ETV Bharat / state

ಬೆಂಗಳೂರು ಬಂದ್ ವೇಳೆ ಅಗತ್ಯ ಸುರಕ್ಷತಾ ಕ್ರಮ ಸರ್ಕಾರದ ಕರ್ತವ್ಯ : ಹೈಕೋರ್ಟ್ - ಬೆಂಗಳೂರು ಬಂದ್

ಬಂದ್​ ವೇಳೆ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳುವುದು ಸರ್ಕಾರದ ಕರ್ತವ್ಯ ಎಂದು ಹೈಕೋರ್ಟ್​ ಅಭಿಪ್ರಾಯಪಟ್ಟಿದೆ.

ಹೈಕೋರ್ಟ್
ಹೈಕೋರ್ಟ್
author img

By ETV Bharat Karnataka Team

Published : Sep 25, 2023, 11:00 PM IST

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಮತ್ತು ರೈತರ ಪರ ಸಂಘಟನೆಗಳು ಹಮ್ಮಿಕೊಂಡಿರುವ ಬೆಂಗಳೂರು ಬಂದ್​ನಿಂದಾಗಿ ಸಾರ್ವಜನಿಕರ ಜೀವನ ಅಸ್ತವ್ಯಸ್ತವಾಗದಂತೆ, ಸರ್ಕಾರಿ ಹಾಗೂ ಖಾಸಗಿ ಆಸ್ತಿಪಾಸ್ತಿಗೆ ಹಾನಿಯಾಗದಂತೆ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳುವುದು ಸರ್ಕಾರದ ಕರ್ತವ್ಯ ಎಂದು ಹೈಕೋರ್ಟ್‌ ಅಭಿಪ್ರಾಯ ವ್ಯಕ್ತಪಡಿಸಿದೆ.

ಬಂದ್‌ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ, ಸರ್ಕಾರಿ-ಖಾಸಗಿ ಸ್ವತ್ತುಗಳಿಗೆ ಹಾನಿಯಾಗಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ, ಬೆಂಗಳೂರು ಹಾಗೂ ರಾಮನಗರ ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆಗೆ ನಿರ್ದೇಶಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ ನರೇಂದರ್‌ ಮತ್ತು ವಿಜಯ್‌ ಕುಮಾರ್ ಎ ಪಾಟೀಲ್ ಅವರಿದ್ದ ವಿಭಾಗೀಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಅಡ್ವೋಕೇಟ್‌ ಜನಲರ್‌ ಕೆ. ಶಶಿಕಿರಣ್‌ ಶೆಟ್ಟಿ ಹಾಜರಾಗಿ, ನಗರದಲ್ಲಿ ಪ್ರತಿಭಟನಾ ಮೆರವಣಿಗೆ, ರ್ಯಾಲಿ ನಡೆಸಲು ಅನುಮತಿ‌ ನೀಡಿಲ್ಲ. ಸ್ವಾತಂತ್ರ್ಯ ಉದ್ಯಾನದಲ್ಲಿ ಮಾತ್ರ ಶಾಂತಿಯುತ ಪ್ರತಿಭಟನೆಗೆ ಅವಕಾಶವಿದೆ. ಸಾರ್ವಜನಿಕ ಸಂಚಾರಕ್ಕೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಪೀಠಕ್ಕೆ ಭರವಸೆ ನೀಡಿದರು.

ಅರ್ಜಿದಾರರ ಪರ ವಕೀಲ ಜಿ ಆರ್‌ ಮೋಹನ್‌, ಬಂದ್‌ಗೆ ಕರೆ ನೀಡಿರುವ ಸಂಘಟನೆಗಳು ರಸ್ತೆ ಮೂಲಕ ಮೆರವಣಿಗೆ ನಡೆಸಲಿವೆ. ಇದರಿಂದ ಜನಸಾಮಾನ್ಯರ ಪ್ರಯಾಣಕ್ಕೆ ತೊಂದರೆಯಾಗುವ ಸಾಧ್ಯತೆಯಿದೆ. ಈ ಹಿಂದೆ ಬಂದ್‌ ನಡೆದಾಗ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಜನರ ಜೀವನ ಅಸ್ತವ್ಯಸ್ಥವಾಗಿತ್ತು. ಅಹಿತಕರ ಘಟನೆಗಳು ನಡೆದು ಸರ್ಕಾರಿ ಮತ್ತು ಖಾಸಗಿ ಆಸ್ತಿಪಾಸ್ತಿಗೆ ಹಾನಿಯಾಗಿತ್ತು. ಬಂದ್‌ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್‌ 2020ರ ಫೆ.20ರಂದು ಆದೇಶಿಸಿತ್ತು. ಸರ್ಕಾರಿ-ಖಾಸಗಿ ಆಸ್ತಿಗೆ ಉಂಟಾದ ನಷ್ಟ ಅಂದಾಜಿಸಿ, ವಸೂಲಿ ಮಾಡಲು ಕ್ಲೇಮು ಕಮೀಷನರ್‌ ನೇಮಕಕ್ಕೂ ಆದೇಶಿಸಿತ್ತು ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಬಂದ್‌ ಸಂದರ್ಭದಲ್ಲಿ ಸಾರ್ವಜನಿಕರ ಜೀವನ ಅಸ್ತವ್ಯಸ್ತವಾಗದಂತೆ, ಸರ್ಕಾರಿ ಹಾಗೂ ಖಾಸಗಿ ಆಸ್ತಿಪಾಸ್ತಿಗೆ ಹಾನಿಯಾಗದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಸರ್ಕಾರದ ಕರ್ತವ್ಯವಾಗಿದೆ. ಆ ಬಗ್ಗೆ ನ್ಯಾಯಾಲಯವು ಪ್ರತ್ಯೇಕವಾಗಿ ಯಾವುದೇ ನಿರ್ದೇಶನ ನೀಡುವ ಅನಿವಾರ್ಯತೆ ಇಲ್ಲ ಎಂದು ಮೌಖಿಕವಾಗಿ ಹೇಳಿತು.

ನಂತರ ಅಡ್ವೋಕೇಟ್‌ ಜನರಲ್‌ ಮತ್ತು ಅರ್ಜಿದಾರರ ಪರ ವಕೀಲರ ಹೇಳಿಕೆಗಳನ್ನು ದಾಖಲಿಸಿಕೊಂಡ ನ್ಯಾಯಪೀಠ, ಬಂದ್‌ ವಿಚಾರದಲ್ಲಿ ಹೈಕೋರ್ಟ್‌ ಈ ಹಿಂದೆಯೇ ಸಮಗ್ರವಾದ ನಿರ್ದೇಶನಗಳನ್ನು ನೀಡಿದೆ. ಅವು ಎಲ್ಲಾ ವಿಚಾರಗಳನ್ನು ಒಳಗೊಂಡಿದೆ. ಆ ಆದೇಶಕ್ಕೆ ಹೆಚ್ಚಿನದೇನೂ ಸೇರಿಸುವ ಅಗತ್ಯವೇನು ಕಂಡುಬರುತ್ತಿಲ್ಲ. ಹಾಗಾಗಿ, ಅರ್ಜಿ ಸಂಬಂಧ ಯಾವುದೇ ನಿರ್ದೇಶನ ನೀಡುವ ಅಗತ್ಯವು ಕಂಡುಬರುತ್ತಿಲ್ಲ ಎಂದು ತಿಳಿಸಿ ಅರ್ಜಿ ಇತ್ಯರ್ಥಪಡಿಸಿದೆ.

ಪ್ರಕರಣಗಳಿಗೆ ಹಾನಿಯಾಗದಂತೆ ಸಿಜೆಗೆ ಎಎಬಿ ಮನವಿ: ಬಂದ್ ಹಿನ್ನೆಲೆಯಲ್ಲಿ ವಕೀಲರು ವಿಚಾರಣೆಗೆ ಹಾಜರಾಗಲು ಸಾಧ್ಯವಾಗದಿದ್ದಾಗ ಯಾವುದೇ ರೀತಿಯಲ್ಲಿಯೂ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ಕೋರಿ ಬೆಂಗಳೂರು ವಕೀಲರ ಸಂಘ ಮುಖ್ಯನ್ಯಾಯಮೂರ್ತಿ ಅವರಿಗೆ ಮನವಿ ಮಾಡಿದೆ.

ಇದನ್ನೂ ಓದಿ: ಬೆಂಗಳೂರು ವಿವಿ ಪಿಹೆಚ್​ಡಿ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ಆರೋಪ: ನೋಟಿಸ್ ಜಾರಿ ಮಾಡಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.