ಬೆಂಗಳೂರು: ನಾನಾ ವೃತ್ತಿಪರ ಕೋರ್ಸ್ಗಳಿಗೆ ನಡೆಯುತ್ತಿರುವ ಸಿಇಟಿಯು ಮೊದಲ ದಿನವಾದ ಇಂದು ಸುಗಮ ಮತ್ತು ಪಾರದರ್ಶಕವಾಗಿ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಮೊದಲ ದಿನ 1,75,305 ವಿದ್ಯಾರ್ಥಿಗಳು ಜೀವಶಾಸ್ತ್ರ ಮತ್ತು 2,080,32 ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದಾರೆ. ನೋಂದಣಿ ಮಾಡಿಕೊಂಡಿರುವ ಒಟ್ಟು 2,16,559 ವಿದ್ಯಾರ್ಥಿಗಳಿಗೆ ಹೋಲಿಸಿದರೆ ಕ್ರಮವಾಗಿ ಶೇ. 80.95 ಮತ್ತು 96.06ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದರು ಎಂದು ತಿಳಿಸಿದ್ದಾರೆ.
ಎರಡನೇ ದಿನವಾದ ಶುಕ್ರವಾರ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಶನಿವಾರ ಹೊರನಾಡು ಮತ್ತು ಗಡಿನಾಡು ಕನ್ನಡ ವಿದ್ಯಾರ್ಥಿಗಳಿಗೆ ಆಯ್ದ ಆರು ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.
ಇದನ್ನೂ ಓದಿ: ಬೆಂಗಳೂರು ಅಭಿವೃದ್ಧಿ ಹೆಸರಿನಲ್ಲಿ ಮರಗಳ ಹನನ ಹೆಚ್ಚಳ; ರಾಷ್ಟ್ರೀಯ ಸಮೀಕ್ಷೆಯಲ್ಲಿ ಬಹಿರಂಗ