ETV Bharat / state

ಶಾಲೆಗಳು ಪುನಾರಂಭ: ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿದ ಶಿಕ್ಷಣ ಸಚಿವ

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಜೊತೆ ಮಾತುಕತೆ ನಡೆಸಿದರು. ಅಷ್ಟೇ ಅಲ್ಲದೆ, ಕೊರೊನಾ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

Karnataka School Reopen
ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿದ ಶಿಕ್ಷಣ ಸಚಿವ
author img

By

Published : Sep 6, 2021, 11:38 AM IST

Updated : Sep 6, 2021, 12:38 PM IST

ಬೆಂಗಳೂರು: ಕೊರೊನಾ ಸೋಂಕಿನ ಪ್ರಮಾಣ ಇಳಿಕೆ ಆಗುತ್ತಿರುವ ಹಿನ್ನೆಲೆ ಇಂದಿನಿಂದ ಪ್ರಾಥಮಿಕ ಹಂತದ 6 ರಿಂದ 8 ನೇ ತರಗತಿಗಳು ಪುನಾರಂಭವಾಗಿವೆ. ಈ ನಿಟ್ಟಿನಲ್ಲಿ ಇಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಶಾಲೆಗಳಿಗೆ ಭೇಟಿ ನೀಡಿದರು. ಇದಕ್ಕೂ ಮೊದಲು ವಿವೇಕಾನಂದ ಮೆಟ್ರೋ ನಿಲ್ದಾಣದ ಬಳಿಯ ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿದರು.

ಶಾಲೆಗಳು ಪುನಾರಂಭ: ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿದ ಶಿಕ್ಷಣ ಸಚಿವ

"ಕೊರೊನಾ ಇದೆ. ಮಾಸ್ಕ್ ಹಾಕಿಕೊಳ್ಳಿ. ಮಾಸ್ಕ್ ಹಾಕಿಲ್ಲ ಅಂದರೆ ಸ್ಕೂಲ್ ಬಂದ್​ ಮಾಡುತ್ತೇವೆ" ಎಂದು ಮಕ್ಕಳ ಜೊತೆಗೆ ಫ್ರೆಂಡ್ಲಿ ಮಾತುಕತೆ ನಡೆಸಿದರು. ಈ ವೇಳೆ ಮಕ್ಕಳು, ಬೇಡ ಸರ್ ನಾವು ಮಾಸ್ಕ್ ಹಾಕುತ್ತೇವೆ ಎಂದು ಪ್ರತಿಕ್ರಿಯಿಸಿದರು.

ಬಳಿಕ ಜೆ ಬಿ ನಗರದಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್​ಗೆ ಭೇಟಿ ನೀಡಿ, ಕೊರೊನಾ ಮಾರ್ಗಸೂಚಿ ಪಾಲನೆಯ ಬಗ್ಗೆ ಪರಿಶೀಲನೆ ನಡೆಸಿದರು.‌ ಅಷ್ಟೇ ಅಲ್ಲದೆ ಶಾಲೆಗೆ ಬಂದ ಮಕ್ಕಳಿಗೆ ಚಾಕೊಲೇಟ್ ನೀಡಿ ಸ್ವಾಗತಿಸಿದರು. ತರಗತಿಗಳಿಗೆ ಹೋಗಿ ಕೊರೊನಾ ಬಗ್ಗೆ ಮುಂಜಾಗ್ರತೆ ವಹಿಸುವಂತೆ ತಿಳಿ ಹೇಳಿದರು.

Last Updated : Sep 6, 2021, 12:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.