ETV Bharat / state

ಪೂರ್ವನಿಗದಿತ ಕಾರ್ಯಕ್ರಮದಿಂದಾಗಿ ಮಹಾಸಭಾ ಅಧಿವೇಶನಕ್ಕೆ ಹೋಗಲಿಲ್ಲ: ಎಂ ಬಿ ಪಾಟೀಲ್​ ಸ್ಪಷ್ಟನೆ - ಸಚಿವ ಎಂ ಬಿ ಪಾಟೀಲ್

ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ ವೀರಶೈವ ಮಹಾಸಭಾದ ಅಧಿವೇಶನದಲ್ಲಿ ಸಚಿವ ಎಂ ಬಿ ಪಾಟೀಲ್​ ಭಾಗವಹಿಸದೇ ಇರುವುದಕ್ಕೆ ಸ್ಪಷ್ಟನೆ ನೀಡಿದ್ದಾರೆ.

Minister M B Patil
ಸಚಿವ ಎಂ ಬಿ ಪಾಟೀಲ್
author img

By ETV Bharat Karnataka Team

Published : Dec 26, 2023, 12:26 PM IST

ಬೆಂಗಳೂರು: ಕೆಎಲ್ಇ ಸೊಸೈಟಿ ಅಧ್ಯಕ್ಷ ಪ್ರಭಾಕರ ಕೋರೆ ಅವರ 50ನೇ ವಿವಾಹ ವಾರ್ಷಿಕೋತ್ಸವ ಮತ್ತು ವಿಜಯಪುರದಲ್ಲಿ ತಮ್ಮ‌ ನೇತೃತ್ವದಲ್ಲಿ ವೃಕ್ಷಥಾನ್ ಹೆರಿಟೇಜ್ ರನ್ ಕಾರ್ಯಕ್ರಮಗಳು ಪೂರ್ವ ನಿಗದಿತವಾಗಿದ್ದವು. ಹೀಗಾಗಿ, ದಾವಣಗೆರೆಯಲ್ಲಿ ನಡೆದ ವೀರಶೈವ ಲಿಂಗಾಯತ ಮಹಾಸಭಾದ ಅಧಿವೇಶನದಲ್ಲಿ ಖುದ್ದಾಗಿ ಭಾಗವಹಿಸಲು ಆಗಲಿಲ್ಲ. ಆದರೆ, ಅಧಿವೇಶನಕ್ಕೆ ಸಂದೇಶ ಕಳುಹಿಸಿ‌ಕೊಟ್ಟಿದ್ದೆ ಎಂದು ಸಚಿವ ಎಂ.ಬಿ.ಪಾಟೀಲ್​ ಮಂಗಳವಾರ ಹೇಳಿದ್ದಾರೆ.

ತಮ್ಮ‌ ನಿವಾಸದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಎರಡೂ ಕಾರ್ಯಕ್ರಮಗಳು ಬಹಳ ದಿನಗಳು ಮೊದಲೇ ನಿಗದಿ ಆಗಿದ್ದವು. ಇಲ್ಲದಿದ್ದರೆ ನಾನೂ ಅಧಿವೇಶನಕ್ಕೆ ಹೋಗುತ್ತಿದ್ದೆ. ಅಧಿವೇಶನಕ್ಕೆ ನನ್ನನ್ನು ಉದ್ಘಾಟಕರನ್ನಾಗಿ ಆಹ್ವಾನಿಸಲಾಗಿತ್ತು. ಇದರಲ್ಲಿ ಅಸಮಾಧಾನದ ಪ್ರಶ್ನೆ ಏನೂ ಇಲ್ಲ ಎಂದರು.

ಅಧಿವೇಶನದಲ್ಲಿ ಜಾತಿ ಗಣತಿ ಕುರಿತು ನಿರ್ಣಯ ಅಂಗೀಕರಿಸಲಾಗಿದೆ. ಲಿಂಗಾಯತರಲ್ಲಿ ಇರುವ 60-70 ಒಳಪಂಗಡಗಳೆಲ್ಲವೂ ಒಂದೇ ಸೂರಿನಡಿ ಬರಬೇಕು. ಹೀಗಾದರೆ ಮಾತ್ರ ಲಿಂಗಾಯತ ಸಮುದಾಯಕ್ಕೆ ಮೀಸಲಾತಿಯ ಲಾಭ ಸಿಗುತ್ತದಷ್ಟೆ. ಇದನ್ನು ನಾನು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ ಎಂದು ಸಚಿವರು ಇದೇ ವೇಳೆ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಗುಮ್ಮಟನಗರಿಯಲ್ಲಿ 'ರನ್ ವಿಜಯಪುರ ರನ್' ವೃಕ್ಷಥಾನ್

ದಾವಣಗೆರೆಯಲ್ಲಿ ಎರಡು ದಿನಗಳ ಕಾಲ ನಡೆದ ವೀರಶೈವ ಲಿಂಗಾಯತ ಮಹಾಸಭಾದಲ್ಲಿ ಜಾತಿ ಗಣತಿ ಕುರಿತ ಕಾಂತರಾಜು ಆಯೋಗದ ವರದಿಯನ್ನು ಸರ್ಕಾರ ಒಪ್ಪಿಕೊಳ್ಳಬಾರದು, ವೈಜ್ಞಾನಿಕವಾಗಿ ಜಾತಿ ಜನಗಣತಿ ಮಾಡಬೇಕು ಎಂದು ಮಹಾಸಭಾ ಸರ್ಕಾರವನ್ನು ಒತ್ತಾಯಿಸಲಾಗಿತ್ತು.

ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅಧಿವೇಶನದ ಪ್ರಮುಖ ನಿರ್ಣಯಗಳನ್ನು ಮಂಡಿಸಿದರು. ಈ ಸಂದರ್ಭದಲ್ಲಿ ಉಜ್ಜಯಿನಿ ಪೀಠದ ಶ್ರೀ, ಸಾಣೇಹಳ್ಳಿ ಶಾಖಾ ಮಠದ ಪಂಡಿತಾರಾಧ್ಯ ಶ್ರೀ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಈಶ್ವರ್ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ಮರು ಜಾತಿಗಣತಿ ಸೇರಿದಂತೆ 7 ಕ್ಕೂ ಹೆಚ್ಚು ಮಹತ್ವದ ನಿರ್ಣಯಗಳನ್ನು ಅಂಗೀಕರಿಸಲಾಗಿತ್ತು. 2ನೇ ಶತಮಾನದಲ್ಲೇ ಅನುಭವ ಮಂಟಪದ ಮೂಲಕ ಸಂಸತ್ತಿನ ಮತ್ತು ಸಮ ಸಮಾಜದ ಪರಿಕಲ್ಪನೆಯನ್ನು ಜಗತ್ತಿಗೆ ಕಟ್ಟಿಕೊಟ್ಟ, ಮಹಾನ್ ಮಾನವತಾವಾದಿ, ಸಾಮಾಜಿಕ ಕ್ರಾಂತಿಯ ಹರಿಕಾರ, ಜಗಜ್ಯೋತಿ ಬಸವೇಶ್ವರರ ಚಿಂತನೆ, ಅನುಭಾವ ಸಾರ್ವಕಾಲಿಕವಾಗಿದ್ದು, ಜಗತ್ತಿನ ಎಲ್ಲ ಸಮಸ್ಯೆಗಳಿಗೆ ಬಸವತತ್ವ ಪರಿಪಾಲನೆ ಪರಮಾನ್ನವಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವಗುರು ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕರೆಂದು ಸರ್ಕಾರ ಅಧಿಕೃತವಾಗಿ ಘೋಷಿಸಬೇಕು ಎಂದು ಆಗ್ರಹಿಸಲಾಗಿತ್ತು.

ವೀರಶೈವ - ಲಿಂಗಾಯತ ಸಮುದಾಯದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಕಡು ಬಡವರಿದ್ದು, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿಯೂ ಅತ್ಯಂತ ಹಿಂದುಳಿದಿದ್ದಾರೆ. ಹೀಗಾಗಿ ವೀರಶೈವ–ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳನ್ನೂ ಒಳಗೊಂಡಂತೆ ಕೇಂದ್ರ ಸರ್ಕಾರದ ಇತರ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರವು ಭಾರತ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಮತ್ತು ಕೇಂದ್ರ ಸರ್ಕಾರ ಈ ಶಿಫಾರಸನ್ನು ಅಂಗೀಕರಿಸಬೇಕು ಎಂದು ಕೋರಲಾಗಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.