ಬೆಂಗಳೂರು: ಸಾಲುಮರದ ತಿಮ್ಮಕ್ಕ ಅವರಿಗೆ 'ಪರಿಸರದ ರಾಯಭಾರಿ' ಎಂಬ ವಿಶೇಷ ಬಿರುದು ನೀಡಿ, ಅವರು ಬಯಸಿದ್ದಲ್ಲಿ ಬೇರೆ ರಾಜ್ಯಗಳಿಗೆ ಹೋಗಿ ಪ್ರಚಾರ ಕೈಗೊಳ್ಳಲು ರಾಜ್ಯ ಸಚಿವರ ಸ್ಥಾನಮಾನ ನೀಡಲಾಗುವುದು. ವಾಹನ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆಯನ್ನೂ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶ್ರೀ ಸಿದ್ಧಾರ್ಥ ಎಜುಕೇಶನ್ ಸೊಸೈಟಿ ತುಮಕೂರು ಹಾಗೂ ಸಾಲುಮರದ ತಿಮ್ಮಕ್ಕ ಇಂಟರ್‌ನ್ಯಾಷನಲ್ ಫೌಂಡೇಶನ್ ವತಿಯಿಂದ ವಸಂತನಗರದ ಡಾ.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿರುವ ವೃಕ್ಷಮಾತೆ, ಪದ್ಮಶ್ರೀ, ನಾಡೋಜ, ಡಾ.ಸಾಲು ಮರದ ತಿಮ್ಮಕ್ಕ ಅವರ 111ರ ಜನುಮ ಸಂಭ್ರಮ ಹಾಗೂ ನ್ಯಾಷನಲ್ ಗ್ರೀನರಿ ಅವಾರ್ಡ್-2020ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.
ಇದನ್ನೂ ಓದಿ:ಜಿಎಸ್‌ಟಿ ಪರಿಹಾರ ಮುಂದುವರೆಸುವಂತೆ ಕೇಂದ್ರಕ್ಕೆ ಸಿದ್ದರಾಮಯ್ಯ ಒತ್ತಾಯ