ETV Bharat / state

ಶಿಕ್ಷಕರನ್ನು ಚುನಾವಣಾ ಕರ್ತವ್ಯದಿಂದ ಕೈಬಿಡಿ: ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದ ಸುರೇಶ್ ಕುಮಾರ್ - Election Duty

ಶಾಲಾ ಶಿಕ್ಷಕರನ್ನ ಮತಗಟ್ಟೆ ಮಟ್ಟದ ಅಧಿಕಾರಿ, ಬಿಎಲ್​ಒದಂತಹ ಕರ್ತವ್ಯಗಳಿಂದ ವಿಮುಕ್ತಿಗೊಳಿಸಿ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದಾರೆ.

ಶಾಲಾ ಶಿಕ್ಷಕರನ್ನ ಮತಗಟ್ಟೆ ಮಟ್ಟದ ಅಧಿಕಾರಿ, ಬಿಎಲ್​ಒದಂತಹ ಕರ್ತವ್ಯಗಳಿಂದ ವಿಮುಕ್ತಿಗೊಳಿಸಿ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದಾರೆ
author img

By

Published : Nov 12, 2019, 10:58 PM IST

ಬೆಂಗಳೂರು: ಶಾಲಾ ಶಿಕ್ಷಕರನ್ನ ಮತಗಟ್ಟೆ ಮಟ್ಟದ ಅಧಿಕಾರಿ, ಬಿಎಲ್​ಒದಂತಹ ಕರ್ತವ್ಯಗಳಿಂದ ವಿಮುಕ್ತಿಗೊಳಿಸಿ ಎಂದು ಪ್ರಾಥಮಿಕ ಮತ್ತು ಪ್ರೌಢ
ಶಿಕ್ಷಣ ಸಚಿವ ಸುರೇಶ್ ಕುಮಾರ್ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಮೊದಲಿನಿಂದಲೂ ಶಿಕ್ಷಕರನ್ನು ಮತಗಟ್ಟೆ ಮಟ್ಟದ ಅಧಿಕಾರಿಗಳು, ಚುನಾವಣೆ ಕರ್ತವ್ಯ, ಮತದಾರ ಚೀಟಿಗೆ ಹೆಸರು ನೊಂದಾಯಿಸುವುದು ಸೇರಿದಂತೆ ಹಲವಾರು ಕೆಲಸಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಆದರೆ ಇತ್ತೀಚೆಗೆ ಶಿಕ್ಷಕರಿಗೆ ಬೋಧಕೇತರವಾದ ಇಂತಹ ಹಲವಾರು ಕರ್ತವ್ಯಗಳು ಹೆಚ್ಚಾಗುತ್ತಿರುವುದರಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ.‌ ಇದರಿಂದ ವಿದ್ಯಾರ್ಥಿ ಸಮೂಹಕ್ಕೆ ಪರೋಕ್ಷವಾಗಿ ಹೊಡೆತ ಬೀಳುವಂತಾಗಿದೆ. ಹಾಗೆಯೇ ಶಿಕ್ಷಕರು ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ನಿಗಾವಹಿಸಲು ಹಾಗೂ ಶಾಲಾ ಚುಟುವಟಿಕೆಗಳ ಮೇಲೆ ಪೂರ್ಣ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ. ಇದು ಶಿಕ್ಷಣದ ಗುಣಮಟ್ಟ ಕುಸಿಯಲು ಕಾರಣವಾಗುತ್ತಿದೆ. ಯಾವುದೇ ಸಮಾಜ ಹಾಗೂ ರಾಷ್ಟ್ರದ ಅಭಿವೃದ್ಧಿಯಲ್ಲಿ ಗುಣಮಟ್ಟದ ಶಿಕ್ಷಣದ ಪಾತ್ರ ಪ್ರಮುಖವಾಗಿರುತ್ತದೆ.

ಇಂದಿನ ಮಕ್ಕಳೇ ರಾಷ್ಟ್ರದ ಮುಂದಿನ ಪ್ರಜೆಗಳಾಗಿರುವುದರಿಂದ ನಾಡಿನ ಅಭಿವೃದ್ಧಿಯಲ್ಲಿ ಉತ್ತಮ ಪ್ರಜೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ನಮ್ಮ ಶಿಕ್ಷಕರು ಉತ್ತಮ ಸಮಾಜದ ನಿರ್ಮಾತೃಗಳಾಗಿರುವುದರಿಂದ ಅವರು ತಮ್ಮ ವಿದ್ಯಾಸಮೂಹದೊಂದಿಗೆ ಶೈಕ್ಷಣಿಕ ಚಟುವಟಿಕೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಸಮರ್ಪಣಾ ಮನೋಭಾವದಿಂದ ತೊಡಗಿಸಿಕೊಳ್ಳಬೇಕಾದ ಅಗತ್ಯವಿದೆ.

ಈ ಹಿನ್ನೆಲೆಯಲ್ಲಿ ಶಿಕ್ಷಕರು ಸಂಪೂರ್ಣವಾಗಿ ವಿದ್ಯಾರ್ಥಿಗಳ ಹಾಗೂ ಶೈಕ್ಷಣಿಕ ಚುಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವು ಮಾಡಿಕೊಡಬೇಕೆಂದು ಪತ್ರ ಬರೆದಿದ್ದಾರೆ.

Intro:ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದ ಶಿಕ್ಷಣ ಸಚಿವ ಸುರೇಶ್ ಕುಮಾರ್!!!

ಬೆಂಗಳೂರು: ಶಾಲಾ ಶಿಕ್ಷಕರನ್ನ ಮತಗಟ್ಟೆ ಮಟ್ಟದ- ಬಿಎಲ್ಒ ದಂತಹ ಕರ್ತವ್ಯಗಳಿಂದ ವಿಮುಕ್ತಿಗೊಳಿಸಿ ಅಂತ ಪ್ರಾಥಮಿಕ ಮತ್ತು ಪ್ರೌಢ
ಶಿಕ್ಷಣ ಸಚಿವ ಸುರೇಶ್ ಕುಮಾರ್ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದಾರೆ.‌ ರಾಜ್ಯದಲ್ಲಿ ಮೊದಲಿನಿಂದಲೂ ಶಿಕ್ಷಕರನ್ನು ಮತಗಟ್ಟೆ ಮಟ್ಟದ ಅಧಿಕಾರಿಗಳು, ಚುನಾವಣೆ ಕರ್ತವ್ಯ, ಮತದಾರ ಚೀಟಿಗೆ ಹೆಸರು ನೊಂದಾಯಿಸುವುದು ಸೇರಿದಂತೆ ಹಲವಾರು ಕೆಲಸಗಳಿಗೆ ಬಳಸಿಕೊಳ್ಳಲಾಗುತ್ತಿದೆ.

ಆದರೆ ಇತ್ತೀಚಿಗೆ ಶಿಕ್ಷಕರಿಗೆ ಬೋಧಕೇತರವಾದ ಇಂತಹ ಹಲವಾರು ಕರ್ತವ್ಯಗಳು ಹೆಚ್ಚಾಗುತ್ತಿರುವುದರಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ.‌ ಇದರಿಂದ ವಿದ್ಯಾರ್ಥಿ ಸಮೂಹಕ್ಕೆ ಪರೋಕ್ಷವಾಗಿ ಹೊಡೆತ ಬೀಳುವಂತಾಗಿದೆ. ಬಿಎಲ್ಒದಂತಹ ಕೆಲಸಗಳಿಗೆ ಹೆಚ್ಚಿನ ಸಮಯ ವ್ಯಯವಾಗುತ್ತಿರುವುರಿಂದ ಸಕಾಲದಲ್ಲಿ ಪಠ್ಯಕ್ರಮ (ಸಿಲೆಬಸ್) ಮುಗಿಸಲು ಶಿಕ್ಷಕರು ಪ್ರಯಾಸ ಪಡುವಂತಾಗಿದೆ.

ಹಾಗೆಯೇ ಶಿಕ್ಷಕರು ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ನಿಗಾವಹಿಸಲು ಹಾಗೂ ಶಾಲಾ ಚುಟುವಟಿಕೆಗಳ ಮೇಲೆ ಪೂರ್ಣ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ. ಇದು ಶಿಕ್ಷಣದ ಗುಣಮಟ್ಟ ಕುಸಿಯಲು ಕಾರಣವಾಗುತ್ತಿದೆ. ಯಾವುದೇ ಸಮಾಜ ಹಾಗೂ ರಾಷ್ಟ್ರದ ಅಭಿವೃದ್ಧಿಯಲ್ಲಿ ಗುಣಮಟ್ಟದ ಶಿಕ್ಷಣದ ಪಾತ್ರ ಪ್ರಮುಖವಾಗಿರುತ್ತದೆ ಎಂಬುದು ತಮಗೆ ತಿಳಿಯದ ಸಂಗತಿಯೇನಲ್ಲ.

ಇಂದಿನ ಮಕ್ಕಳೇ ರಾಷ್ಟ್ರದ ಮುಂದಿನ ಪ್ರಜೆಗಳಾಗಿರುವುದರಿಂದ ನಾಡಿನ ಅಭಿವೃದ್ಧಿಯಲ್ಲಿ ಉತ್ತಮ ಪ್ರಜೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ನಮ್ಮ ಶಿಕ್ಷಕರು ಉತ್ತಮ ಸಮಾಜದ ನಿರ್ಮಾತೃ ಗಳಾಗಿರುವುದರಿಂದ ಅವರು ತಮ್ಮ ವಿದ್ಯಾಸಮೂಹದೊಂದಿಗೆ ಶೈಕ್ಷಣಿಕ ಚಟುವಟಿಕೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಸಮರ್ಪಣಾ ಮನೋಭಾವದಿಂದ ತೊಡಗಿಸಿಕೊಳ್ಳಬೇಕಾದ ಅಗತ್ಯವಿದೆ.

ಈ ಹಿನ್ನೆಲೆಯಲ್ಲಿ ಶಿಕ್ಷಕರನ್ನು ಮತಗಟ್ಟೆ ಮಟ್ಟದ ಅಧಿಕಾರಿ-ಬಿಎಲ್ಒದಂತಹ ಕರ್ತವ್ಯಗಳಿಂದ ವಿಮುಕ್ತಿಗೊಳಿಸಿ ಅವರು ಸಂಪೂರ್ಣವಾಗಿ ವಿದ್ಯಾರ್ಥಿಗಳ ಹಾಗೂ ಶೈಕ್ಷಣಿಕ ಚುಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವು ಮಾಡಿಕೊಡಬೇಕೆಂದು ಪತ್ರ ಬರೆದಿದ್ದಾರೆ..‌

KN_BNG_4_ELECTION_DUTY_MINISTER_LETTER_SCRIPT_7201801Body:..Conclusion:..
ETV Bharat Logo

Copyright © 2025 Ushodaya Enterprises Pvt. Ltd., All Rights Reserved.