ಬೆಂಗಳೂರು: ಕುಡಿದ ಅಮಲಿನಲ್ಲಿ ವಾಹನ ಚಾಲಕನೋರ್ವ ಮೂರು ತರಕಾರಿ ಗಾಡಿಗಳಿಗೆ ಗುದ್ದಿದ ಘಟನೆ ನಗರದ ವಿದ್ಯಾರಣ್ಯಪುರದ ಸಂಭ್ರಮ ಕಾಲೇಜು ಬಳಿ ನಡೆದಿದೆ.
ವಾಹನ ಚಾಲಕ ಕಂಠಪೂರ್ತಿ ಮದ್ಯ ಕುಡಿದು ಅಡ್ಡಾದಿಡ್ಡಿ ವಾಹನ ಚಲಾಯಿಸುತ್ತಿದ್ದನು. ಈ ವೇಳೆ ಎದುರಿಗೆ ಬರುತ್ತಿದ್ದ ತರಕಾರಿ ಗಾಡಿಗಳಿಗೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದ್ದಾನೆ. ಘಟನೆ ಬಳಿಕ ವಾಹನ ಚಾಲಕ ಪರಾರಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಜಾಲಹಳ್ಳಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಓದಿ: ವೀರಶೈವ-ಲಿಂಗಾಯತ ಒಂದೇ ಧರ್ಮವಾಗಿ ಉಳಿಬೇಕು: ಸಚಿವ ಮುರುಗೇಶ್ ನಿರಾಣಿ