ಬೆಂಗಳೂರು: ರಾಜ್ಯಾದ್ಯಂತ ಎಲ್ಲಾ ಶಾಲೆಗಳು ಹಾಗೂ ಶಿಕ್ಷಣ ಇಲಾಖೆಯ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿ ಶಿಕ್ಷಣ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ನಾಗೇಶ್ ಅವರು ಶಾಲೆ ಹಾಗೂ ಕಚೇರಿಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರಿಗೆ ಪ್ಲಾಸ್ಟಿಕ್ ಸುತ್ತಿದ ಹೂಗುಚ್ಛ, ಪ್ಲಾಸ್ಟಿಕ್ ಹಾಳೆ/ಕಾಗದದಿಂದ ಪ್ಯಾಕ್ ಮಾಡಿದ ಪುಸ್ತಕಗಳನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ. ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದ್ದು, ಅದರಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ತಿಳಿಸಿದ್ದಾರೆ.
ಹೀಗಾಗಿ ಸರ್ಕಾರದ ಆದೇಶಗಳಲ್ಲಿ ಪ್ಲಾಸ್ಟಿಕ್ ಕಾರಿಬ್ಯಾಗ, ಭಿತ್ತಿಪತ್ರ, ತೋರಣ, ಪ್ಲಾಸ್ಟಿಕ್ ಬಾವುಟ, ಫ್ಲೆಕ್ಸ್, ಪ್ಲಾಸ್ಟಿಕ್ ತಟ್ಟೆ, ಲೋಟ, ಚಮಚ, ಥರ್ಮಾಕೋಲ್ ಹಾಗೂ ಪ್ಲಾಸ್ಟಿಕ್ ಬೀಟ್ಸ್ಗಳಿಂದ ತಯಾರಾದ ವಸ್ತುಗಳ ಬಳಕೆಯನ್ನು ರಾಜ್ಯಾದ್ಯಂತ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಶೈಕ್ಷಣಿಕ ಸಂಸ್ಥೆಗಳು, ಶಾಲೆಗಳಲ್ಲಿ, ಶೈಕ್ಷಣಿಕ ಸಭೆ - ಸಮಾರಂಭಗಳಲ್ಲಿ ಪ್ಲಾಸ್ಟಿಕ್ನಿಂದಾದ ಯಾವುದೇ ವಸ್ತುಗಳ ಬಳಕೆ ಮಾಡುವ ಪದ್ಧತಿಯನ್ನು ಕಡ್ಡಾಯವಾಗಿ ನಿಷೇಧಿಸಿದೆ.
ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ: ನಾಳೆ ಮತದಾನ, ಡಿ.14ಕ್ಕೆ ಫಲಿತಾಂಶ