ETV Bharat / state

ಸರ್ಕಾರಿ ಶಾಲೆಗಳಿಗೆ ಪೋಷಕರಿಂದ ದೇಣಿಗೆ: 48 ಗಂಟೆಯಲ್ಲಿ ಸುತ್ತೋಲೆ ಹಿಂಪಡೆದ ಶಿಕ್ಷಣ ಇಲಾಖೆ

author img

By

Published : Oct 22, 2022, 7:16 PM IST

ಸರ್ಕಾರಿ ಶಾಲೆಗಳಲ್ಲಿ ಪೋಷಕರಿಂದ ದೇಣಿಗೆ ಸಂಗ್ರಹಿಸುವ ಬಗ್ಗೆ ಶಿಕ್ಷಣ ಇಲಾಖೆ ಹೊರಡಿಸಿದ್ದ ಸುತ್ತೋಲೆಯನ್ನು ಹಿಂಪಡೆಯಲಾಗಿದೆ. ಸಾರ್ವಜನಿಕರು ಮತ್ತು ಪ್ರತಿಪಕ್ಷಗಳಿಂದ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಇಲಾಖೆ ಸುತ್ತೋಲೆ ವಾಪಸ್ ಪಡೆದಿದೆ.

ಶಿಕ್ಷಣ ಸಚಿವ
ಶಿಕ್ಷಣ ಸಚಿವ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಪ್ರೌಢ ಶಾಲೆಗಳಲ್ಲಿ ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯು (ಎಸ್​​ಡಿಎಂಸಿ) ಶಾಲೆಯ ಅಭಿವೃದ್ಧಿಗಾಗಿ ದಾನ/ದೇಣಿಗೆಗಳನ್ನು ಸ್ವೀಕರಿಸುವ ಬಗ್ಗೆ ಶಿಕ್ಷಣ ಇಲಾಖೆ ಹೊರಡಿಸಿದ್ದ ಸುತ್ತೋಲೆಯನ್ನು ಹಿಂಪಡೆಯಲಾಗಿದೆ.

ಪೋಷಕರಿಂದ ದೇಣಿಗೆ ಸ್ವೀಕರಿಸುವುದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಕಾಲ ಸಚಿವರ ಸೂಚನೆ ಮೇರೆಗೆ ಇಂದು ಸುತ್ತೋಲೆ ವಾಪಸ್ ಪಡೆಯಲಾಗಿದೆ. ಶಿಕ್ಷಣ ಇಲಾಖೆ ಅಕ್ಟೋಬರ್ 19ರಂದು ಈ ಸುತ್ತೋಲೆಯನ್ನು ಹೊರಡಿಸಿತ್ತು. ಪ್ರತಿಪಕ್ಷಗಳು ಹಾಗೂ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆ, ಸಚಿವ ಬಿ ಸಿ ನಾಗೇಶ್ ಆದೇಶವನ್ನು ಹಿಂಪಡೆಯುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆ ಆದೇಶ ಜಾರಿಯಾದ 48 ಗಂಟೆ ಒಳಗೆ ವಾಪಸ್ ಪಡೆಯಲ್ಪಟ್ಟಿದೆ.

ಆದೇಶವನ್ನು ಹಿಂಪಡೆದಿರುವ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಶಿಕ್ಷಣ ಸಚಿವರ ಸೂಚನೆ ಮೇರೆಗೆ ತಕ್ಷಣಕ್ಕೆ ಜಾರಿಗೆ ಬರುವಂತೆ ಅಕ್ಟೋಬರ್ 19ರಂದು ಹೊರಡಿಸಿದ ಸುತ್ತೋಲೆಯನ್ನು ವಾಪಸ್ ಪಡೆಯಲಾಗಿದೆ ಎಂದು ತಿಳಿಸಿದೆ.

ಸರ್ಕಾರಿ ಶಾಲೆಗಳಿಗೆ ಪೋಷಕರಿಂದ ದೇಣಿಗೆ
ಸರ್ಕಾರಿ ಶಾಲೆಗಳಿಗೆ ಪೋಷಕರಿಂದ ದೇಣಿಗೆ: 48 ಗಂಟೆಯಲ್ಲಿ ಸುತ್ತೋಲೆ ಹಿಂಪಡೆದ ಶಿಕ್ಷಣ ಇಲಾಖೆ

(ಓದಿ: ಸರ್ಕಾರಿ ಶಾಲೆಯಲ್ಲಿ ಹಣ ಸಂಗ್ರಹಕ್ಕೆ ಸುತ್ತೋಲೆ.. ಅದಕ್ಕೂ ನಮಗೂ ಸಂಬಂಧವೇ ಇಲ್ಲ- ಸಚಿವ ನಾಗೇಶ್ )

ಸಿದ್ದರಾಮಯ್ಯ ಅಕ್ಷೇಪ: ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, ಸರ್ಕಾರಿ ಶಾಲೆಯ ಬಡ ಮಕ್ಕಳ ಮೇಲೆ ಬಿಜೆಪಿ ಸರ್ಕಾರದ ಭ್ರಷ್ಟ ಕಣ್ಣು ಬಿದ್ದಿದೆ. ಕಮಿಷನ್ ಹೆಸರಲ್ಲಿ ರಾಜ್ಯದ ಖಜಾನೆ ಲೂಟಿ ಆಯಿತು, ಈಗ ಬಡ ಮಕ್ಕಳ ಪೋಷಕರ ಜೇಬಿಗೂ ಕತ್ತರಿ..! ಬಿಜೆಪಿ ಸರ್ಕಾರಕ್ಕೆ ಇಂಥ ಸ್ಥಿತಿ ಬರಬಾರದಿತ್ತು. ವಿದ್ಯಾರ್ಥಿಗಳಿಗೆ ಹಾಲು,‌ ಬಿಸಿ ಊಟ, ಸಮವಸ್ತ್ರ-ಶೂ, ವಿದ್ಯಾಸಿರಿ, ಹಾಸ್ಟೆಲ್ ಸೌಲಭ್ಯಗಳನ್ನು ನೀಡಿದ್ದು ನಾವು. ಅವರಿಂದ ಒಂದೊಂದನ್ನೇ ಕಿತ್ತುಕೊಳ್ಳುತ್ತಿರುವ ಬಿಜೆಪಿ ಸರ್ಕಾರ, ಈಗ ಅವರಿಂದ ದುಡ್ಡು‌ ಕಿತ್ತುಕೊಳ್ಳಲು ಹೊರಟಿದೆ ಎಂದು ಕಿಡಿಕಾರಿದ್ದರು.

ವೇದಿಕೆ ಮೇಲೆ ನಿಂತು ಧಮ್, ತಾಕತ್ ಎಂದು ಬೊಬ್ಬಿರಿಯುವವರು ವಿದ್ಯಾರ್ಥಿಗಳ ನೆರವಿನ‌ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿ ತಮ್ಮ ತಾಕತ್ ತೋರಿಸಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ನಮ್ಮ ಸರ್ಕಾರ ವಿದ್ಯಾಸಿರಿ, ಅರಿವು,‌ ಶ್ಯೂ ಭಾಗ್ಯ, ವಿದೇಶಿ ವ್ಯಾಸಂಗಕ್ಕೆ ಆರ್ಥಿಕ ನೆರವು, ಶೈಕ್ಷಣಿಕ ಸಾಲ ಯೋಜನೆ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕು ನೀಡಿದರೆ, ಈಗಿನ ಬಿಜೆಪಿ ಸರ್ಕಾರ ಓದುವ ಮಕ್ಕಳಿಗೆ ತ್ರಿಶೂಲ ದೀಕ್ಷೆ ನೀಡಿ ಅವರ ಬದುಕನ್ನು ಕತ್ತಲಿಗೆ ದೂಡುತ್ತಿದೆ. ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಪೋಷಕರಿಂದ ಹಣ ಸಂಗ್ರಹಿಸುವಂತೆ ಹೊರಡಿಸಿರುವ ಆದೇಶವನ್ನು ಈ ಕೂಡಲೇ ಹಿಂಪಡೆಯಬೇಕು ಮತ್ತು ಅನುದಾನ ಕೊರತೆಯಿಂದ ಸ್ಥಗಿತಗೊಂಡಿರುವ ಎಲ್ಲಾ ಶೈಕ್ಷಣಿಕ ಯೋಜನೆಗಳಿಗೆ ಪುನರ್ ಚಾಲನೆ ನೀಡಬೇಕು ಎಂದು ರಾಜ್ಯ ಬಿಜೆಪಿ ಸರ್ಕಾರವನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದರು.

(ಓದಿ: ಶಾಲಾ ಶ್ರೇಯೋಭಿವೃದ್ಧಿಗೆ ಹಣ ಸಂಗ್ರಹ.. ಆದೇಶ ಹಿಂಪಡೆಯುವಂತೆ ಸರ್ಕಾರಕ್ಕೆ ಹೆಚ್​ ವಿಶ್ವನಾಥ್ ಆಗ್ರಹ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.