ETV Bharat / state

ಗ್ರಾ.ಪಂ. ಚುನಾವಣೆ ನಡೆಸುವುದಾಗಿ ಹೈಕೋರ್ಟ್ ಗೆ ಆಯೋಗದ ಸ್ಪಷ್ಟನೆ: ವಿಚಾರಣೆ ಅ.21ಕ್ಕೆ ಮುಂದೂಡಿಕೆ - Gram Panchayath election

ಅವಧಿ ಮುಗಿದಿರುವ ಗ್ರಾಮ ಪಂಚಾಯತ್​ಗಳ ಚುನಾವಣೆ ನಡೆಸುವ ವಿಚಾರವಾಗಿ ಸಲ್ಲಿಸಿದ್ದ ಸಾರ್ವಜನಿಕ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್​ ಇಂದು ನಡೆಸಿತು.

Highcourt
Highcourt
author img

By

Published : Oct 16, 2020, 5:40 PM IST

ಬೆಂಗಳೂರು: ಅವಧಿ ಮುಗಿದಿರುವ ಗ್ರಾಮ ಪಂಚಾಯತ್​ಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಿದ್ಧವಿದೆ. ವರ್ಷಾಂತ್ಯದೊಳಗೆ ಗ್ರಾ.ಪಂ. ಚುನಾವಣೆ ನಡೆಸುವುದು ಎಲ್ಲಾ ರೀತಿಯಲ್ಲೂ ಸೂಕ್ತ ಎಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಗೆ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.

ಅವಧಿ ಮುಕ್ತಾಯಗೊಂಡಿರುವ ಗ್ರಾಮ ಪಂಚಾಯತ್​ಗಳಿಗೆ ಚುನಾವಣೆ ನಡೆಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಕಾಂಗ್ರೆಸ್ ಮುಖಂಡ ಕೆ.ಸಿ. ಕೊಂಡಯ್ಯ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಪೀಠಕ್ಕೆ ಮಾಹಿತಿ ನೀಡಿ, ಗ್ರಾಮ ಪಂಚಾಯತ್​ಗಳಿಗೆ ಈಗಾಗಲೇ ಸಿದ್ಧಪಡಿಸಿರುವ ವೇಳಾ ಪಟ್ಟಿಯಂತೆ ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸಲು ಉದ್ದೇಶಿಸಿದೆ ಎಂದು ಚುನಾವಣಾ ಆಯೋಗದ ನಿಲುವನ್ನು ಸ್ಪಷ್ಟಪಡಿಸಿದರು.

ಗ್ರಾಪಂ ಗಳಿಗೆ ವರ್ಷಾಂತ್ಯದ ಒಳಗೆ ಚುನಾವಣೆ ನಡೆಸುವುದು ಎಲ್ಲಾ ರೀತಿಯಲ್ಲೂ ಸೂಕ್ತ. ಮುಂದೆ ಬಿಬಿಎಂಪಿ ಸೇರಿದಂತೆ ಹಲವು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕಿರುವುದರಿಂದ ಆದಷ್ಟು ಬೇಗ ಗ್ರಾ.ಪಂ. ಚುನಾವಣೆಗಳನ್ನು ಮುಗಿಸಬೇಕಿದೆ ಎಂದರು.

ಅಲ್ಲದೇ ರಾಜ್ಯ ಸರ್ಕಾರ ಎರಡನೇ ಬಾರಿಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಗ್ರಾಪಂ ಚುನಾವಣೆಗಳನ್ನು ಮುಂದೂಡುವಂತೆ ಕೋರಿದೆ. ಬಿಜೆಪಿ, ಜೆಡಿಎಸ್ ಪಕ್ಷಗಳೂ ಪತ್ರ ಬರೆದು ಚುನಾವಣೆ ಮುಂದೂಡಲು ಕೋರಿವೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲರು, ಗ್ರಾ.ಪಂ. ಚುನಾವಣೆ ರಾಜಕೀಯ ಪಕ್ಷಗಳ ಆಧಾರದಲ್ಲಿ ನಡೆಯುವುದಿಲ್ಲ. ಆದಷ್ಟು ಬೇಗ ಚುನಾವಣೆ ನಡೆಸುವುದು ಸೂಕ್ತ. ಆಯೋಗದ ನಿಲುವು ಸ್ವಾಗತಾರ್ಹ ಎಂದರು.

ಆದರೆ, ಈ ಸಂಬಂಧ ರಾಜ್ಯ ಸರ್ಕಾರ ತನ್ನ ವಾದ ಮಂಡಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಪೀಠ ವಿಚಾರಣೆಯನ್ನು ಅ. 21ಕ್ಕೆ ಮುಂದೂಡಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.