿ: ಕಾರು ಪಲ್ಟಿ: ಯರಗಟ್ಟಿ ಮುನವಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸೇರಿ ಇಬ್ಬರ ಸಾವು

Last Updated : Oct 12, 2022, 2:43 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.