ETV Bharat / state

ಹರ್ಷ ಹತ್ಯೆ ಪ್ರಕರಣದಲ್ಲಿ 8 ಮಂದಿ ಬಂಧನ: ಡಿಜಿಪಿಗೆ ಪತ್ರ ಬರೆದ ಆರಗ ಜ್ಞಾನೇಂದ್ರ

ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಶಿವಮೊಗ್ಗದಲ್ಲಿ ಫೆ.25ರವರೆಗೆ ನಿಷೇಧಾಜ್ಞೆ ವಿಸ್ತರಣೆ ಮಾಡಲಾಗಿದೆ.

ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ
author img

By

Published : Feb 23, 2022, 12:18 PM IST

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತಿಬ್ಬರನ್ನು ಬಂಧಿಸಲಾಗಿದ್ದು, ಜಿಲ್ಲಾಧಿಕಾರಿಗಳು ಶುಕ್ರವಾರದವರೆಗೆ ನಿಷೇಧಾಜ್ಞೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಜಯಮಹಲ್ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಶಿವಮೊಗ್ಗದಲ್ಲಿ ಹರ್ಷನ ಹತ್ಯೆ ಕುರಿತಂತೆ ಇದುವರೆಗೆ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಾದ ಆರೋಪಿಗಳು ಒಂದಕ್ಕಿಂತ ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದು, ಇವರ ಬೆಳವಣಿಗೆಗೆ ಕಡಿವಾಣ ಹಾಕಲು ವಿಫಲರಾದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದೆ. ಹಾಗಾಗಿ, ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದರು.

ಸಮಾಜಘಾತುಕ ಬೆಳವಣಿಗೆಯಲ್ಲಿ ಪೊಲೀಸರ ಪಾತ್ರದ ಕುರಿತು ವರದಿ ಕೇಳಿದ್ದೇನೆ, ಒಂದು ವಾರದಲ್ಲಿ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ನಿರ್ದೇಶಿಸಿರುವುದಾಗಿ ಗೃಹ ಸಚಿವರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.