ETV Bharat / state

5 ಮತ್ತು 8ನೇ ತರಗತಿಗೆ ಮೌಲ್ಯಾಂಕನ ನಡೆಸುವ ಬಗ್ಗೆ ಸರ್ಕಾರದಿಂದ ಹೊಸ ಸುತ್ತೋಲೆ - ಶಿಕ್ಷಣ ಇಲಾಖೆಯ ಹೊಸ ಸುತ್ತೋಲೆ

ಶಾಲೆಯ ವಿದ್ಯಾರ್ಥಿಗಳ ಕಲಿಕಾ ಪ್ರಗತಿಯನ್ನು, ಕಲಿಕಾ ಫಲಗಳನ್ನು/ಸಾಮರ್ಥ್ಯಗಳನ್ನಾಧರಿಸಿದ ಏಕರೂಪದ ಸಾಧನಾ ಮತ್ತು ತಂತ್ರ ಬಳಸಿ ಮೌಲ್ಯಮಾಪನ ಮಾಡಿ ವಿಶ್ಲೇಷಣೆ ಮಾಡುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

KN_BNG_
ವಿಧಾನಸೌಧ
author img

By

Published : Dec 13, 2022, 11:56 AM IST

ಬೆಂಗಳೂರು: 2022-23ನೇ ಸಾಲಿನಿಂದ ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿನ 5 ಮತ್ತು 8ನೇ ತರಗತಿಗಳ ವಾರ್ಷಿಕ ಪರೀಕ್ಷೆ / ಮೌಲ್ಯಾಂಕನ ನಡೆಸುವ ಬಗ್ಗೆ ರಾಜ್ಯ ಸರ್ಕಾರ ಹೊಸ ಸುತ್ತೋಲೆ ಹೊರಡಿಸಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಮೂಲಕ ಹೊಸ ಸುತ್ತೋಲೆ ಹೊರಬಿದ್ದಿದೆ. ಇದಕ್ಕೆ ಇದೇ ವರ್ಷ ನ.21ಕ್ಕೆ ರಾಜ್ಯ ಸರ್ಕಾರದ ಅನುಮೋದನೆ ಸಹ ಸಿಕ್ಕಿದೆ ಎಂದು ತಿಳಿಸಲಾಗಿದೆ. ಪ್ರಸ್ತುತ 2022-23ನೇ ಸಾಲಿನಲ್ಲಿ ಮಕ್ಕಳ ಕಲಿಕಾ ಕೊರತೆಯನ್ನು ನೀಗಿಸಲು ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಅನುಷ್ಠಾನಗೋಳಿಸಿ ಕಲಿಕಾ ಪ್ರಗತಿಯು ಅನುಪಾಲನೆಯಲ್ಲಿದೆ.

ಆದರೆ ಪ್ರಸ್ತುತ 1ನೇ ತರಗತಿಯಿಂದ 9ನೇ ತರಗತಿವರೆಗೆ ಶಾಲಾ ಹಂತದಲ್ಲಿ ಸಿಸಿಇ ಅಡಿ ಮೌಲ್ಯಾಂಕನ ವಿಶ್ಲೇಷಣೆ ಮಾಡುತ್ತಿರುವುದರಿಂದ ಹಾಗೂ ವಾರ್ಷಿಕ ಪರೀಕ್ಷೆಗಳನ್ನು ನಿರ್ವಹಿಸುತ್ತಿಲ್ಲವಾದ್ದರಿಂದ ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳ ಒಟ್ಟಾರೆ ಸಾಧನೆ ಯಾವ ರೀತಿ ಇದೆ ಎಂಬುದನ್ನು ತಿಳಿಯಲು ಸಾಧ್ಯವಾಗುತ್ತಿಲ್ಲ.

ಇದರಿಂದ ಒಟ್ಟಾರೆಯಾಗಿ ಮಕ್ಕಳ ಕಲಿಕೆಯ ಮಟ್ಟವೇನು? ಕೊರತೆಗಳೇನು? ಯಾವ ವಿಷಯದಲ್ಲಿ ಹಿನ್ನಡೆ ಉಂಟಾಗಿದೆ? ಇವುಗಳನ್ನು ನಿವಾರಿಸಲು ಯಾವ ಕ್ರಮಗಳನ್ನು ಅನುಸರಿಸಬೇಕು ಎಂಬುದನ್ನು ನಿರ್ಧರಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಎಲ್ಲಾ ಶಾಲೆಯ ವಿದ್ಯಾರ್ಥಿಗಳ ಕಲಿಕಾ ಪ್ರಗತಿಯನ್ನು, ಕಲಿಕಾ ಫಲಗಳನ್ನು/ ಸಾಮರ್ಥ್ಯಗಳನ್ನಾಧರಿಸಿದ ಏಕರೂಪದ ಸಾಧನಾ ಮತ್ತು ತಂತ್ರ ಬಳಸಿ ಮೌಲ್ಯಮಾಪನದೊಂದಿಗೆ ವಿಶ್ಲೇಷಣಿ ಮಾಡುವುದು ಅವಶ್ಯವಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (K.S.E.A.B] ಇವರ ಹಂತದಲ್ಲಿ ಪ್ರಶ್ನೆ ಪತ್ರಿಕೆ ರೂಪಿಸಿ, ಸರಬರಾಜು ಮಾಡಿ ಶಾಲಾ ಹಂತದಲ್ಲಿ ಪರೀಕ್ಷೆ ನಿರ್ವಹಿಸಿ ಮೌಲ್ಯಾಂಕನ ವಿಶ್ಲೇಷಣೆಯ ಕಲಿಕಾ ಕುಂಠಿತವಾಗಿರುವ ವಿಷಯವಾರು, ಶಾಲಾವಾರು, ಕ್ಲಸ್ಟರ್/ತಾಲ್ಲೂಕುವಾರು ವಿಶ್ಲೇಷಿಸಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅಗತ್ಯ ಕ್ರಿಯಾ ಯೋಜನೆಯನ್ನು ರಚಿಸಿ ಬೋಧನಾ ಕಲಿಕಾ ಪ್ರಕ್ರಿಯೆಯನ್ನು ಬಲವರ್ಧನೆಗೊಳಸುವ ಉದ್ದೇಶ ಹೊಂದಿದೆ.

ಆದ್ದರಿಂದ ಪರೀಕ್ಷೆ ನಿರ್ವಹಣೆ ಕುರಿತು ಸಂಬಂಧಿಸಿದ ಅನುಷ್ಠಾನಾಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಿ, ಚರ್ಚಿಸಿ ನಿರ್ಣಯಿಸಿದಂತೆ ಪರೀಕ್ಷಾ ನಿರ್ವಹಣಿಗೆ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲು ಮಾರ್ಗಸೂಚಿ ಸಿದ್ಧಪಡಿಸಿ ಅನುಬಂಧಿಸಿದೆ.

ಇದನ್ನೂ ಓದಿ: ಅಪ್ಪ- ಮಗ ಇಬ್ಬರೂ ಚಾಮರಾಜನಗರಕ್ಕೆ ಭೇಟಿ: ಮೌಢ್ಯಕ್ಕೆ ಸಡ್ಡು ಹೊಡೆದ ಬಿಜೆಪಿ 2ನೇ ಸಿಎಂ ಬೊಮ್ಮಾಯಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.