ETV Bharat / state

ಸಣ್ಣ ನೂಕಾಟವನ್ನು ಲಾಠಿ ಚಾರ್ಜ್ ಅಂತಾ ತೋರಿಸಬೇಡಿ: ಟ್ವಿಟ್ಟರ್​ ಮೂಲಕ ಡಿವಿಎಸ್ ಮನವಿ

author img

By

Published : Aug 9, 2019, 9:12 PM IST

ಪ್ರವಾಹಪೀಡಿತ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಂಟಾದ ಸಣ್ಣ ನೂಕಾಟವನ್ನೇ ಲಾಠಿ ಚಾರ್ಜ್​ ಅಂತಾ ಬಿಂಬಿಸಬೇಡಿ ಎಂದು ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ.

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ಬೆಂಗಳೂರು: ಗದಗ ಜಿಲ್ಲೆಯಲ್ಲಿ ಸಿಎಂ ಬಿಎಸ್​ವೈ ಕಾರಿಗೆ ಪೊಲೀಸರು ದಾರಿ ಮಾಡಿಕೊಡುವಾಗ ನಡೆದ ಸಣ್ಣ ನೂಕಾಟವನ್ನು ಜನರ ಮೇಲೆ ಲಾಠಿ ಚಾರ್ಜ್ ನಡೆದಿದೆ ಎನ್ನುವಂತೆ ಕೆಲ ಮಾಧ್ಯಮಗಳು ತೋರಿಸುತ್ತಿವೆ. ಹೀಗೆ ತಪ್ಪು ಸಂದೇಶ ನೀಡಬಾರದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

central minister d.v.sadanandagoud
ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರ ಟ್ವೀಟ್​

ರಾಜ್ಯದ ಮುಖ್ಯಮಂತ್ರಿ, ಚುನಾಯಿತ ಪ್ರತಿನಿಧಿಗಳು ಹಗಲು-ರಾತ್ರಿ ತಂಡೋಪತಂಡವಾಗಿ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇಂತಹ ಸಮಯದಲ್ಲಿ ಸಣ್ಣ ವ್ಯತ್ಯಾಸಗಳು ಆಗುವುದು ಸಹಜ ಎಂದು ರಾಜ್ಯ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಎಲ್ಲ ರೀತಿಯ ನೆರವು ನೀಡಲಾಗುತ್ತಿದೆ. ಈ ಸಮಯದಲ್ಲಿ ಪೊಲೀಸ್ ಇಲಾಖೆ ಸೇರಿದಂತೆ ಎಲ್ಲರೂ ಅತ್ಯಂತ ಹೆಚ್ಚಿನ ತಾಳ್ಮೆಯಿಂದ ತಮ್ಮ ಜವಾಬ್ದಾರಿ ನಿರ್ವಹಿಸಬೇಕು. ಪ್ರವಾಹ ಪೀಡಿತ ಸಂತ್ರಸ್ತರ ಜೊತೆ ಸಹನೆಯಿಂದ ವರ್ತಿಸಬೇಕು. ಮಾಧ್ಯಮಗಳು ನಿಸ್ವಾರ್ಥವಾಗಿ ಜನರಿಂದ ಅಗತ್ಯ ವಸ್ತು ಸಂಗ್ರಹಿಸಿ, ಸಂತ್ರಸ್ತರಿಗೆ ತಲುಪಿಸುತ್ತಿರುವುದು ನಿಜಕ್ಕೂ ಹೆಮ್ಮೆಯ ಕೆಲಸ ಎಂದು ಸದಾನಂದ ಗೌಡರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರತಿಪಕ್ಷಗಳು ಕೂಡ ರಾಜಕೀಯ ಭಿನ್ನಾಭಿಪ್ರಾಯ ಬಿಟ್ಟು ಮುಖ್ಯಮಂತ್ರಿ ಅವರ ಜೊತೆ ಕೈ ಜೋಡಿಸಬೇಕೆಂದು ವಿನಂತಿಸಿ ಕೇಂದ್ರ ಸಚಿವರು ಸರಣಿ ಟ್ವೀಟ್ ಮಾಡಿದ್ದಾರೆ.

Intro:

ಬೆಂಗಳೂರು: ಗದಗ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಕಾರಿಗೆ ಪೊಲೀಸರು ದಾರಿ ಮಾಡಿಕ್ಕೊಟ್ಟಾಗ ನಡೆದ ಸಣ್ಣ ನೂಕಾಟವನ್ನು ಜನರ ಮೇಲೆ ಲಾಠಿ ಚಾರ್ಜ್ ಆಗಿದೆ ಎನ್ನುವಂತೆ ತೋರಿಸಿ ಜನರಿಗೆ ತಪ್ಪು ಸಂದೇಶ ನೀಡಬಾರದು ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಯಾವತ್ತೂ ಕಾಣದ ಅತಿವೃಷ್ಟಿಗೆ ಒಳಗಾಗಿ ಪ್ರವಾಹ ಪರಿಸ್ಥಿತಿ ಬಂದಿದೆ . ರಾಜ್ಯದ ಮುಖ್ಯ ಮಂತ್ರಿಗಳು. ಚುನಾಯಿತ ಪ್ರತಿನಿಧಿಗಳು ಹಗಲಿರುಳೆನ್ನದೆ ತಂಡೋಪತಂಡವಾಗಿ ಪರಿಹಾರ ಕಾರ್ಯದಲ್ಲಿ ತೊಡಗಿಸಿಕ್ಕೊಂಡಿದ್ದಾರೆ. ಇಂತಹ ಸಮಯದಲ್ಲಿ ಸಣ್ಣ ಪುಟ್ಟ ವ್ಯತ್ಯಾಸಗಳು ಆಗುವುದು ಸಹಜ. ಪ್ರಕೃತಿಯ ಮುನಿಸಿನ ಎದುರು ಮನುಷ್ಯ ತೃಣ ಸಮಾನ ಎಂದು ರಾಜ್ಯ ಸರ್ಕಾರದ ಪರಿಹಾರ ಕಾರ್ಯಾಚರಣೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಕೇಂದ್ರ ಸರ್ಕಾರದಿಂದ ಎಲ್ಲ ರೀತಿಯ ನೆರವು ಬರುತ್ತಿದೆ. ಎಲ್ಲ ಇಲಾಖೆಯ ಅಧಿಕಾರಿಗಳು ಕೂಡಾ ಶಕ್ತಿ ಮೀರಿ ಶ್ರಮಿಸುತ್ತಿದ್ದಾರೆ. ಈ ಸಮಯದಲ್ಲಿ ಪೊಲೀಸ್ ಇಲಾಖೆ ಸೇರಿದಂತೆ ಎಲ್ಲರೂ ಅತ್ಯಂತ ಹೆಚ್ಚಿನ ತಾಳ್ಮೆಯಿಂದ ತಮ್ಮ ಜವಾಬ್ದಾರಿ ನಿರ್ವಹಿಸಬೇಕು. ಇಂತಹ ಸಂಕಷ್ಟದ ಸಮಯದಲ್ಲಿ ನೊಂದಿರುವವರ ಜೊತೆ ಸಹನೆಯಿಂದ ವರ್ತಿಸಬೇಕು ಎಂದರು.

ರಾಜ್ಯದ ಮಾಧ್ಯಮಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದು ನಿಸ್ವಾರ್ಥವಾಗಿ ಜನರಿಂದ ಅಗತ್ಯ ವಸ್ತು ಸಂಗ್ರಹಿಸಿ ಜನರಿಗೆ ತಲುಪಿಸುವ ಮಹತ್ತರ ಕೆಲಸ ಮಾಡುತ್ತಿವೆ ಅವರಿಗೆ ಎಷ್ಟು ಕೃತಜ್ಞತೆ ಹೇಳಿದರೂ ಸಾಲದು. ಅದೇ ರೀತಿ ಗದಗ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಕಾರಿಗೆ ಪೊಲೀಸರು ದಾರಿ ಮಾಡಿಕ್ಕೊಟ್ಟಾಗ ನಡೆದ ಸಣ್ಣ ನೂಕಾಟವನ್ನು ಜನರ ಮೇಲೆ ಲಾಠಿ ಚಾರ್ಜ್ ಆಗಿದೆ ಎನ್ನುವಂತೆ ಕೆಲ ಮಾಧ್ಯಮಗಳು ತೋರಿಸುತ್ತಿದ್ದು ಜನರಿಗೆ ತಪ್ಪು ಸಂದೇಶ ರವಾನೆಯಾಗುವುದು ಬೇಡ. ನಮ್ಮ ನಿಮ್ಮೆಲ್ಲರ ಜವಾಬ್ದಾರಿಯಿಂದ ಮಾತ್ರ ಈ ಪ್ರಾಕೃತಿಕ ವಿಕೋಪ ಎದುರಿಸಲು ಸಾಧ್ಯ. ಪ್ರತಿಪಕ್ಷಗಳು ಕೂಡ ಸಧ್ಯಕ್ಕೆ ರಾಜಕೀಯ ಬದಿಗಿಟ್ಟು ಮುಖ್ಯಮಂತ್ರಿಗಳ ಜೊತೆ ಕೈ ಜೋಡಿಸಬೇಕೆಂದು ವಿನಂತಿಸಿ ಸರಣಿ ಟ್ವೀಟ್ ಮಾಡಿದ್ದಾರೆ.
Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.