ಬೆಂಗಳೂರು: ಕೊರೊನಾದ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿಸಲು ಸಹಕರಿಸಿದ್ದ ಎಲ್ಲಾ ಶಿಕ್ಷಕರಿಗೆ ಸಚಿವ ಸುರೇಶ್ ಕುಮಾರ್ ಟ್ವಿಟರ್ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿತ್ತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಮಾರ್ಚ್ 27 ರಿಂದ ಏಪ್ರಿಲ್ 9ಕ್ಕೆ ಪರೀಕ್ಷೆ ಮುಗಿದು, ಪರೀಕ್ಷಾ ಫಲಿತಾಂಶಗಳು ಬರುತ್ತಿದ್ದವು. ಆದರೆ ಕೊರೊನಾದಿಂದಾಗಿ ಎಲ್ಲವೂ ಬದಲಾಗಿ ಜೂನ್ 25 ರಿಂದ ಜುಲೈ 3ರವರೆಗೆ ಪರೀಕ್ಷೆ ದಿನಾಂಕ ನಿಗದಿಪಡಿಸಲಾಗಿತ್ತು. ಇದೀಗ ಅಂತಿಮವಾಗಿ ಎಸ್ಎಸ್ಎಲ್ಸಿ ಪರೀಕ್ಷೆ ಮುಕ್ತಾಯವಾಗಿದೆ.
-
ಅಸಾಧ್ಯವನ್ನು ಸಾಧ್ಯವಾಗಿಸಿದ ಎಲ್ಲಾ ಶಿಕ್ಷಕ ಬಂಧುಗಳಿಗೆ ಹೃತ್ಪೂರ್ವಕ ಧನ್ಯವಾದಗಳು.
— S.Suresh Kumar, Minister - Govt of Karnataka (@nimmasuresh) July 3, 2020 " class="align-text-top noRightClick twitterSection" data="
">ಅಸಾಧ್ಯವನ್ನು ಸಾಧ್ಯವಾಗಿಸಿದ ಎಲ್ಲಾ ಶಿಕ್ಷಕ ಬಂಧುಗಳಿಗೆ ಹೃತ್ಪೂರ್ವಕ ಧನ್ಯವಾದಗಳು.
— S.Suresh Kumar, Minister - Govt of Karnataka (@nimmasuresh) July 3, 2020ಅಸಾಧ್ಯವನ್ನು ಸಾಧ್ಯವಾಗಿಸಿದ ಎಲ್ಲಾ ಶಿಕ್ಷಕ ಬಂಧುಗಳಿಗೆ ಹೃತ್ಪೂರ್ವಕ ಧನ್ಯವಾದಗಳು.
— S.Suresh Kumar, Minister - Govt of Karnataka (@nimmasuresh) July 3, 2020