ETV Bharat / state

ಆರ್ಥಿಕ ಸಂಕಷ್ಟ.. ಎಲ್ಲಾ ಹೊಸ ನೇಮಕಾತಿಗಳಿಗೆ ತಡೆಯೊಡ್ಡಿ ಸರ್ಕಾರ ಆದೇಶ

2020-21ನೇ ಆರ್ಥಿಕ ವರ್ಷದಲ್ಲಿ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು, ಬ್ಯಾಕ್‌ಲಾಗ್ ಹುದ್ದೆಗಳು ಸೇರಿ ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದನ್ನು ತಡೆಹಿಡಿಯಲಾಗಿದೆ ಎಂದು ಆದೇಶಿಸಲಾಗಿದೆ..

ಸರ್ಕಾರಿ ನೇಮಕಾತಿಗೆ ತಡೆ
ಸರ್ಕಾರಿ ನೇಮಕಾತಿಗೆ ತಡೆ
author img

By

Published : Jul 6, 2020, 9:31 PM IST

ಬೆಂಗಳೂರು : ಆರ್ಥಿಕ ಸಂಕಷ್ಟ ಹಿನ್ನೆಲೆ ಎಲ್ಲಾ ಸರ್ಕಾರಿ ನೇಮಕಾತಿಗೆ ತಡೆ ನೀಡಿ ಸರ್ಕಾರ ಆದೇಶಿಸಿದೆ. ಲಾಕ್‌ಡೌನ್ ಹಿನ್ನೆಲೆ ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಹಾಗಾಗಿ ಹೊಸ ನೇಮಕಾತಿಗಳಿಗೆ ಸರ್ಕಾರ ತಡೆ ನೀಡಿದೆ ಎಂದು ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.

ಆದೇಶದಲ್ಲಿ ಕೋವಿಡ್-19ನಿಂದ ಉಂಟಾದ ಪರಿಸ್ಥಿಯನ್ನು ನಿಭಾಯಿಸಿ, ಆರ್ಥಿಕ ಪರಿಸ್ಥಿತಿಯನ್ನು ಸುಸ್ಥಿಗೆ ತರಲು ಸಂಪನ್ಮೂಲ ಕ್ರೋಢೀಕರಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆ ವೆಚ್ಚವನ್ನು ಕಡಿತಗೊಳಿಸಿ, ಮಿತವ್ಯಯ ಪಾಲಿಸುವ ಅಗತ್ಯ ಇದೆ ಎಂದು ತಿಳಿಸಲಾಗಿದೆ.

ಸರ್ಕಾರದ ಆದೇಶ ಪ್ರತಿ
ಸರ್ಕಾರದ ಆದೇಶ ಪ್ರತಿ

ಈ ಹಿನ್ನೆಲೆ 2020-21ನೇ ಆರ್ಥಿಕ ವರ್ಷದಲ್ಲಿ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು, ಬ್ಯಾಕ್‌ಲಾಗ್ ಹುದ್ದೆಗಳು ಸೇರಿ ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದನ್ನು ತಡೆಹಿಡಿಯಲಾಗಿದೆ ಎಂದು ಆದೇಶಿಸಲಾಗಿದೆ. ಅಷ್ಟೇ ಅಲ್ಲ, ಈಗಾಗಲೇ ಆರ್ಥಿಕ ಇಲಾಖೆಯ ಅನುಮತಿ ಪಡೆದು, ನೇಮಕಾತಿಯ ವಿವಿಧ ಹಂತಗಳಲ್ಲಿರುವ ಹುದ್ದೆಗಳ ಭರ್ತಿ ಮಾಡುವುದನ್ನೂ ತಡೆಹಿಡಿಯಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.