ETV Bharat / state

ಡಿ ಕೆ ಸಹೋದರರಿಗೆ ಮತ್ತೆ ಇಡಿ ನೋಟಿಸ್​​: ಮುಖಂಡರ ಜೊತೆ ಚರ್ಚಿಸಿ ತೀರ್ಮಾನ ಎಂದ ಡಿಕೆಶಿ - DK brothers

ಜಾರಿ ನಿರ್ದೇಶನಾಲಯ ಅ.7 ರಂದು ವಿಚಾರಣೆಗೆ ಹಾಜರಾಗುವಂತೆ ಡಿ ಕೆ ಶಿವಕುಮಾರ್​ ಮತ್ತು ಡಿ ಕೆ ಸುರೇಶ್​ ಅವರಿಗೆ ನೋಟಿಸ್​ ನೀಡಿದೆ. ಈ ಬಗ್ಗೆ ಪಕ್ಷದ ಮುಖಂಡರ ಜತೆ ಸಮಾಲೋಚನೆ ನಡೆಸಿ, ತೀರ್ಮಾನ ತೆಗೆದುಕೊಳ್ಳುವುದಾಗಿ ಡಿಕೆಶಿ ಹೇಳಿದ್ದಾರೆ.

ಡಿಕೆಶಿಗೆ ಇಡಿ ನೋಟಿಸ್​
ಡಿಕೆಶಿಗೆ ಇಡಿ ನೋಟಿಸ್​
author img

By

Published : Oct 6, 2022, 4:36 PM IST

ಬೆಂಗಳೂರು: ಅಕ್ಟೋಬರ್ 7 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇ.ಡಿ) ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಸಂಸದ ಡಿ ಕೆ ಸುರೇಶ್ ಅವರಿಗೆ ಮತ್ತೆ ನೋಟಿಸ್ ಜಾರಿ ಮಾಡಿದೆ.

ಈ ಮೊದಲು ದಿನಾಂಕ 23-09-2022 ರಂದು ಇವಬ್ಬರಿಗೂ ಅಕ್ಟೋಬರ್ 7 ರಂದು ವಿಚಾರಣೆಗೆ ಬರುವಂತೆ ಇಡಿ ಸಮನ್ಸ್ ಜಾರಿ ಮಾಡಿತ್ತು. ಆದರೆ ಭಾರತ್ ಜೋಡೋ ಪಾದಯಾತ್ರೆ ಹಿನ್ನೆಲೆ ಕಾಲಾವಕಾಶ ನೀಡುವಂತೆ ಡಿ ಕೆ ಶಿವಕುಮಾರ್ ಹಾಗೂ ಸುರೇಶ್ ಪತ್ರ ಬರೆದು ಕೋರಿದ್ದರು.

ಇದನ್ನೂ ಓದಿ: ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್​ ನೀಡಿದೆ.. ಡಿಕೆಶಿ

ಆದರೆ ಕಾಲಾವಕಾಶ ನೀಡಲು ನಿರಾಕರಿಸಿರುವ ಇಡಿ 7-10-2022 ರಂದು ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಬುಧವಾರ ಮತ್ತೊಂದು ನೋಟಿಸ್ ಜಾರಿ ಮಾಡಿದೆ. ಪಕ್ಷದ ಮುಖಂಡರ ಜತೆ ಸಮಾಲೋಚನೆ ನಡೆಸಿ, ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಡಿ ಕೆ ಶಿವಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.