ETV Bharat / state

ಮತಪಟ್ಟಿ ಪರಿಷ್ಕರಣೆ ವಿವಾದ.. ಯಾವುದೇ ಸಂಸ್ಥೆಗೆ ಸಮೀಕ್ಷೆ ನಡೆಸಲು ಅನುಮತಿ ನೀಡಿಲ್ಲ: ಚುನಾವಣಾ ಆಯೋಗ - ಈಟಿವಿ ಭಾರತ ಕನ್ನಡ

ಮತ ಪಟ್ಟಿ ಪರಿಷ್ಕರಣೆ ಅಕ್ರಮ ಆರೋಪ ಸಂಬಂಧ ಬಿಬಿಎಂಪಿ ಯಾವುದೇ ಸಂಸ್ಥೆಗೆ ಸಮೀಕ್ಷೆ ನಡೆಸಲು ಅನುಮತಿ ನೀಡಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

election-commission-on-illegal-revision-of-voter-list
ಮತಪಟ್ಟಿ ಪರಿಷ್ಕರಣೆ ಅಕ್ರಮ ಆರೋಪ; ಯಾವುದೇ ಸಂಸ್ಥೆಗೆ ಸಮೀಕ್ಷೆ ನಡೆಸಲು ಅನುಮತಿ ನೀಡಿಲ್ಲ: ಚುನಾವಣಾ ಆಯೋಗ
author img

By

Published : Nov 17, 2022, 3:02 PM IST

Updated : Nov 17, 2022, 4:23 PM IST

ಬೆಂಗಳೂರು: ಬಿಬಿಎಂಪಿ ಯಾವುದೇ ಸಂಸ್ಥೆಗೆ ಸಮೀಕ್ಷೆ ನಡೆಸಲು ಅನುಮತಿ ನೀಡಿಲ್ಲ ಎಂದು ಕಾಂಗ್ರೆಸ್​​ ನಾಯಕರ ಮತಪಟ್ಟಿ ಪರಿಷ್ಕರಣೆ ಅಕ್ರಮ ಆರೋಪ ಸಂಬಂಧ ಚುನಾವಣಾ ಆಯೋಗದ ಜಿಲ್ಲಾ ಚುನಾವಣಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಮನೋಜ್ ಕುಮಾರ್ ಮೀನಾ, ಕೆಲವು ನ್ಯೂಸ್ ಪೋರ್ಟಲ್ ಮತ್ತು ದೃಶ್ಯಮಾಧ್ಯಮಗಳಲ್ಲಿ ಮತದಾರರ ವೈಯಕ್ತಿಕ ವಿವರಗಳನ್ನು ಸಂಗ್ರಹಿಸಲಾಗಿದೆ ಎಂದು ವರದಿಯಾಗಿದೆ. ಸರ್ಕಾರೇತರ ಸಂಸ್ಥೆ ಚಿಲುಮೆರವರಿಗೆ ಮತದಾರರ ಜಾಗೃತಿ ಅಭಿಯಾನದ ಬಗ್ಗೆ ಅರಿವು ಮೂಡಿಸಲು ನೀಡಿದ್ದ ಅನುಮತಿಯನ್ನು ದೂರು ಬಂದ ಕೂಡಲೇ ಜಿಲ್ಲಾ ಚುನಾವಣಾಧಿಕಾರಿ, ಬಿ.ಬಿ.ಎಂ.ಪಿ. ರದ್ದುಪಡಿಸಿದೆ. ಬೂತ್‌ ಮಟ್ಟದ ಅಧಿಕಾರಿ ಗುರುತಿನ ಚೀಟಿ ದುರುಪಯೋಗ ಸಂಬಂಧ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಅವರು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಚುನಾವಣಾ ನಿಯಮಗಳನ್ನು ಉಲ್ಲಂಘಿಸಿರುವ ಬಗ್ಗೆ ತನಿಖೆ ನಡೆಸಿ ಉಲ್ಲಂಘನೆ ಪ್ರಕರಣ ಕಂಡು ಬಂದಲ್ಲಿ ನಿಯಮಾನುಸಾರ ಕ್ರಮ ವಹಿಸಲಾಗುವುದು‌. ಈ ಬಗ್ಗೆ ಚುನಾವಣಾಧಿಕಾರಿ ಅವರಿಂದ ಬಿಬಿಎಂಪಿಗೆ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್​ನದ್ದು ಆಧಾರ ರಹಿತ ಆರೋಪ, ಅವರೆಲ್ಲ ವಿಚಾರಗಳಲ್ಲಿ ದಿವಾಳಿ: ಸಿಎಂ ಬೊಮ್ಮಾಯಿ

Last Updated : Nov 17, 2022, 4:23 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.