ETV Bharat / state

ಮಕ್ಕಳಿಗೆ ಬಲವಂತದಿಂದ ಟಿಸಿ ನೀಡಿದರೆ ಹುಷಾರ್... ಖಾಸಗಿ ಸಂಸ್ಥೆಗಳಿಗೆ ಶಿಕ್ಷಣ ಇಲಾಖೆಯಿಂದ ಖಡಕ್ ಸೂಚನೆ

ನಗರದಲ್ಲಿರುವ ಕೆಲವೊಂದು ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಪೋಷಕರಿಗೆ ಕಾರಣವನ್ನು ನೀಡದೆ ಒತ್ತಾಯ ಪೂರ್ವಕವಾಗಿ ವರ್ಗಾವಣೆ ಪತ್ರ ನೀಡುವ ಮೂಲಕ ಮಕ್ಕಳನ್ನು ಶಾಲೆಯಿಂದ ಹೊರ ಹಾಕುತ್ತಿದ್ದಾರೆ. ಅಂತಹ ಶಾಲೆಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

author img

By

Published : Jun 3, 2019, 8:35 PM IST

Bangalore

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಪೋಷಕರ ಕೋರಿಕೆ ಇಲ್ಲದೆ ಒತ್ತಾಯ ಪೂರ್ವಕವಾಗಿ ವರ್ಗಾವಣೆ ಪತ್ರ ನೀಡುತ್ತಿದ್ದು, ಈ ಸಂಬಂಧ ಪೋಷಕರಿಂದ ದೂರುಗಳು ಬಂದ‌ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಅಂತಹ ಶಾಲೆಗಳಿಗೆ ಖಡಕ್ ಸೂಚನೆ ನೀಡಿದೆ.

ನಗರದಲ್ಲಿರುವ ಕೆಲವೊಂದು ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಪೋಷಕರಿಗೆ ಕಾರಣವನ್ನು ನೀಡದೆ ಒತ್ತಾಯ ಪೂರ್ವಕವಾಗಿ ವರ್ಗಾವಣೆ ಪತ್ರ ನೀಡುವ ಮೂಲಕ ಮಕ್ಕಳನ್ನು ಶಾಲೆಯಿಂದ ಹೊರ ಹಾಕುತ್ತಿದ್ದಾರೆ. ಇದು ಮಕ್ಕಳಿಗೆ ಮಾನಸಿಕ ಹಿಂಸೆಯಾಗಿ ಶಾಲೆಗೆ ಹೋಗದಂತಹ ಪರಿಸ್ಥಿತಿ ಉದ್ಭವಿಸುತ್ತಿದ್ದು, ಮಕ್ಕಳು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಇಂತಹ ಶಾಲೆಗಳ ವಿರುದ್ಧ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುವಂತೆ ಪೋಷಕರು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

Bangalore
ಸಾರ್ವಜನಿಕ ಇಲಾಖೆ ಹೊರಡಿಸಿರುವ ಸುತ್ತೋಲೆ

ಈ ಹಿನ್ನೆಲೆಯಲ್ಲಿ ಅಂತಹ ಶಾಲೆಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಿಕ್ಷಣ ಇಲಾಖೆ ಮುಂದಾಗಿದ್ದು, ಈ ಹಿಂದೆ ಇಲಾಖೆ ಸಾಕಷ್ಟು ಸಲ ಸೂಚನೆ ನೀಡಿದ್ದರೂ, ಕೆಲವೊಂದು ಶಾಲೆಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸುತ್ತಿರುವ ಬಗ್ಗೆ ದೂರುಗಳು ಬಂದಿದೆ. ಹೀಗಾಗಿ ಇಂತಹ ಪ್ರಕರಣಗಳಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ವಹಿಸುವಂತೆ ಇಲಾಖೆಯಿಂದ ಸುತ್ತೋಲೆ ಹೊರಡಿಸಿದೆ.

ಒಂದು ವೇಳೆ ಇಂತಹ ಪ್ರಕರಣಗಳು ಮರುಕಳಿಸಿದ್ದಲ್ಲಿ ಅಂತಹ ಶಾಲೆಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಮುಂದಿನ ಆಗುಹೋಗುಗಳಿಗೆ ಆಯಾ ವ್ಯಾಪ್ತಿಯ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ನೇರ‌ ಹೊಣೆಗಾರರನ್ನಾಗಿಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಎಂ. ಟಿ. ರೇಜು ಸುತ್ತೋಲೆ ಹೊರಡಿಸಿದ್ದಾರೆ.

Intro:ಶಾಲಾ ಮಕ್ಕಳಿಗೆ ಬಲವಂತದಿಂದ ವರ್ಗಾವಣೆ ಪತ್ರ ನೀಡಿದ್ದರೆ ಹುಷಾರ್; ಶಿಕ್ಷಣ ಇಲಾಖೆಯಿಂದ ಖಡಕ್ ಸೂಚನೆ..

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಪೋಷಕರ ಕೋರಿಕೆ
ಇಲ್ಲದೆ ಒತ್ತಾಯ ಪೂರ್ವಕವಾಗಿ ವರ್ಗಾವಣೆ ಪತ್ರ ನೀಡುತ್ತಿರುವ ಸಂಬಂಧ ಪೋಷಕರಿಂದ ದೂರುಗಳು ಬಂದ‌ ಹಿನ್ನೆಲೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಅಂತಹ ಶಾಲೆಗಳಿಗೆ ಖಡಕ್ ಸೂಚನೆ ನೀಡಿದೆ..‌

ಕೆಲವೊಂದು ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಪೋಷಕರಿಗೆ ಸಕಾರಣವನ್ನು ನೀಡದೆ ಒತ್ತಾಯ ಪೂರ್ವಕವಾಗಿ ವರ್ಗಾವಣೆ ಪತ್ರ ನೀಡುವ ಮೂಲಕ ಮಕ್ಕಳನ್ನು ಶಾಲೆಯಿಂದ ಹೊರ ಹಾಕುತ್ತಿದ್ದಾರೆ..‌ಇದು ಮಕ್ಕಳಿಗೆ ಮಾನಸಿಕ ಹಿಂಸೆಯಾಗಿ ಶಾಲೆಗೆ ಹೋಗದಂತಹ ಪರಿಸ್ಥಿತಿ ಉದ್ಭವಿಸುತ್ತಿದೆ. ಮಕ್ಕಳು ಮನೆಯಲ್ಲಿ ತುಂಬಾ ನೋವು ಅನುಭವಿಸಿ, ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಇಂತಹ ಶಾಲೆಗಳ ವಿರುದ್ಧ ಕಾನೂನಾತ್ಮಕವಾಗಿ ಕ್ರಮಕೈಗೊಳ್ಳುವಂತೆ
ಪೋಷಕರುಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ರಿಗೆ ಮನವಿ ಸಲ್ಲಿಸಿದ್ದಾರೆ..‌

ಈ ಹಿನ್ನೆಲೆಯಲ್ಲಿ ಅಂತಹ ಶಾಲೆಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿದೆ.. ಈ ಹಿಂದೆ ಇಲಾಖೆಯು ಸಾಕಷ್ಟು ಸಲ ಸೂಚನೆ ನೀಡಿದ್ದರೂ, ಕೆಲವೊಂದು ಶಾಲೆಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸುತ್ತಿರುವ ಬಗ್ಗೆ ದೂರುಗಳು ಬಂದಿದೆ.. ಹೀಗಾಗಿ, ಇಂತಹ ಪ್ರಕರಣಗಳಲ್ಲಿ ಅಧಿಕಾರಿಗಳು ಅಗತ್ಯ ಕ್ರಮವಹಿಸುವಂತೆ ಇಲಾಖೆಯಿಂದ ಸುತ್ತೋಲೆ ಹೊರಡಿಸಿದೆ..

ಒಂದು ವೇಳೆ ಇಂತಹ ಪ್ರಕರಣಗಳು ಮರುಕಳಿಸಿದ್ದಲ್ಲಿ ಅಂತಹ ಶಾಲೆಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಸೂಚಿಸಲಾಗಿದೆ.. ತಪ್ಪಿದಲ್ಲಿ, ಮುಂದಿನ ಆಗುಹೋಗುಗಳಿಗೆ ಆಯಾ ವ್ಯಾಪ್ತಿಯ ಉಪನಿರ್ದೇಶಕರು- ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ನೇರ‌ ಹೊಣೆಗಾರರನ್ನಾಗಿಸಿ ಸೂಕ್ತ ಕ್ರಮ ಜರುಗಿಸಲಾಗುವುದು ಅಂತ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಎಂ ಟಿ ರೇಜು ಸುತ್ತೋಲೆ ಹೊರಡಿಸಿದ್ದಾರೆ..

KN_BNG_02_03_SHCOOL_TC_SCRIPT_DEEPA_SCRIPT_7201801 Body:..Conclusion:..

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.