ETV Bharat / state

ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಕೇವಲ ಈ ಅಂಕ ಪರಿಗಣಿಸುವಂತೆ ಪತ್ರ ಬರೆದ ಸಚಿವ ಸುರೇಶ್ ಕುಮಾರ್ - Education Minister Suresh Kumar letter to DCM Ashwaththa Narayana

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ತೇರ್ಗಡೆ‌ ಮಾಡುವ ನಿರ್ಧಾರದ ಹಿಂದೆ ನಾವು ನಿರ್ದಿಷ್ಟವಾದ ತರ್ಕವನ್ನು ಅನುಸರಿಸಿದ್ದೇವೆ. ಈ ಹಿನ್ನೆಲೆ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಕೇವಲ ಸಿಇಟಿ ಅಂಕ ಪರಿಗಣಿಸುವಂತೆ ಡಿಸಿಎಂ ಅಶ್ವತ್ಥ ನಾರಾಯಣರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.

Education Minister Suresh Kumar appeals to DCM Ashwaththa Narayana
ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಕೇವಲ ಸಿಇಟಿ ಅಂಕ ಪರಿಗಣಿಸುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ
author img

By

Published : Jun 5, 2021, 12:25 PM IST

ಬೆಂಗಳೂರು: ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಕೇವಲ ಸಿಇಟಿ ಅಂಕ ಪರಿಗಣಿಸುವಂತೆ ಡಿಸಿಎಂ ಅಶ್ವತ್ಥ ನಾರಾಯಣರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ. ಈ‌ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ಘೋಷಣಾ ಪ್ರಕ್ರಿಯೆಯಲ್ಲಿ ಆಯಾ ವಿದ್ಯಾರ್ಥಿಗಳ ಪ್ರಥಮ ಪಿಯುಸಿ ಹಾಗೂ ಹತ್ತನೇ ತರಗತಿ ಅಂಕಗಳನ್ನು ಮಾನದಂಡಗಳಾಗಿ ಪರಿಗಣಿಸಲಾಗುತ್ತಿದೆ.

ಹೀಗಾಗಿ ವೃತ್ತಿಪರ‌ ಕೋರ್ಸ್​ಗೆ ಪ್ರವೇಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಪಿಯುಸಿ ಫಲಿತಾಂಶ ಪರಿಗಣಿಸಿ ವೇಟೇಜ್ ನೀಡುವ ಪ್ರಕ್ರಿಯೆಯನ್ನು ಕೈಬಿಟ್ಟು, ಕೇವಲ ಸಿಇಟಿ ಪರೀಕ್ಷೆಗಳ ಅಂಕಗಳನ್ನು ಮಾತ್ರ ಶ್ರೇಯಾಂಕಕ್ಕೆ ಪರಿಗಣಿಸುವ ತೀರ್ಮಾನವನ್ನು ತೆಗೆದುಕೊಳ್ಳಬೇಕಾಗಿ ಸಚಿವ ಸುರೇಶ್ ಕುಮಾರ್ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ‌ ಸಚಿವ ಡಾ. ಅಶ್ವತ್ಥ ನಾರಾಯಣ ಅವರನ್ನು ಕೋರಿದ್ದಾರೆ. ಈ ಬಗ್ಗೆ ಸಚಿವರು ಪತ್ರವನ್ನೂ ಬರೆದಿದ್ದಾರೆ.

Education Minister Suresh Kumar appeals to DCM Ashwaththa Narayana
ಡಿಸಿಎಂ ಅಶ್ವತ್ಥ ನಾರಾಯಣರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರ

ಪತ್ರದಲ್ಲಿ ಏನಿದೆ?:

ನಿನ್ನೆ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಪಡಿಸುವ ತೀರ್ಮಾನವನ್ನು ತೆಗೆದುಕೊಂಡಿದ್ದೇವೆ. ಕೋವಿಡ್ ಪ್ರಸರಣದ ತೀವ್ರತೆ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಗಳ ನಡುವೆ ಸಮತೋಲನ ತರಲು ಈ ರೀತಿಯ ನಿರ್ಧಾರವು ಅವಶ್ಯಕವಾಗಿತ್ತು. ಅದನ್ನು ತಮ್ಮೊಂದಿಗೂ ನಾನು ಹಂಚಿಕೊಂಡಿದ್ದೇನೆ.‌

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ತೇರ್ಗಡೆ‌ ಮಾಡುವ ನಿರ್ಧಾರದ ಹಿಂದೆ ನಾವು ನಿರ್ದಿಷ್ಟವಾದ ತರ್ಕವನ್ನು ಅನುಸರಿಸಿದ್ದೇವೆ. ಈ ವಿದ್ಯಾರ್ಥಿಗಳ ‌ಪ್ರಥಮ ಪಿಯುಸಿ ಅಂಕಗಳಲ್ಲದೇ ಎಸ್​ಎಸ್​ಎಲ್​ಸಿ ಫಲಿತಾಂಶವನ್ನೂ ಪರಿಗಣಿಸಿ ಅದಕ್ಕೆ ಸಮನಾದ ಸೂಕ್ತ ಮೌಲ್ಯವನ್ನು ಸೇರ್ಪಡಿಸಿ ಗ್ರೇಡಿಂಗ್ ಫಲಿತಾಂಶವನ್ನು ನೀಡಲು ಸಹ ನಿರ್ಧಾರ ಮಾಡಿದ್ದೇವೆ. ಅಲ್ಲದೇ ಯಾವುದೇ ವಿದ್ಯಾರ್ಥಿಯು ತನ್ನ ಫಲಿತಾಂಶದ ಬಗ್ಗೆ ತೃಪ್ತಿ ಹೊಂದದೇ ಇದ್ದಲ್ಲಿ ಸೂಕ್ತ ಸಮಯದಲ್ಲಿ ನಡೆಸಲಾಗುವ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದಾಗಿದೆ ಎಂದೂ ಘೋಷಿಸಿದ್ದೇವೆ. ಇಂದಿನ ಸಂದರ್ಭದಲ್ಲಿ ಇದಕ್ಕಿಂತ ಪ್ರಸ್ತುತವಾದ ನಿರ್ಧಾರವನ್ನು ತೆಗೆದುಕೊಳ್ಳುವುದು‌ ಕಷ್ಟ ಸಾಧ್ಯವಾಗಿರುತ್ತದೆ.

ಸಾಮಾನ್ಯವಾಗಿ ದ್ವಿತೀಯ ಪಿಯುಸಿ ಅಂಕಗಳನ್ನು ಸಿಇಟಿ ಪರೀಕ್ಷೆಗೆ ಪರಿಗಣಿಸಿ ಸೂಕ್ತ ವೇಟೇಜ್ ಕಲ್ಪಿಸುವ ಮೂಲಕ ಫಲಿತಾಂಶವನ್ನು ಘೋಷಿಸಲಾಗುತ್ತದೆ. ಈ ಬಾರಿಯ ಗ್ರೇಡಿಂಗ್ ಫಲಿತಾಂಶವು ವಿದ್ಯಾರ್ಥಿಗಳ ಪ್ರತಿಭೆಯನ್ನು ಖಚಿತವಾಗಿ ವ್ಯಕ್ತ‌ಪಡಿಸಿದರೂ ಅವರಿಗೆ ಅದನ್ನು ನಿರಾಕರಿಸಿ ಇನ್ನೊಮ್ಮೆ ಪರೀಕ್ಷೆ ಬರೆಯುವ ಅವಕಾಶವನ್ನು ಕಲ್ಪಿಸಲಿದೆ. ಹಾಗಾಗಿ ಈ ಬಾರಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಸಿಇಟಿ ಪರೀಕ್ಷೆಗೆ ಗಣನೆಗೆ ತೆಗೆದುಕೊಳ್ಳುವಾಗ, ಈ ಫಲಿತಾಂಶವನ್ನು ಪ್ರಶ್ನಿಸಿ ಇನ್ನೊಮ್ಮೆ ಪರೀಕ್ಷೆ ಬರೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಬಹುದು ಎಂಬುದನ್ನು ಗಮನಿಸಬೇಕಾಗುತ್ತದೆ.

ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ಈ ಬಾರಿಗೆ ಸೀಮಿತಗೊಂಡಂತೆ ತಮ್ಮ ಇಲಾಖೆಯು ನಡೆಸಲು‌ ಉದ್ದೇಶಿಸಿರುವ ವೃತ್ತಿಪರ ಕೋರ್ಸ್ ದಾಖಲಾತಿಗೆ ಸಂಬಂಧಿಸಿದ ಸಿಇಟಿ ಪರೀಕ್ಷೆಗೆ ವೇಟೇಜ್ ನೀಡುವ ಪ್ರಕ್ರಿಯೆಯನ್ನು ತಾವು ಕೈಬಿಟ್ಟು, ಕೇವಲ ಸಿಇಟಿ ಪರೀಕ್ಷೆಗಳ ಅಂಕಗಳನ್ನು ಮಾತ್ರ ರ್ಯಾಂಕಿಂಗ್​​​​ಗೆ ಪರಿಗಣಿಸುವ ತೀರ್ಮಾನವನ್ನು ತೆಗೆದುಕೊಳ್ಳಬೇಕಾಗಿ ತಮ್ಮನ್ನು ಕೋರುತ್ತೇನೆ. ಈ ಕುರಿತಂತೆ ನಾನು ತಮ್ಮೊಂದಿಗೆ ಖುದ್ದಾಗಿ ಮಾತನಾಡಿರುವ ಅಂಶವನ್ನು ಸಹ ಇಲ್ಲಿ ಸ್ಮರಿಸುತ್ತಿದ್ದೇನೆ ಅಂತ ವಿವರಿಸಿದ್ದಾರೆ.

ಸದ್ಯ ಇದಕ್ಕೆ ಉನ್ನತ ಶಿಕ್ಷಣ ಇಲಾಖೆ, ಸಚಿವರು ಯಾವ ರೀತಿ ತೀರ್ಮಾನ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನ ಕಾದು ನೋಡಬೇಕಿದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.