ETV Bharat / state

ಶಿಕ್ಷಣ ಸಚಿವರ ಹೇಳಿಕೆ ಬೇಜವಾಬ್ದಾರಿಯುತ, ಕ್ರೂರತನದಿಂದ ಕೂಡಿದೆ: ಸಿದ್ದರಾಮಯ್ಯ ಆಕ್ರೋಶ

ಮಕ್ಕಳು ಶಾಲೆಗೆ ಬರುವುದು ಕಲಿಯುವುದಕ್ಕೆ ಹೊರತು, ಶೂ ಸಾಕ್ಸ್ ಹಾಕಿಕೊಳ್ಳುವುದಕ್ಕೆ ಅಲ್ಲ ಎಂಬ ಶಿಕ್ಷಣ ಸಚಿವರ ಹೇಳಿಕೆಗೆ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Siddaramaiah responded to BC Nagesh's statement
ಸಿದ್ದರಾಮಯ್ಯ
author img

By

Published : Jul 7, 2022, 6:27 PM IST

ಬೆಂಗಳೂರು: ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡುವ ವಿಚಾರದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ನೀಡಿರುವ ಹೇಳಿಕೆ ಅಮಾನವೀಯ. ಅವರ ಮಾತುಗಳು ಬೇಜವಾಬ್ದಾರಿತನ ಹಾಗೂ ಕ್ರೂರತನದಿಂದ ಕೂಡಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ಚುನಾವಣೆಗಳು ಹತ್ತಿರ ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ. ತಾವು ಮಾತನಾಡಬೇಕಾದರೆ ಕನಿಷ್ಠ ಮಟ್ಟದ ಪ್ರಜ್ಞೆ, ಲಜ್ಜೆ, ನೈತಿಕತೆ ಇವ್ಯಾವುಗಳೂ ಇಲ್ಲದಂತೆ ವರ್ತಿಸಲು ಪ್ರಾರಂಭಿಸುತ್ತಾರೆ. ಅದರ ಭಾಗವಾಗಿ ಕಲಬುರಗಿಯಲ್ಲಿ ನಿನ್ನೆ ಮಾತನಾಡಿದ್ದಾರೆ.

ಶಿಕ್ಷಣ ಸಚಿವರನ್ನು ಪ್ರಶ್ನಿಸಿದ ಸಿದ್ದು: ಸಚಿವರು ‘ಮಕ್ಕಳು ಶಾಲೆಗೆ ಬರುವುದು ಕಲಿಯುವುದಕ್ಕೆ ಹೊರತು, ಶೂ ಸಾಕ್ಸ್ ಹಾಕಿಕೊಳ್ಳುವುದಕ್ಕೆ ಅಲ್ಲ’ ಎಂದಿದ್ದಾರೆ. ನಾನು ನಾಗೇಶ್ ಅವರನ್ನು ಕೇಳ ಬಯಸುತ್ತೇನೆ, ನಿಮ್ಮ ಮಕ್ಕಳಾಗಲಿ ಅಥವಾ ನೀವಾಗಲಿ ಎಂದಾದರೂ ಕಾಲಿಗೆ ಚಪ್ಪಲಿ ಇಲ್ಲದೇ ಓಡಾಡಿದ ಅನುಭವ ಇದೆಯೇ, ಅದರ ಅವಮಾನ, ಕೀಳರಿಮೆಗಳನ್ನು ಅನುಭವಿಸಿದ ಉದಾಹರಣೆಗಳಿವೆಯೇ? ಎಂದು ಪ್ರಶ್ನಿಸಿದ್ದಾರೆ.

ಮಕ್ಕಳ ಮೆದುಳಿಗೆ ಸಂಘ ವಿಷ ಹಾಕುತ್ತಿದೆ: ಕಾನ್ವೆಂಟ್ ಸ್ಕೂಲಿಗೆ ಹೋಗುವ ಮಕ್ಕಳು ಶುಭ್ರ ಬಟ್ಟೆ, ಟೈ, ಕಾಲಿಗೆ ಶೂ, ಸಾಕ್ಸ್ ಹಾಕಿಕೊಂಡು ನಡೆದಾಡುವುದನ್ನು ನೋಡಿದಾಗ ಅದೇ ಬೀದಿಯಲ್ಲಿ, ಅದೇ ಹಳ್ಳಿಯಲ್ಲಿ ಆಟವಾಡುವ ಬಡವರ ಮಕ್ಕಳು ಬರಿಗಾಲಲ್ಲಿ, ಹರಿದ ಬಟ್ಟೆಯಲ್ಲಿದ್ದರೆ ನಿಮಗೆ ಏನೂ ಅನ್ನಿಸುವುದಿಲ್ಲವೆ? ಅಥವಾ ಆ ಕಷ್ಟದಲ್ಲಿರುವ ಮಕ್ಕಳಿಗೆ ಏನನ್ನಿಸುತ್ತದೆ ಎಂಬ ಅರಿವಾದರೂ ನಿಮಗೆ ಇದೆಯೇ?.

ಅವರು ಹಾಗೆಯೆ ಬರಿಗಾಲಿನಲ್ಲಿ ಇರಬೇಕೆಂದು ರಾಷ್ಟ್ರ ಭಕ್ತಿಯ ಬಗ್ಗೆ ಮಾತನಾಡುವ ಸಂಘ ನಿಮಗೆ ಹೇಳಿಕೊಟ್ಟಿದೆಯೇ? ಹೇಳಿಕೊಟ್ಟಿರಲು ಸಾಧ್ಯವಿದೆ. ಶೂದ್ರರ ಬಳಿ ವಿದ್ಯೆ, ಹಣ, ಅಧಿಕಾರಗಳು ಇರಬಾರದೆಂಬ ಕಾರಣಕ್ಕೆ ತಾನೆ, ಈ ಸಂಘ ಹುಟ್ಟಿಕೊಂಡು ನಮ್ಮ ಮಕ್ಕಳ ಮೆದುಳಿಗೆ ವಿಷ ಹಾಕುತ್ತಿರುವುದು.

ಬೇಕಾದ್ದನ್ನು ಕೊಡುವ ಯೋಗ್ಯತೆ ಇಲ್ಲ: ದಲಿತರು, ಅಲೆಮಾರಿಗಳು, ಹಿಂದುಳಿದವರ ಹಾಗೂ ಎಲ್ಲ ಜಾತಿಯ ಬಡವರ ಮಕ್ಕಳಿಗೆ ಸಣ್ಣ ಸ್ವಾಭಿಮಾನ ಇರಲಿ, ಕಲಿಯುವ ಶಾಲೆಗೆ ಹೋಗುವ ಹುಮ್ಮಸ್ಸು ಬರಲಿ ಎಂಬ ಕಾರಣಕ್ಕೆ ನಾವು ಮಕ್ಕಳ ಸ್ನೇಹಿಯಾದ ಯೋಜನೆಗಳನ್ನು ಜಾರಿಗೆ ತಂದಿದ್ದೆವು. ನಿಮ್ಮ ಸರ್ಕಾರಕ್ಕೆ ಮಕ್ಕಳಿಗೆ ಕೊಡಬೇಕಾದ್ದನ್ನು ಕೊಡುವ ಯೋಗ್ಯತೆ ಇಲ್ಲದಿದ್ದರೆ ಅವರನ್ನು ಹಂಗಿಸುವ ಸಾಹಸ ಮಾಡಬೇಡಿ.

ನಿಮ್ಮ ಸರ್ಕಾರಕ್ಕೆ ಕನಿಷ್ಠ ಶೂ, ಸಾಕ್ಸ್, ಸೈಕಲ್‍ಗಳನ್ನೂ ನೀಡಲಾಗದಷ್ಟು ದರಿದ್ರ ಬಂದಿದೆಯೆ? ಹಾಗಿದ್ದರೆ ನಾಡಿನ ಬಡವನೊಬ್ಬನಿಂದಲೂ ವರ್ಷಕ್ಕೆ 1 ಲಕ್ಷ ರೂಪಾಯಿಗಳಷ್ಟು ತೆರಿಗೆಯನ್ನು ಮೋದಿ ಸರ್ಕಾರ ಮತ್ತು ಬೊಮ್ಮಾಯಿಯವರ ಸರ್ಕಾರಗಳು ವಸೂಲಿ ಮಾಡುತ್ತಿವೆಯೆಂದು ಪತ್ರಿಕೆಗಳು ಸಮೀಕ್ಷೆ ಮಾಡಿದ್ದವು. ಹಾಗೆ ಬಡವರಿಂದ ದೋಚಿಕೊಂಡ ತೆರಿಗೆ ಹಣವನ್ನು ಏನು ಮಾಡುತ್ತಿದ್ದೀರಿ? 40 ಪರ್ಸೆಂಟ್ ಕಮಿಷನ್ ಸರ್ಕಾರಕ್ಕೆ ಮಕ್ಕಳ ಶಿಕ್ಷಣವನ್ನೂ ನೋಡಿಕೊಳ್ಳುವ ಯೋಗ್ಯತೆ ಇಲ್ಲದ ಮೇಲೆ ನೀವು ಯಾರ ಸುಖಕ್ಕಾಗಿ ಸರ್ಕಾರ ನಡೆಸುತ್ತಿದ್ದೀರಿ? ಎಂದು ಕೇಳಿದ್ದಾರೆ.

ಶಿಕ್ಷಕರ ನೇಮಕಾತಿ: ನಮ್ಮ ಸರ್ಕಾರದ ಅವಧಿಯಲ್ಲಿ 7,905 ಪ್ರಾಥಮಿಕ ಶಾಲಾ ಶಿಕ್ಷಕರು, 1,689 ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಮಾಡಿದ್ದೆವು. ಜೊತೆಗೆ 10,000 ಪದವೀಧರ ವಿಷಯವಾರು ಶಿಕ್ಷಕರು, ದೈಹಿಕ ಶಿಕ್ಷಕರು ಹಾಗೂ ಗ್ರಂಥ ಪಾಲಕರ ನೇಮಕಾತಿಯು ಅಂತಿಮಗೊಳಿಸುವ ಹಂತಕ್ಕೆ ಬಂದಿತ್ತು. ಇದರಿಂದಾಗಿ ಒಟ್ಟು 20,000 ಶಿಕ್ಷಕರ ನೇಮಕಾತಿ ಮಾಡಿದಂತಾಗಿತ್ತು. ಇದರ ಜೊತೆಗೆ ನಮ್ಮ ಅವಧಿಯಲ್ಲಿ 20,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೆವು.

ನಮ್ಮ ಅವಧಿಯಲ್ಲಿ 1,763 ಪಿಯು ಕಾಲೇಜುಗಳ ಉಪನ್ಯಾಸಕರನ್ನು ನೇಮಕಾತಿ ಮಾಡಿದ್ದೆವು. ನಮ್ಮ ಅವಧಿಯಲ್ಲಿ 47 ಲಕ್ಷ ಮಕ್ಕಳಿಗೆ ಸಮವಸ್ತ್ರ, ಶೂ ಮತ್ತು ಸಾಕ್ಸ್ ಹಾಗೂ 5 ಲಕ್ಷ ಮಕ್ಕಳಿಗೆ ಬೈಸಿಕಲ್ ನೀಡಿದ್ದೆವು. ನಾವು ಮಕ್ಕಳ ಪೌಷ್ಟಿಕತೆ ಹೆಚ್ಚಿಸುವುದಕ್ಕಾಗಿಯೆ ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ವಾರದಲ್ಲಿ 5 ದಿನ ಕೆನೆಭರಿತ ಹಾಲನ್ನು ನೀಡಿದ್ದೆವು ಎಂದರು.

ವಿದ್ಯಾರ್ಥಿ ವೇತನವನ್ನು ನೀಡಿಲ್ಲ: ನಮ್ಮ ಸರ್ಕಾರದ ಅವಧಿಯಲ್ಲಿ ನನ್ನ ಮಾಹಿತಿಯ ಪ್ರಕಾರ 71,279 ಕೊಠಡಿಗಳ ನವೀಕರಣ, ಪುನರ್ನವೀಕರಣ ಕಾರ್ಯಗಳನ್ನು ಮಾಡಿ ಮುಗಿಸಿದ್ದೆವು. ಈ ಕುರಿತು ಇನ್ನಷ್ಟು ಮಾಹಿತಿಯನ್ನು ಮುಂದೆ ಬಿಡುಗಡೆ ಮಾಡುವೆ. ಬಿಜೆಪಿ ಸರ್ಕಾರ ಎಷ್ಟು ಜನ ಶಿಕ್ಷಕರನ್ನು ನೇಮಕ ಮಾಡಿದೆ? ಎಷ್ಟು ಜನ ಮಕ್ಕಳಿಗೆ ಸೈಕಲ್ ನೀಡಿದೆ? ಎಷ್ಟು ಶಾಲೆಗಳನ್ನು, ವಸತಿ ಶಾಲೆಗಳನ್ನು ನಿರ್ಮಿಸಿದೆ ಎಂದು ಹೇಳಬೇಕು. ಮಕ್ಕಳಿಗೆ ಶೂ, ಸಾಕ್ಸ್, ಪುಸ್ತಕ, ಸೈಕಲ್ ಅಷ್ಟೆ ಅಲ್ಲ ಸಮರ್ಪಕವಾಗಿ ವಿದ್ಯಾರ್ಥಿ ವೇತನಗಳನ್ನೂ ಬಿಜೆಪಿ ಸರ್ಕಾರಕ್ಕೆ ನೀಡಲು ಸಾಧ್ಯವಾಗಿಲ್ಲ ಎಂದಿದ್ದಾರೆ.

ಸರ್ಕಾರದ ಕೆಲಸಗಳು ಉತ್ತರ ನೀಡಬೇಕು: ನಮ್ಮ ಸರ್ಕಾರ ತೆಗೆದುಕೊಂಡ ಕ್ರಮಗಳಿಂದ ಮಕ್ಕಳ ಅಪೌಷ್ಟಿಕತೆ ಕಡಿಮೆಯಾಗಿತ್ತು. ಶಾಲೆಗಳ ಹಾಜರಾತಿ ಹೆಚ್ಚಿತ್ತು. ಆದರೆ ಈಗ ಸರ್ಕಾರವೆ ಹೈ ಕೋರ್ಟಿಗೆ ಸಲ್ಲಿಸಿರುವ ವರದಿ ಪ್ರಕಾರ ಸುಮಾರು 10.12 ಲಕ್ಷ ಮಕ್ಕಳು ಶಾಲೆಯಿಂದ ಹೊರಗೆ ಇದ್ದಾರೆ. ಈ ಮಕ್ಕಳ ಭವಿಷ್ಯವೇನಾಗಬಹುದು ಎಂದು ಸರ್ಕಾರ ಯೋಚಿಸಿದೆಯೆ? ಆಡಳಿತ ಪಕ್ಷದಲ್ಲಿರುವ ಸಚಿವರು ವಿರೋಧ ಪಕ್ಷಗಳಿಗೆ ಪ್ರಶ್ನೆ ಕೇಳುವುದಲ್ಲ. ಸರ್ಕಾರದ ಕೆಲಸಗಳು ಉತ್ತರ ನೀಡುವಂತೆ ಇರಬೇಕೆ ಹೊರತು, ಮಂತ್ರದಿಂದ ಮಾವಿನ ಉದುರಿಸಲು ಸಾಧ್ಯವಿಲ್ಲ.

ಇದನ್ನೂ ಓದಿ: ಪಠ್ಯ ಪುಸ್ತಕ ಮುದ್ರಣ ವಿಚಾರ.. ಖರ್ಚು-ವೆಚ್ಚ ಕೇಳಿದ್ದಕ್ಕೆ ಸಚಿವರು ಗರಂ, ಮಾಧ್ಯಮಗೋಷ್ಟಿ ಅರ್ಧಕ್ಕೇ ಮೊಟಕು

ಅಷ್ಟಕ್ಕೂ ಶಿಕ್ಷಣ ಸಚಿವರಿಗೆ ಕಾಳಜಿ, ಬದ್ಧತೆ ಹಾಗೂ ಧಮ್ ಇದ್ದರೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯಲ್ಲಿ 2008 ರಿಂದ ಇದುವರೆಗೆ ಏನೇನಾಗಿದೆ? ಯಾವ ಸಾಧನೆಗಳಾಗಿವೆ ಎಂಬ ಕುರಿತು ಹಾಗೂ ಈ 14 ವರ್ಷಗಳಲ್ಲಿ ಸದರಿ ಇಲಾಖೆಯಲ್ಲಿ ಖರ್ಚು ಮಾಡಿದ ಪ್ರತಿ ಪೈಸೆಗೂ ಸಂಬಂಧಿಸಿದಂತೆ ಶ್ವೇತ ಪತ್ರ ಹೊರಡಿಸಬೇಕೆಂದು ಆಗ್ರಹಿಸುತ್ತೇನೆ. ಹಾಗೂ ಮಕ್ಕಳ ಕಲ್ಯಾಣಕ್ಕಾಗಿ ಇರುವ ಎಲ್ಲ ಹಿಂದಿನ ಯೋಜನೆಗಳನ್ನು ಮುಂದುವರೆಸಬೇಕು. ಶೂ, ಸಾಕ್ಸ್, ಸೈಕಲ್, ಹಾಲು, ಸಮವಸ್ತ್ರ, ಪುಸ್ತಕ, ವ್ಯವಸ್ಥಿತ ಕೊಠಡಿಗಳನ್ನು ಕೂಡಲೆ ಒದಗಿಸಬೇಕು ಎಂದು ಒತ್ತಾಯಿಸಿದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.