ETV Bharat / state

ಕುಡಿದ ನಶೆಯಲ್ಲಿ ಗಲಾಟೆ: ಸ್ನೇಹಿತರಿಬ್ಬರ ಜಗಳ ಕೊಲೆಯಲ್ಲಿ ಅಂತ್ಯ

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರಿಬ್ಬರ‌ ಗಲಾಟೆ, ಕಲ್ಲಿನಿಂದ ಹೊಡೆದು ಸ್ನೇಹಿತನ ಕೊಲೆ, ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು.

investigation by Govindarajanagar police
ಗೋವಿಂದರಾಜನಗರ ಠಾಣೆಯ ಪೊಲೀಸ್​ರಿಂದ ತನಿಖೆ
author img

By

Published : Mar 24, 2023, 9:50 PM IST

ಬೆಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ಸ್ನೇಹಿತರಿಬ್ಬರ‌ ನಡುವೆ ನಡೆದ ಸಣ್ಣ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಗೋವಿಂದರಾಜನಗರದ ನಿವಾಸಿ ನರೇಶ್ ಹತ್ಯೆಯಾಗಿರುವ ಸ್ನೇಹಿತ. ಮಾರಿಮುತ್ತು ಎಂಬ ಆರೋಪಿ ಕಲ್ಲಿನಿಂದ ತಲೆಗೆ ಹೊಡೆದು ಪರಾರಿಯಾಗಿದ್ದಾನೆ. ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿರುವ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ‌.

ವಿವಾಹಿತರಾಗಿದ್ದ ನರೇಶ್, ತಾಯಿ-ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು. ಗಂಡ-ಹೆಂಡತಿ ಇಬ್ಬರು ಗಾರೆ ಕೆಲಸ‌ ಮಾಡಿಕೊಂಡಿದ್ದರು‌. ಇಂದು ಕೆಲಸ‌‌ ಇಲ್ಲದಿದ್ದರಿಂದ ನಾಗರಭಾವಿ ಮುಖ್ಯರಸ್ತೆಯಲ್ಲಿರುವ ಬಾರ್​ವೊಂದಕ್ಕೆ‌ ಕುಡಿಯಲು ಬಂದಿದ್ದನು.‌ ಈತನೊಂದಿಗೆ ಆರೋಪಿತ ಮಾರಿಮುತ್ತು ಹಾಗೂ ಇನ್ನಿತ ಸ್ನೇಹಿತರು‌ ಒಟ್ಟಿಗೆ ಮದ್ಯಪಾನ ಮಾಡಿ ಹೊರಬಂದಿದ್ದರು.

ಕ್ಷುಲ್ಲಕ ಕಾರಣಕ್ಕಾಗಿ ನರೇಶ್ ಹಾಗೂ ಸ್ನೇಹಿತರ ನಡುವೆ ಮಾತಿನ ಚಕಮಕಿಗೆ ಉಂಟಾಗಿದೆ‌‌. ನೋಡ-ನೋಡುತ್ತಿದ್ದಂತೆ ಗಲಾಟೆ ಶುರುವಾಗಿದೆ. ಮಾರಿಮುತ್ತು ಫುಟ್​ಪಾತ್ ಮೇಲಿದ್ದ ಕಲ್ಲನ್ನು ನರೇಶ್ ತಲೆ ಮೇಲೆ ಎತ್ತಿ ಹಾಕಿದ್ದಾನೆ. ಪೆಟ್ಟು ಹೆಚ್ಚಾಗಿದ್ದರಿಂದ ರಕ್ತಸ್ರಾವ ಉಂಟಾಗಿ ಕುಸಿದುಬಿದ್ದು ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.‌ ಕೃತ್ಯವೆಸಗಿದ ಬಳಿಕ ಆರೋಪಿಗಳು ಎಸ್ಕೇಪ್ ಆಗಿದ್ದಾರೆ‌. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರ ಪತ್ನಿ ಮಹಾದೇವಿ ಎಂಬುವರು ನೀಡಿದ ದೂರಿನ ಮೇರೆಗೆ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ‌ ಎಂದು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ಮಾಹಿತಿ ನೀಡಿದ್ದಾರೆ‌.

ಖಾರದ ಪುಡಿ ಎರಚಿ ಯುವಕನ ಕೊಲೆ: ಯುವಕನೊಬ್ಬನಿಗೆ ಖಾರದ ಪುಡಿ ಎರಚಿ ಆತನ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ ಮಾಡಿರುವ ಘಟನೆ ಗುರುವಾರ ದಾವಣಗೆರೆ ನಗರದಲ್ಲಿ ನಡೆದಿದೆ. 25 ರಿಂದ 30 ವರ್ಷದೊಳಗಿನ ಯುವಕನನ್ನು ಹತ್ಯೆ ಮಾಡಲಾಗಿದ್ದು, ಈ ಘಟನೆ ದಾವಣಗೆರೆ ನಗರದ ಶಾಮನೂರು ರಸ್ತೆಯ ಬಾರ್​ವೊಂದರ ಸಮೀಪ ನಡೆದಿದೆ. ಯುವಕನ ಜೇಬಿನಲ್ಲಿ ಬೆಂಗಳೂರಿನಿಂದ ದಾವಣಗೆರೆಗೆ ಬಂದ ರೈಲು ಟಿಕೆಟ್ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶವವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಈ ಘಟನೆ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿದ್ಯಾನಗರ ಪೊಲೀಸರು ಕೊಲೆಯ ಆರೋಪಿಗಳನ್ನು ಪತ್ತೆ ಹಚ್ಚಲು ದಾವಣಗೆರೆ ನಗರದ ಶಾಮನೂರು ರಸ್ತೆಯಲ್ಲಿರುವ ಎಲ್ಲಾ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ‌.

ಖಾರದ ಪುಡಿ ಎರಚಿ ಹಲ್ಲೆ ಮಾಡಿ ಕೊಲೆ: ಮೃತ ಅಪರಿಚಿತ ವ್ಯಕ್ತಿಗೆ ದುಷ್ಕರ್ಮಿಗಳು ಮೊದಲಿಗೆ ಖಾರದ ಪುಡಿ ಎರಚಿ ಕತ್ತು ಕೊಯ್ದು, ಬಳಿಕ ತಲೆಯ ಭಾಗಕ್ಕೆ ಕಲ್ಲು ಎತ್ತಿ ಹಾಕಿ ಈ ಹತ್ಯೆ ಮಾಡಿದ್ದಾರೆ. ಕೊಲೆ ಮಾಡಿ ನಂತರ ನಗರದ ಶಾಮನೂರ ರಸ್ತೆಯ ಇಕ್ಕೆಲದಲ್ಲಿ ಮೃತದೇಹವನ್ನು ಬಿಟ್ಟು ಪರಾರಿಯಾಗಿದ್ದಾರೆ.

ಇದನ್ನೂಓದಿ:ಎರಡು ಬೈಕ್​ ನಡುವೆ ಡಿಕ್ಕಿ: ಇಬ್ಬರು ಸಾವು, ಇನ್ನೋರ್ವ ಗಂಭೀರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.