ಬೆಂಗಳೂರು: ರಕ್ಷಣಾ ಇಲಾಖೆ ಸುಪರ್ದಿಯಲ್ಲಿರುವ ಬೆಂಗಳೂರಿನ ಗಂಗಮ್ಮ ಸರ್ಕಲ್- ಜಾಮ್ಜಾಮ್ ಪಾಯಿಂಟ್ ರಸ್ತೆಯಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅವಕಾಶಕ್ಕೆ ಕಲ್ಪಿಸುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ರಕ್ಷಣಾ ಸಚಿವರನ್ನು ಭೇಟಿಯಾದ ಸದಾನಂದಗೌಡ ಬೆಂಗಳೂರಿನ ರಸ್ತೆಯೊಂದರ ವಿಷಯ ಪ್ರಸ್ತಾಪಿಸಿ ಕೆಲಕಾಲ ಮಾತುಕತೆ ನಡೆಸಿದರು. ಜಾಲಹಳ್ಳಿ ಗಂಗಮ್ಮ ಸರ್ಕಲ್-ಜಾಮ್ಜಾಮ್ ಪಾಯಿಂಟ್ ರಸ್ತೆಯನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸುವ ಬಗ್ಗೆ ವಾಯುದಳ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಪತ್ರವನ್ನು ನೀಡಿದರು.
ಸಾರ್ವಜನಿಕರಿಂದ ಈ ಬಗ್ಗೆ ಬಂದಿದ್ದ ಅಹವಾಲುಗಳನ್ನು ಪರಿಗಣಿಸಿದ ಸದಾನಂದಗೌಡ ಇಂದು ರಕ್ಷಣಾ ಸಚಿವರನ್ನು ಭೇಟಿ ಮಾಡಿ ಜನರ ಮನವಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಇದಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಬೆಳಗಾವಿಯಲ್ಲೂ ಮೈಕ್ರೋಸಿಸ್ ಚಿಕಿತ್ಸಾ ಕೇಂದ್ರ ಸ್ಥಾಪಿಸಲು ಸಿಎಂಗೆ ಮನವಿ ಮಾಡಲಾಗುವುದು : ಶಾಸಕ ಅನಿಲ್ ಬೆನಕೆ