ETV Bharat / state

ಶಿಕ್ಷಣ ನಮ್ಮನ್ನು ಸ್ವಾಭಿಮಾನಿಯನ್ನಾಗಿಸಿ ಶೋಷಣೆಯಿಂದ ಮುಕ್ತಗೊಳಿಸುತ್ತದೆ: ಸಿಎಂ ಸಿದ್ದರಾಮಯ್ಯ - ​ ETV Bharat Karnataka

ಶಿಕ್ಷಣ ಮೂಲಭೂತ ಹಕ್ಕಾಗಿರುವುದರಿಂದ ನಾವೆಲ್ಲರೂ ಶಿಕ್ಷಿತರಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Oct 4, 2023, 8:09 PM IST

ಬೆಂಗಳೂರು : ಶಿಕ್ಷಣ ನಮ್ಮನ್ನು ಸ್ವಾಭಿಮಾನಿಯನ್ನಾಗಿಸಿ ಶೋಷಣೆಯಿಂದ ಮುಕ್ತಗೊಳಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ನಿರ್ಮಿಸಿದ್ದ ಬಂಜಾರ ಭವನವನ್ನು ಇಂದು ಸಿದ್ದರಾಮಯ್ಯ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಸಾವಿರಾರು ವರ್ಷಗಳಿಂದ ನಾವೆಲ್ಲ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದೆವು. ಬ್ರಿಟಿಷರು ಬಂದ ಮೇಲೆ ಶಿಕ್ಷಣದ ಅವಕಾಶಗಳು ತೆರೆದುಕೊಂಡವು. ಡಾ.ಬಿ.ಆರ್.ಅಂಬೇಡ್ಕರ್ ಕಾರಣದಿಂದ ವಂಚಿತರೆಲ್ಲರಿಗೂ ಶಿಕ್ಷಣ ಮೂಲಭೂತ ಹಕ್ಕಾಯಿತು. ಈ ಕಾರಣಕ್ಕೇ ನಾವೆಲ್ಲರೂ ಶಿಕ್ಷಿತರಾಗಬೇಕು. ಶಿಕ್ಷಣ ನಮ್ಮನ್ನು ಸ್ವಾಭಿಮಾನಿಯನ್ನಾಗಿಸುತ್ತದೆ. ಸ್ವಾಭಿಮಾನಿಯಾದರೆ ಶೋಷಣೆಯಿಂದ ತಪ್ಪಿಸಿಕೊಳ್ಳಬಹುದು ಎಂದರು.

ಬಂಜಾರ ಸಮುದಾಯದ ಏಳಿಗೆಗೆ ಅಭಿವೃದ್ದಿಗೆ ಕಾಂಗ್ರೆಸ್ ಸರ್ಕಾರ ನೀಡಿದ ಕೊಡುಗೆಗಳ ಪಟ್ಟಿ ನೀಡಿದ ಸಿಎಂ, ಸೇವಾಲಾಲ್ ಮಠಕ್ಕೆ ನೆರವು ನೀಡಿದ್ದು ನಮ್ಮ ಸರ್ಕಾರ. ಸೇವಾಲಾಲ್ ಜಯಂತಿ ಆಚರಿಸಿದ್ದು ನಮ್ಮ ಸರ್ಕಾರ. ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದ್ದು ನಮ್ಮ ಸರ್ಕಾರ. ಇನ್ನೂ 5 ಸಾವಿರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲಾಗುವುದು. ಜೊಗೆತೆ ಬಂಜಾರ ಸಮುದಾಯದ ಅಭಿವೃದ್ಧಿಗೆ ಬಜೆಟ್​ನಲ್ಲಿ 275 ಕೋಟಿ ನೀಡಲಾಗಿತ್ತು. ಸೇವಲಾಲ್ ವಸತಿ ಶಾಲೆ ಸೇರಿದಂತೆ ಇನ್ನಿತರೆ ಬೇಡಿಕೆಗಳಿಗೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹಣ ನೀಡುತ್ತೇನೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಕುಂಚಿಟಿಗರ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಒತ್ತಡ: ಟಿ.ಬಿ.ಜಯಚಂದ್ರ ಭರವಸೆ

ನಾವು ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಮುನ್ನುಡಿ ಬರೆದೆವು. ಆದರೆ ಬಿಜೆಪಿಯವರು ನಮ್ಮ ಕೆಲಸವನ್ನು ಅವರು ಮಾಡಿದ್ದು ಎಂದು ಹೇಳಿಕೊಳ್ಳುತ್ತಿದ್ದಾರೆ. ಇದು ಹೇಗಿದೆ ಅಂದರೆ, "ಅಟ್ಟಿಕ್ಕಿದವರಿಗಿಂತ ಬೊಟ್ಟಿಕ್ಕಿದವರು ಮೇಲು" ಎನ್ನುವ ಗಾಧೆ ಮಾತಿನಂತಾಗಿದೆ ಬಿಜೆಪಿ ಸ್ಥಿತಿ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಮಾನಪ್ಪ ಲಮಾಣಿ, ಸೇವಾಲಾಲ್ ಪ್ರತಿಮೆ ಅನಾವರಣಗೊಳಿಸಿದರು. ಬಂಜಾರ ಕರಕುಷಲ ವಸ್ತು ಪ್ರದರ್ಶನವನ್ನು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್, ಶಾಸಕ ನೇಮಿರಾಜನಾಯ್ಕ್, ಅವಿನಾಶ್ ಜಾದವ್, ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಬಿ.ಸಿದ್ಯಾನಾಯ್ಕ್, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ: ನಾಳೆಯಿಂದ ಕೇಂದ್ರ ತಂಡದಿಂದ ಬರ ಪರಿಸ್ಥಿತಿ ಅಧ್ಯಯನ, ವಿವಿಧ ಜಿಲ್ಲೆಗಳಲ್ಲಿ ಪ್ರವಾಸ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.