ETV Bharat / state

ಬಿಬಿಎಂಪಿ ವಾರ್ಡ್ ಸಂಖ್ಯೆ ಹೆಚ್ಚಿಸದಂತೆ ನಿರ್ದೇಶಿಸಲು ಹೈಕೋರ್ಟ್​ಗೆ ಮನವಿ

author img

By

Published : Oct 20, 2020, 9:06 PM IST

ಬಿಬಿಎಂಪಿಗೆ ಚುನಾವಣೆ ನಡೆಸುವ ಸಂಬಂಧ ಹಾಲಿ ಇರುವ ವಾರ್ಡ್​ಗಳಿಗೆ ಚುನಾವಣೆ ನಡೆಸಲು ನಿರ್ದೇಶಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್​ಗೆ ಮನವಿ ಮಾಡಿದೆ..

High Court
ಹೈಕೋರ್ಟ್

ಬೆಂಗಳೂರು: ಬಿಬಿಎಂಪಿಗೆ ಚುನಾವಣೆ ನಡೆಸುವ ಸಂಬಂಧ ವಾರ್ಡ್ ಸಂಖ್ಯೆ ಹೆಚ್ಚಿಸಲು ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆಗೆ ಮಾಡಿರುವ ತಿದ್ದುಪಡಿಯನ್ನು ಪರಿಗಣಿಸಬಾರದು, ಹಾಲಿ ಇರುವ ವಾರ್ಡ್​ಗಳಿಗೆ ಚುನಾವಣೆ ನಡೆಸಲು ನಿರ್ದೇಶಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್​ಗೆ ಮನವಿ ಮಾಡಿದೆ.

ಬಿಬಿಎಂಪಿಗೆ ಶೀಘ್ರ ಚುನಾವಣೆ ನಡೆಸಲು ಕೋರಿ ಪಾಲಿಕೆ ಮಾಜಿ ಸದಸ್ಯ ಶಿವರಾಜ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ವಾದಿಸಿ, ಪಾಲಿಕೆಯ ವಾರ್ಡ್​ಗಳ ಸಂಖ್ಯೆಯನ್ನು 198ರಿಂದ 250 ಹೆಚ್ಚಿಸಲು ಅವಕಾಶವಿರುವ ಕೆಎಂಸಿ ಕಾಯ್ದೆ ತಿದ್ದುಪಡಿಯನ್ನು ಪರಿಗಣಿಸದಂತೆ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಬೇಕು.

ವಾರ್ಡ್​ಗಳ ಸಂಖ್ಯೆಯನ್ನು ಹೆಚ್ಚಿಸಲು ಅವಕಾಶ ನೀಡಿದರೆ ಸದ್ಯಕ್ಕೆ ಚುನಾವಣೆ ನಡೆಸಲಾಗದು. ಆದ್ದರಿಂದ ಹಾಲಿ ಇರುವ 198 ವಾರ್ಡ್​ಗಳಿಗೆ ಚುನಾವಣೆ ನಡೆಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.

ಅಲ್ಲದೆ, ವಾರ್ಡ್ ಮರು ವಿಂಗಡನೆ ಅಧ್ಯಯನಕ್ಕೆ ನೇಮಿಸಿರುವ ಆಯೋಗಕ್ಕೆ 6 ತಿಂಗಳ ಕಾಲಾವಕಾಶ ನೀಡಲಾಗಿದೆ. ಈ ಅವಧಿಯ ನಂತರವೂ ಆಯೋಗದ ವರದಿ ಆಧರಿಸಿ ಮತ್ತೆ ಮೀಸಲು ಹಾಗೂ ಮತದಾರರ ಪಟ್ಟಿ ಸಿದ್ಧಪಡಿಸಬೇಕು. ಎಲ್ಲಾ ಕಾರ್ಯಗಳು ಪೂರ್ಣಗೊಳ್ಳಲು ವರ್ಷಕ್ಕೂ ಹೆಚ್ಚು ಸಮಯ ಹಿಡಿಯಲಿದೆ ಎಂದು ವಿವರಿಸಿದರು. ಈ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿದ ಪೀಠ, ವಿಚಾರಣೆಯನ್ನು ನ.10 ಕ್ಕೆ ಮುಂದೂಡಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.