ETV Bharat / state

ನಾಳೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ.. ಮಾಜಿ ಸಚಿವ ಹೆಚ್‌ ಡಿ ರೇವಣ್ಣರ ನಡೆಯೇನು? - ಕರ್ನಾಟಕ ಹಾಲು ಒಕ್ಕೂಟ

ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಹಿನ್ನೆಲೆ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ಮಾಜಿ ಸಚಿವ ಹೆಚ್ ಡಿ ರೇವಣ್ಣ ನೇರ ಪೈಪೋಟಿಗಿಳಿದಿದ್ದಾರೆ. ಇದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಮಾಜಿ ಸಚಿವ ಹೆಚ್.ಡಿ.ರೇವಣ್ಣ
author img

By

Published : Aug 30, 2019, 3:22 PM IST

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕೆ ಅಗಸ್ಟ್ 31ರಂದು ಚುನಾವಣೆ ನಡೆಯಲಿದ್ದು, ತೀವ್ರ ಕುತೂಹಲ ಮೂಡಿಸಿದೆ.

Election for KMF president tomorrow
ಮಾಜಿ ಸಚಿವ ಹೆಚ್ ಡಿ ರೇವಣ್ಣ..

ಸಚಿವ ಸ್ಥಾನ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ಜೆಡಿಎಸ್‍ನ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ನಡುವೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿದೆ. ಆದರೆ, ನಾಳೆ ನಡೆಯಲಿರುವ ಚುನಾವಣೆಗೆ ಹೆಚ್.ಡಿ.ರೇವಣ್ಣ ಸ್ಪರ್ಧೆ ಮಾಡುತ್ತಾರೋ ಅಥವಾ ಕಣದಿಂದ ಹಿಂದೆ ಸರಿಯುತ್ತಾರೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಬಾಲಚಂದ್ರ ಜಾರಕಿಹೊಳಿ ಪರ ಹೆಚ್ಚಿನ ನಿರ್ದೇಶಕರು ಬೆಂಬಲ ಸೂಚಿಸಿದರೆ, ರೇವಣ್ಣ ಕಣದಿಂದ ಹಿಂದೆ ಸರಿಯುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ.

ರೇವಣ್ಣ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸದಿದ್ದರೆ, ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತ. ಈ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಭೀಮಾ ನಾಯಕ್ ಈಗಾಗಲೇ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿ ಜಾರಕಿಹೊಳಿಗೆ ಬೆಂಬಲ ಸೂಚಿಸಿದ್ದಾರೆ.

ಶತಾಯಗತಾಯ ಕೆಎಂಎಫ್‍ನಲ್ಲಿ ಅಧ್ಯಕ್ಷ ಸ್ಥಾನ ಪಡೆಯಲೇಬೇಕೆಂದು ಪಣ ತೊಟ್ಟಿರುವ ಅರಭಾವಿಯ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಈಗಾಗಲೇ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಬೆಂಬಲಿತ 10ಕ್ಕೂ ಹೆಚ್ಚು ನಿರ್ದೇಶಕರನ್ನು ಮುಂಬೈಗೆ ಕರೆದೊಯ್ದಿದ್ದಾರೆ. ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಬೆಂಗಳೂರಿಗೆ ಈ ಎಲ್ಲಾ ನಿರ್ದೇಶಕರು ಮರಳಲಿದ್ದಾರೆ.

ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಒಟ್ಟು 16 ಸದಸ್ಯರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. ಇದರಲ್ಲಿ 12 ಸದಸ್ಯರು ವಿವಿಧ ಒಕ್ಕೂಟಗಳ ನಿರ್ದೇಶಕರು. ಓರ್ವ ಸರ್ಕಾರದ ನಾಮನಿರ್ದೇಶಕ ಸದಸ್ಯ, ಇಬ್ಬರು ಅಧಿಕಾರಿಗಳು ಮತ ಚಲಾಯಿಸಲಿದ್ದಾರೆ. ಇದರಲ್ಲಿ ಈಗಾಗಲೇ 10ಕ್ಕೂ ಹೆಚ್ಚು ನಿರ್ದೇಶಕರು, ಅಧಿಕಾರಿಗಳು, ಬಾಲಚಂದ್ರ ಜಾರಕಿಹೊಳಿಗೆ ಬೆಂಬಲ ಸೂಚಿಸಿರುವುದರಿಂದ ಬಹುತೇಕ ಅಧ್ಯಕ್ಷ ಸ್ಥಾನ ಅವರಿಗೇ ಸಿಗಲಿದೆ.

ಕೆಎಂಎಫ್ ಅಧ್ಯಕ್ಷ ಸ್ಥಾನವನ್ನು ಪಡೆಯಲೇಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ಕೊಟ್ಟ ಹಿನ್ನೆಲೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರು ನಿರ್ದೇಶಕರನ್ನು ಮುಂಬೈಗೆ ಕರೆದೊಯ್ದಿದ್ದಾರೆ ಎಂದು ಹೇಳಲಾಗುತ್ತಿದೆ.

Intro:ಬೆಂಗಳೂರು : ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿರುವ ಚುನಾವಣೆ
ತೀವ್ರ ಜಿದ್ದಾಜಿದ್ದಿ ಮತ್ತು ಕುತೂಹಲ ಮೂಡಿಸಿದೆ. Body:ಸಚಿವ ಸ್ಥಾನ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ಜೆಡಿಎಸ್‍ನ ಮಾಜಿ ಸಚಿವ ಹೆಚ್. ಡಿ.ರೇವಣ್ಣ ಅವರ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಆದರೆ ನಾಳೆ ನಡೆಯಲಿರುವ ಚುನಾವಣೆಗೆ ಹೆಚ್.ಡಿ.ರೇವಣ್ಣ ಸ್ಪರ್ಧೆ ಮಾಡುತ್ತಾರೋ ಅಥವಾ ಕಣದಿಂದ ಹಿಂದೆ ಸರಿಯುತ್ತಾರೆಯೇ ಎಂಬುದು ಇನ್ನು ಖಚಿತವಾಗಿಲ್ಲ. ಒಂದು ವೇಳೆ ಬಾಲಚಂದ್ರ ಜಾರಕಿಹೊಳಿ ಪರ ಹೆಚ್ಚಿನ ನಿರ್ದೇಶಕರು ಬೆಂಬಲ ಸೂಚಿಸಿದರೆ ರೇವಣ್ಣ ಕಣದಿಂದ ಹಿಂದೆ ಸರಿಯುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
ರೇವಣ್ಣ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸದಿದ್ದರೆ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತ. ಈ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಭೀಮಾನಾಯಕ್ ಈಗಾಗಲೇ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿ ಜಾರಕಿಹೊಳಿಗೆ ಬೆಂಬಲ ಸೂಚಿಸಿದ್ದಾರೆ.
ಶತಾಯಗತಾಯ ಕೆಎಂಎಫ್‍ನಲ್ಲಿ ಅಧ್ಯಕ್ಷ ಸ್ಥಾನವನ್ನು ಪಡೆಯಲೇಬೇಕೆಂದು ಪಣ ತೊಟ್ಟಿರುವ ಜಾರಕಿಹೊಳಿ ಈಗಾಗಲೇ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಬೆಂಬಲಿತ 10ಕ್ಕೂ ಹೆಚ್ಚು ನಿರ್ದೇಶಕರನ್ನು ಮುಂಬೈಗೆ ಕರೆದೊಯ್ದಿದ್ದು, ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಬೆಂಗಳೂರಿಗೆ ಈ ಎಲ್ಲ ನಿರ್ದೇಶಕರು ಮರಳಲಿದ್ದಾರೆ.
ನಂತರ ನಿರ್ದೇಶಕರು ನೇರವಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಒಟ್ಟು 16 ಮಂದಿ ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. ಇದರಲ್ಲಿ 12 ಮಂದಿ ವಿವಿಧ ಒಕ್ಕೂಟಗಳ ನಿರ್ದೇಶಕರು, ಒಬ್ಬರು ಸರ್ಕಾರದ ನಾಮನಿರ್ದೇಶಕ ಸದಸ್ಯರು, ಇಬ್ಬರು ಅಧಿಕಾರಿಗಳು ಮತ ಚಲಾಯಿಸಲಿದ್ದಾರೆ. ಇದರಲ್ಲಿ ಈಗಾಗಲೇ ಹತ್ತಕ್ಕೂ ಹೆಚ್ಚು ನಿರ್ದೇಶಕರು, ಅಧಿಕಾರಿಗಳು, ಬಾಲಚಂದ್ರ ಜಾರಕಿಹೊಳಿಗೆ ಬೆಂಬಲ ಸೂಚಿಸಿರುವುದರಿಂದ ಬಹುತೇಕ ಅಧ್ಯಕ್ಷ ಸ್ಥಾನ ಅವರಿಗೇ ಸಿಗಲಿದೆ.
ಕೆಎಂಎಫ್ ಅಧ್ಯಕ್ಷ ಸ್ಥಾನವನ್ನು ಪಡೆಯಲೇಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ಕೊಟ್ಟ ಹಿನ್ನೆಲೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರು ನಿನ್ನೆ ನಿರ್ದೇಶಕರನ್ನು ಮುಂಬೈಗಡ ಕರೆದೊಯ್ದಿದ್ದಾರೆ ಎಂದು ಹೇಳಲಾಗುತ್ತಿದೆ.
ಕೆಎಂಎಫ್ ಅಧ್ಯಕ್ಷಗಾದಿಗೆ ನಿರ್ದೇಶಕರನ್ನು‌‌ ಹೈದರಾಬಾದ್​ಗೆ ಕರೆದೊಯ್ದಿದ್ದ ಮಾಜಿ‌ ಸಚಿವ ಹೆಚ್.ಡಿ. ರೇವಣ್ಣ ವಿರುದ್ಧ ಬಿಜೆಪಿ ನಾಯಕರು ಪ್ರತಿತಂತ್ರ ಹೆಣೆದಿದ್ದಾರೆ ಎನ್ನಲಾಗುತ್ತಿದೆ.
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.