ಬೆಂಗಳೂರು : ನಗರದಲ್ಲಿ ನಡೆಯುತ್ತಿರುವ ನಾಲ್ಕೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಇದುವರೆಗೆ 1.85.355 ರೂ ಹಣ ಹಾಗೂ 87.41 ಲಕ್ಷ ಬೆಲೆ ಬಾಳುವ 14.506.78 ಲೀಟರ್ ಮಧ್ಯವನ್ನು ವಶಪಡಿಸಿ ಕೊಳ್ಳಲಾಗಿದೆ. ಈ ಬಗ್ಗೆ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಬಿಬಿಎಂಪಿ ಆಯುಕ್ತರಾದ ಬಿ. ಎಚ್ ಅನಿಲ್ ಕುಮಾರ್ ತಿಳಿಸಿದ್ದಾರೆ.
ಬಿಬಿಎಂಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಚುನಾವಣೆ ಸಿದ್ಧತೆ ಹಾಗೂ ಚುನಾವಣೆ ಕ್ರಮಗಳು ಮತದಾರರು ಮತಗಟ್ಟೆಗಳ ಬಗ್ಗೆ ಮಾಹಿತಿ ನೀಡಿದ ಅವರು, ಬೆಂಗಳೂರಿನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿದಂತೆ ಅಕ್ರಮ ಎಸಗುತ್ತಿದ್ದ 37 ಜನರನ್ನು ಈವರೆಗೆ ಬಂದಿಸಿರುವುದಾಗಿ ತಿಳಿಸಿದರು. ಅಲ್ಲದೆ ಡಿಸೆಂಬರ್ 5 ನೇ ತಾರೀಕು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಲಿದೆ. ಹಾಗೂ ಡಿಸೆಂಬರ್ 9ರ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿ ಮತದಾನ ಕಾರ್ಯ ಮುಗಿಯುವವರೆಗೂ ಕಾರ್ಯನಿರ್ವಹಿಸಲಿದ್ದೇವೆ ಎಂದು ತಿಳಿಸಿದರು.
ಇದರ ಜೊತೆಗೆ ನಾಲ್ಕು ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳ ಬಗ್ಗೆ ಚುನಾವಣಾ ಆಯುಕ್ತರು ಮಾಹಿತಿ ನೀಡಿದರು. ಕೆಆರ್ ಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 437 ಮತಗಟ್ಟೆಗಳು, ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ 461 ಮತಗಟ್ಟೆಗಳು, ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ 270 ಮತಗಟ್ಟೆಗಳು ಹಾಗೂ ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 193 ಮತಗಟ್ಟೆಗಳಿದ್ದು ಒಟ್ಟು ನಾಲ್ಕು ಕ್ಷೇತ್ರಗಳಿಂದ 1361 ಮತಗಟ್ಟೆಗಳಿವೆ ಎಂದು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ನಾಲ್ಕು ಕ್ಷೇತ್ರಗಳ ಸ್ಟ್ರಾಂಗ್ ರೂಂ ಹಾಗೂ ಕೌಂಟಿಂಗ್ ಸೆಂಟರ್ ಗಳ ಬಗ್ಗೆಯೂ ಮಾಹಿತಿ ನೀಡಿದರು.