ETV Bharat / state

ಚಿಲುಮೆ ಶೈಕ್ಷಣಿಕ ಸಂಸ್ಥೆಯ ವಿರುದ್ಧ ತನಿಖೆ ನಡೆಸಲು ರಾಜ್ಯ ಚುನಾವಣಾ ಆಯೋಗದಿಂದ ತನಿಖಾಧಿಕಾರಿ ನೇಮಕ - ಈಟಿವಿ ಭಾರತ ಕನ್ನಡ

ಚಿಲುಮೆ ಸಂಸ್ಥೆ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಮಾಹಿತಿ ಕದ್ದ ಆರೋಪ ಪ್ರಕರಣ ಸಂಬಂಧ ಚುನಾವಣೆ ಆಯೋಗದಿಂದ ತನಿಖಾಧಿಕಾರಿ ನೇಮಕ ಮಾಡಿದೆ.

Etv Bharat
ರಾಜ್ಯ ಚುನಾವಣೆ ಆಯೋಗದಿಂದ ತನಿಖಾಧಿಕಾರಿ ನೇಮಕ
author img

By

Published : Nov 19, 2022, 3:21 PM IST

ಬೆಂಗಳೂರು: ಚಿಲುಮೆ ಶೈಕ್ಷಣಿಕ ಸಾಮಾಜಿಕ ಸಾಂಸ್ಕತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಮಾಹಿತಿ ಕದ್ದ ಆರೋಪ ಪ್ರಕರಣ ಸಂಬಂಧ ಸಂಪೂರ್ಣ ತನಿಖೆ ನಡೆಸಲು ರಾಜ್ಯ ಚುನಾವಣೆ ಆಯೋಗ ತನಿಖಾಧಿಕಾರಿಯನ್ನು ನೇಮಿಸಿದೆ. ಬೆಂಗಳೂರು ಪ್ರಾದೇಶಿಕ ಆಯುಕ್ತ ಅಮ್ಲನ್ ಬಿಸ್ವಾಸ್​ ಅವರನ್ನು ಈ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ನೀಡಿ ಚುನಾವಣೆ ಆಯೋಗ ಆದೇಶ ಹೊರಡಿಸಿದೆ.

ಎಫ್‌ಐಆರ್ ದಾಖಲು: ಚಿಲುಮೆ ಶೈಕ್ಷಣಿಕ ಸಾಮಾಜಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಆ ಸಂಸ್ಥೆಯ ಕೆ.ಎಂ.ಲೋಕೇಶ್ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಅಕ್ರಮ ಬೂತ್‌ಮಟ್ಟದ ಅಧಿಕಾರಿಗಳ ಸೃಷ್ಟಿ: ಅನುಮತಿಯಿಲ್ಲದೇ ಬೂತ್‌ಮಟ್ಟದ ಅಧಿಕಾರಿಗಳ (ಬಿಎಲ್‌ಒ) ನಕಲಿ ಗುರುತಿನ ಚೀಟಿಯನ್ನು ಸೃಷ್ಟಿಸಿಕೊಂಡು ಮನೆಗಳಿಗೆ ತೆರಳಿ ಮತದಾರರ ಗುರುತಿನ ಚೀಟಿ, ಆಧಾರ್ ಸಂಗ್ರಹಿಸಿ ಆ್ಯಪ್‌ವೊಂದಕ್ಕೆ ಮತದಾರರ ವೈಯಕ್ತಿಕ ಮಾಹಿತಿ ಅಪ್‌ಲೋಡ್ ಮಾಡಿದ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ಕಳವು ಆರೋಪ: ಚುನಾವಣೆ ಆಯೋಗಗಕ್ಕೆ ವರದಿ ಸಲ್ಲಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.