ETV Bharat / state

ಅಪರಾಧ ಹಿನ್ನೆಲೆಯುಳ್ಳ ಅಭ್ಯರ್ಥಿಗಳ ಮೇಲೆ ಚುನಾವಣಾ ಆಯೋಗದ ಹದ್ದಿನ ಕಣ್ಣು: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ - riminal background politicians

ಸುಪ್ರೀಂಕೋರ್ಟ್ ಆದೇಶದನ್ವಯ ರಾಜಕೀಯ ಪಕ್ಷಗಳು ಅಪರಾಧ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಬಗ್ಗೆ ವೆಬ್‌ಸೈಟ್‌, ಪತ್ರಿಕೆ ಮತ್ತು ದೂರದರ್ಶನದಲ್ಲಿ ಮಾಹಿತಿ ಪ್ರಕಟಿಸಬೇಕಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಚುನಾವಣಾಧಿಕಾರಿಗಳು ಎಲ್ಲ ಪಕ್ಷಗಳ ಮೇಲೆ ನಿಗಾವಹಿಸಿದ್ದಾರೆ.

Etv Bharatelection-commission-monitoring-criminal-background-politicians
ಅಪರಾಧ ಹಿನ್ನೆಲೆಯುಳ್ಳ ಅಭ್ಯರ್ಥಿಗಳ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣು
author img

By

Published : Apr 3, 2023, 5:21 PM IST

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಅಖಾಡ ರಂಗೇರಿದೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ರಾಜಕೀಯ ಪಕ್ಷಗಳು ಕಸರತ್ತು ನಡೆಸುತ್ತಿವೆ. ಆದರೆ, ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಅಭ್ಯರ್ಥಿಗಳ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದೆ. ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಮೇ 10ರಂದು ಮತದಾನ ನಡೆಯಲಿದೆ. ಇತ್ತ ಮೂರೂ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಗಾಗಿ ಕಸರತ್ತು ನಡೆಸುತ್ತಿವೆ. ಭ್ರಷ್ಟಾಚಾರ ರಹಿತ, ಪ್ರಾಮಾಣಿಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂಬುದು ಪದೇ ಪದೇ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿರುವ ಆಗ್ರಹ. ಆದರೆ, ಪ್ರತಿ ಚುನಾವಣೆಯಲ್ಲೂ ಹಲವು ಅಪರಾಧ ಪ್ರಕರಣ ಹೊಂದಿರುವ ಅಭ್ಯರ್ಥಿಗಳೇ ಕಣಕ್ಕಿಳಿಯುತ್ತಿದ್ದಾರೆ.

ರಾಜ್ಯದಲ್ಲೂ ಅಭ್ಯರ್ಥಿಗಳ ಆಯ್ಕೆಗಾಗಿ ಪಕ್ಷಗಳು ಅಂತಿಮ ಹಂತದ ಕಸರತ್ತು ನಡೆಸುತ್ತಿವೆ. ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಅಭ್ಯರ್ಥಿಗಳ ಮೇಲೆ ಈ ಬಾರಿ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದೆ. ಅಪರಾಧ ಹಿನ್ನೆಲೆಯುಳ್ಳ ಅಭ್ಯರ್ಥಿಗಳು ಈ ಬಾರಿ ಚುನಾವಣಾ ಆಯೋಗದ ಕಠಿಣ ನಿಯಮ ಪಾಲಿಸಬೇಕು. ಸುಪ್ರೀಂಕೋರ್ಟ್ ತೀರ್ಪಿನನ್ವಯ ಪರಿಷ್ಕೃತ ನಿಯಮಗಳನ್ನು ಪಾಲಿಸಲೇ ಬೇಕು. ಇಲ್ಲವಾದರೆ ಅಪರಾಧ ಹಿನ್ನೆಲೆಯುಳ್ಳ ಅಭ್ಯರ್ಥಿ ವಿರುದ್ಧ ಚು.ಆಯೋಗ ಕಠಿಣ ಕ್ರಮ ಕೈಗೊಳ್ಳಲಿದೆ.

ಕ್ರಿಮಿನಲ್ ಹಿನ್ನೆಲೆಯುಳ್ಳ ಅಭ್ಯರ್ಥಿ ಮೇಲೆ ನಿಗಾ: ರಾಜಕೀಯ ಪಕ್ಷಗಳು ಅಪರಾಧ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಬಗ್ಗೆ ತನ್ನ ವೆಬ್‌ಸೈಟ್‌, ಪತ್ರಿಕೆ ಮತ್ತು ದೂರದರ್ಶನದಲ್ಲಿ ಮಾಹಿತಿಯನ್ನು ಪ್ರಕಟಿಸಬೇಕು. ಮತದಾರರಿಗೆ ಅಭ್ಯರ್ಥಿಗಳ ಹಿನ್ನೆಲೆ ಬಗ್ಗೆ ತಿಳಿಯಲು ಸಾಕಷ್ಟು ಅವಕಾಶ ಕಲ್ಪಿಸಲಾಗಿದೆ. ಅದರಂತೆ ನಾಮಪತ್ರ ಹಿಂಪಡೆಯುವ ದಿನಾಂಕದ ಮುಂಚಿತ 4 ದಿನಗಳ ಒಳಗೆ, ಮುಂದಿನ 5 ರಿಂದ 8ನೇ ದಿನಗಳ ನಡುವೆ, 9ನೇ ದಿನದಿಂದ ಪ್ರಚಾರದ ಕೊನೆಯ ದಿನದವರೆಗೆ (ಮತದಾನದ ದಿನಾಂಕದ ಮೊದಲು ಎರಡನೇ ದಿನ)ದಲ್ಲಿ ಅಭ್ಯರ್ಥಿಗಳ ಅಪರಾಧ ಹಿನ್ನೆಲೆಯ ಮಾಹಿತಿಯನ್ನು ಪ್ರಕಟಿಸಬೇಕು. ಸುಪ್ರೀಂಕೋರ್ಟ್ ಆದೇಶದನ್ವಯ ಇದು ಕಡ್ಡಾಯವಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಚುನಾವಣಾಧಿಕಾರಿಗಳು ನಿಗಾ ಇಟ್ಟಿದ್ದಾರೆ.

ಕೇಂದ್ರ ಮತ್ತು ರಾಜ್ಯ ಚುನಾವಣಾ ಮಟ್ಟದಲ್ಲಿ ವಿವರವಾದ ಮಾಹಿತಿಯನ್ನು ಬಾಕಿ ಇರುವ ಕ್ರಿಮಿನಲ್ ಮೊಕದ್ದಮೆಗಳನ್ನು ಹೊಂದಿರುವ ವ್ಯಕ್ತಿಗಳಿಗೆ ಸಂಬಂಧಿಸಿದಂತೆ (ಅಪರಾಧಗಳ ಸ್ವರೂಪ) ತಮ್ಮ ವೆಬ್ ಸೈಟ್‌ನಲ್ಲಿ ಅಪಲೋಡ್ ಮಾಡಬೇಕು. ಆರೋಪಿಸಲಾದ ವಿವರಗಳು, ಸಂಬಂಧಿತ ನ್ಯಾಯಾಲಯದ ಪ್ರಕರಣ ಸಂಖ್ಯೆ ಇತ್ಯಾದಿ, ಅಭ್ಯರ್ಥಿಯಾಗಿ ಆಯ್ಕೆಯಾಗಲು ಕಾರಣಗಳ ಜತೆಗೆ ಅಪರಾಧ ಹಿನ್ನೆಲೆ ಇಲ್ಲದ ಇತರ ಅಭ್ಯರ್ಥಿಗಳನ್ನು ಯಾಕೆ ಆಯ್ಕೆ ಮಾಡಲಾಗಲಿಲ್ಲ ಎಂಬುದನ್ನು ಉಲ್ಲೇಖಿಸಬೇಕಾಗುತ್ತದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ಒಂದು ಸ್ಥಳೀಯ ದೇಶಿಯ ಪತ್ರಿಕೆ ಮತ್ತು ಒಂದು ರಾಷ್ಟ್ರೀಯ ವೃತ್ತಪತ್ರಿಕೆ, ರಾಜಕೀಯ ಪಕ್ಷದ ಅಧಿಕೃತ ಸಾಮಾಜಿಕ ಮಾಧ್ಯಮ ತಾಣಗಳಲ್ಲಿ, ಫೇಸ್‌ಬುಕ್, ಟ್ವೀಟ್​​​ನಲ್ಲಿ ಪ್ರಕಟಿಸಬೇಕು. ಈ ವಿವರಗಳನ್ನು ಅಭ್ಯರ್ಥಿ ಆಯ್ಕೆಯಾದ 48 ಗಂಟೆಗಳ ಒಳಗೆ ಪ್ರಕಟಿಸಬೇಕು. ಚುನಾವಣಾ ಆಯೋಗ ಸೂಚಿಸಿದ 72 ಗಂಟೆಯೊಳಗೆ ಆಯ್ಕೆಯಾದ ಅಭ್ಯರ್ಥಿ ಸಂಬಂಧಪಟ್ಟ ರಾಜಕೀಯ ಪಕ್ಷದೊಂದಿಗೆ ವರದಿ ಸಲ್ಲಿಸಬೇಕು. ಒಂದು ವೇಳೆ ಸಲ್ಲಿಸಲು ವಿಫಲವಾದರೆ, ಚುನಾವಣಾ ಆಯೋಗ ನ್ಯಾಯಾಲಯದ ಆದೇಶಗಳು, ನಿರ್ದೇಶನಗಳು ತಿರಸ್ಕರಿಸಿರುವ ಬಗ್ಗೆ ಸುಪ್ರೀಂ ಕೋರ್ಟ್ ಗಮನಕ್ಕೆ ತರಲಿದೆ.

ರಾಜಕೀಯ ಪಕ್ಷಗಳು ಮಾಡಬೇಕಾಗಿರುವುದೇನು?: ರಾಜಕೀಯ ಪಕ್ಷಗಳು ತಮ್ಮ ವೆಬ್‌ಸೈಟ್‌ನ ಮುಖಪುಟದಲ್ಲಿ ಅಭ್ಯರ್ಥಿಗಳ ಅಪರಾಧದ ಪೂರ್ವಾಪರಗಳ ಬಗ್ಗೆ ಮಾಹಿತಿಯನ್ನು ಪ್ರಕಟಿಸಬೇಕು. ಮುಖಪುಟದಲ್ಲಿ ಅಭ್ಯರ್ಥಿಗಳೊಂದಿಗೆ ಅಪರಾಧ ಹಿನ್ನೆಲೆಗಳು ಎಂಬ ಶೀರ್ಷಿಕೆ ಎಂದು ಪ್ರಕಟಿಸಬೇಕು. ಇದರಿಂದ ಮತದಾರರಿಗೆ ಮಾಹಿತಿ ಪಡೆಯಲು ಸುಲಭವಾಗುತ್ತದೆ. ಇದು ಕಡ್ಡಾಯವಾಗಿದೆ.

ರಾಜಕೀಯ ಪಕ್ಷ ವರದಿಯನ್ನು ತಲುಪಿಸಲು ವಿಫಲವಾದರೆ, ರಾಜಕೀಯ ಪಕ್ಷದ ಉದಾಸೀನತೆಯನ್ನು ಚುನಾವಣಾ ಆಯೋಗ ನ್ಯಾಯಾಲಯದ ಗಮನಕ್ಕೆ ತರಲಿದೆ. ಇದು ನ್ಯಾಯಾಲಯ ಆದೇಶ ಮತ್ತು ನಿರ್ದೇಶನಗಳ ಉಲ್ಲಂಘನೆಯಾಗುತ್ತದೆ ಇದನ್ನು ಭವಿಷ್ಯದಲ್ಲಿ ಬಹಳ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:ಬಿಜೆಪಿಗೆ ಚುನಾವಣಾ ಆಯೋಗದ ಶಾಕ್: ಸಿಎಂ ಇದ್ದಾಗಲೇ ದಾಳಿ ನಡೆಸಿ ಕೇಸರಿ ತೋರಣ ತೆರವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.