ಬೆಂಗಳೂರು: ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಅವರ ಅಕಾಲಿಕ ನಿಧನದಿಂದಾಗಿ ತೆರವಾಗಿದ್ದ ಸ್ಥಾನಕ್ಕೆ ಉಪ ಚುನಾವಣೆ ನಡೆಸಲು ದಿನಾಂಕ ಪ್ರಕಟಗೊಂಡಿದೆ.
ಮಾರ್ಚ್ 4 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಮಾರ್ಚ್ 8ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಮಾರ್ಚ್ 15ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತ ಎಣಿಕೆ ಕಾರ್ಯ ಮಾರ್ಚ್ 15 ರ ಸಂಜೆ 5 ಗಂಟೆಗೆ ನಡೆಸಲಾಗುವುದು. ಮಾರ್ಚ್ 18ರ ಒಳಗೆ ಚುನಾವಣೆ ಪ್ರಕ್ರಿಯೆ ಮುಗಿಯುತ್ತೆ ಎಂದು ಭಾರತ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.
ಕೋವಿಡ್ ನಿಯಮಗಳ ಪ್ರಕಾರ ಚುನಾವಣೆ ಪ್ರಕ್ರಿಯೆ ಕೈಗೊಳ್ಳಲಾಗುವುದೆಂದು ಚುನಾವಣಾ ಆಯೋಗ ತಿಳಿಸಿದೆ.