ETV Bharat / state

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ: ಆರೋಪಿಗಳ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

ಘಟನೆಯಲ್ಲಿ ಆರೋಪಿಗಳ ಪಾತ್ರವಿದೆ ಎನ್ನುವ ಕುರಿತಂತೆ ಸಾಕ್ಷ್ಯಧಾರಗಳಿಲ್ಲದೆ ಬಂಧನ ಮಾಡಲಾಗಿದೆ, ಇದು ಕಾನೂನು ಬಾಹಿರ ಕ್ರಮವಾಗಿದೆ ಎಂದು ಪ್ರಕರಣದ ವಿಚಾರಣೆಗೆ ನ್ಯಾಯಪೀಠವು ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಗೆ ತಡೆ ನೀಡಿದೆ.

egg-thrown-at-siddaramaiahs-car-high-court-stays-the-case-against-the-accused
ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ: ಆರೋಪಿಗಳ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
author img

By

Published : Dec 22, 2022, 10:12 PM IST

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿನ ಮೇಲೆ ಕೋಳಿ ಮೊಟ್ಟೆ ಎಸೆತ ಪ್ರಕರಣದಲ್ಲಿ ಭಾಗಿಯಾಗಿರುವ ಇಬ್ಬರು ಆರೋಪಿಗಳ ವಿರುದ್ಧದ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.

ಪ್ರಕರಣದ ಇಬ್ಬರು ಆರೋಪಿಗಳಾದ ಎನ್.ಡಿ.ಸಂಪತ್​ ಕುಮಾರ್​ ಮತ್ತು ಬಿ.ಎಂ.ಸಂತೋಷ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬಿ.ರಾಚಯ್ಯ ಅವರಿದ್ದ ನ್ಯಾಯ ಪ್ರಕರಣದ ವಿಚಾರಣೆಗೆ ತಡೆ ನೀಡಿ ಆದೇಶಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಘಟನೆಯಲ್ಲಿ ಆರೋಪಿಗಳ ಪಾತ್ರವಿದೆ ಎನ್ನುವ ಕುರಿತಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಬಂಧನ ಮಾಡಲಾಗಿದೆ. ಇದು ಕಾನೂನು ಬಾಹಿರ ಕ್ರಮವಾಗಿದೆ, ಹಾಗಾಗಿ ಪ್ರಕರಣದ ವಿಚಾರಣೆಗೆ ತಡೆ ನೀಡಬೇಕು ಎಂದು ಕೋರಿದರು. ನ್ಯಾಯಪೀಠ, ಮೇಲ್ನೋಟಕ್ಕೆ ಅರ್ಜಿದಾರರ ವಾದದಲ್ಲಿ ಹುರುಳಿದೆ ಎನಿಸುತ್ತಿದೆ ಎಂದು ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ಪ್ರಕರಣದ ವಿಚಾರಣೆಗೆ ತಡೆ ನೀಡಿತು.

ಪ್ರಕರಣದ ಹಿನ್ನೆಲೆ : 2022ರ ಆಗಸ್ಟ್ 18 ರಂದು ಮಾಜಿ ಸಿಎಂ ಸಿದ್ಧರಾಮಯ್ಯ ಕೊಡಗಿನ ಪ್ರವಾಹಪೀಡಿತ ಪ್ರದೇಶಗಳ ಭೇಟಿ ಕೈಗೊಂಡಿದ್ದರು. ಆ ವೇಳೆ ಅವರು ಸಾವರ್ಕರ್ ಬಗ್ಗೆ ನೀಡಿದ್ದ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿತ್ತು.

ಅದೇ ಅದೇ ಮಾರ್ಗದಲ್ಲಿ ಸಿದ್ದರಾಮಯ್ಯ ಕಾರಿನಲ್ಲಿ ತೆರಳುತ್ತಿದ್ದಾಗ ಅವರ ಕಾರಿನ ಮೇಲೆ ಕೆಲವು ಹಿಂದೂ ಕಾರ್ಯಕರ್ತರು ಮೊಟ್ಟೆ ಎಸೆದಿದ್ದರು. ಈ ಬಗ್ಗೆ ಕುಶಾಲನಗರದ ವಿ.ಪಿ.ಶಶಿಧರ್ ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳಿಬ್ಬರು ಸೇರಿದಂತೆ ಹಲವರನ್ನು ಬಂಧಿಸಿದ್ದರು. ಆ ಬಗ್ಗೆ ವಿಚಾರಣಾ ನ್ಯಾಯಾಲಯದಲ್ಲಿ ಪ್ರಕರಣವೂ ನಡೆಯುತ್ತಿದೆ.

ಇದನ್ನೂ ಓದಿ: ನಮ್ಮ ಸಮಾಜಕ್ಕೆ ಬೆಂಬಲವಾಗಿ ನಿಂತವರಿಗೆ ನೀವು ಮತ ಹಾಕಿ: ಜಯಮೃತ್ಯುಂಜಯ ಸ್ವಾಮೀಜಿ ಕರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.