ಬೆಂಗಳೂರು: ಲೋ ಶುಗರ್ನಿಂದ ಅಸ್ವಸ್ಥರಾಗಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತರಲಾಗಿದ್ದು, ಆಸ್ಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿತ್ರದುರ್ಗದಿಂದ ಆಂಬ್ಯುಲೆನ್ಸ್ ಮೂಲಕ ಝೀರೋ ಟ್ರಾಫಿಕ್ನಲ್ಲಿ ಬೆಂಗಳೂರಿಗೆ ಕರೆತರಲಾಗಿದ್ದು, ಏರ್ ಪೋರ್ಟ್ ರಸ್ತೆಯ ಆಸ್ಟರ್ ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದಾನಂದಗೌಡರ ಆರೋಗ್ಯ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಓದಿ: ಡಿವಿಎಸ್ ಆರೋಗ್ಯದಲ್ಲಿ ಚೇತರಿಕೆ.. ಆತಂಕದ ಅಗತ್ಯವಿಲ್ಲ; ವೈದ್ಯ ಡಾ. ಅಭಿಷೇಕ್
ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆ ಮುಗಿಸಿ ಮರಳುತ್ತಿದ್ದಾಗ ಶುಗರ್ ಲೋ ಆಗಿ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗಿದೆ.