ETV Bharat / state

ಚುನಾವಣೆಗೆ ಪೂರ್ವ ತಯಾರಿ: ಬಿಬಿಎಂಪಿ ವ್ಯಾಪ್ತಿಯ ಮತಗಟ್ಟೆ ಪರಿಶೀಲಿಸಿದ ಮುಖ್ಯ ಆಯುಕ್ತರು - ಸಹಾಯಕ ಮತದಾರರ ನೋಂದಣಾಧಿಕಾರಿ

ಬಿಬಿಎಂಪಿ ವ್ಯಾಪ್ತಿಯ ಕೆಲವು ಮತಗಟ್ಟೆಗಳಿಗೆ ಭೇಟಿ ಕೊಟ್ಟ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌, ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲು ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಸೂಚನೆ ಕೊಟ್ಟರು.

BBMP Chief Commissioner Tushar Giri Nath
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್
author img

By

Published : Jan 18, 2023, 12:03 PM IST

ಬೆಂಗಳೂರು : ನಗರದ ಬೊಮ್ಮನಹಳ್ಳಿ ವ್ಯಾಪ್ತಿಯಲ್ಲಿ ಮತಗಟ್ಟೆಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಂಗಳವಾರ ಭೇಟಿ ನೀಡಿದ್ದಾರೆ. ಈ ವೇಳೆ ಮತಗಟ್ಟೆಗಳಲ್ಲಿ ಇರಬೇಕಿರುವ ಕನಿಷ್ಠ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್, ಪೀಠೋಪಕರಣಗಳು, ಕಾಯುವ ಕೊಠಡಿ, ಸಹಾಯ ಕೇಂದ್ರ, ಶೌಚಾಲಯ, ರ‍್ಯಾಂಪ್ ಸೌಲಭ್ಯಗಳ ಬಗ್ಗೆ ಪರಿಶೀಲಿಸಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಪೂರ್ವ ಸಿದ್ಧತೆಯ ಸಂಬಂಧ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳನ್ನು ಸಹಾಯಕ ಮತದಾರರ ನೋಂದಣಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮುಖ್ಯ ಆಯುಕ್ತರು ಲಾರೆನ್ಸ್ ಸ್ಕೂಲ್, ಅಗರ ಕರ್ನಾಟಕ ಪಬ್ಲಿಕ್ ಶಾಲೆ, ಸೋಮಸುಂದರ ಪಾಳ್ಯ ಸರ್ಕಾರಿ ಶಾಲೆ, ಹೊಂಗಸಂದ್ರ ವಿದ್ಯಾಜ್ಯೋತಿ ಶಾಲೆಯಲ್ಲಿ ಮತಗಟ್ಟೆಗಳ ನಿರ್ಮಾಣ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಎಲ್ಲಾ ಮತಗಟ್ಟೆಗಳಲ್ಲೂ ಕನಿಷ್ಟ ಮೂಲಭೂತ ಸೌಕರ್ಯಗಳು ಕಡ್ಡಾಯವಾಗಿ ಇರಬೇಕು. ಇಲ್ಲವಾದಲ್ಲಿ ಬೇರೆಡೆ ಮತಗಟ್ಟೆಗಳನ್ನು ಗುರುತಿಸಲು ಅಧಿಕಾರಿಗಳಿಗೆ ನಿರ್ದೇಶನ ಕೊಟ್ಟರು.

ಹೆಚ್.ಎಸ್.ಆರ್ ಬಿಡಿಎ ಕಾಂಪ್ಲೆಕ್ಸ್ ಬಳಿ ಪಾದಚಾರಿ ಮಾರ್ಗವನ್ನು ಬೀದಿಬದಿ ವ್ಯಾಪಾರಿಗಳು ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ. ಇದನ್ನು ಗಮನಿಸಿದ ತುಷಾರ್​ ಗಿರಿನಾಥ್,​ ಪ್ರಮುಖ ರಸ್ತೆಗಳಲ್ಲಿ ಬೀದಿ ವ್ಯಾಪಾರಿಗಳು ಮಾರಾಟ ಮಾಡಲು ಅವಕಾಶ ನೀಡಬಾರದು. ಎಲ್ಲಾ ಬೀದಿ ವ್ಯಾಪಾರಿಗಳಿಗೆ ವಾರ್ಡ್ ರಸ್ತೆಗಳಲ್ಲಿ ವ್ಯಾಪಾರ ಮಾಡಲು ಸ್ಥಳಾವಕಾಶ ನೀಡಲು ಅಧಿಕಾರಿಗಳಿಗೆ ಹೇಳಿದರು. ಈ ವೇಳೆ ನಗರದಲ್ಲಿ ಹೊಸದಾಗಿ ನಿರ್ಮಾಣ ಮಾಡಿರುವ ಡಾಂಬರು ರಸ್ತೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯುವಂತೆ ಶೋಲ್ಡರ್ ಡ್ರೈನ್ ನಿರ್ಮಿಸಲು ತಿಳಿಸಿದರು.

ಈ ಹಿಂದೆ ಹೆಚ್.ಎಸ್.ಆರ್ 6ನೇ ಸೆಕ್ಟರ್ ಬಳಿ ಕೆ-200 ರಾಜಕಾಲುವೆಗೆ ಆರ್.ಸಿ.ಸಿ ವಾಲ್ ಕಾಮಗಾರಿ ಪ್ರಾರಂಭಿಸಬೇಕಿದ್ದು, ಕಾರಣಾಂತರಗಳಿಂದ ಸ್ಥಗಿತಗೊಂಡಿತ್ತು. ಇದೀಗ ಮುಂದಿನ ವಾರವೇ ಕಾಮಗಾರಿ ಪುನಃ ಕೈಗೆತ್ತಿಕೊಳ್ಳಲು ಅಧಿಕಾರಿಗಳಿಗೆ ತುಷಾರ್​ ಗಿರಿನಾಥ್ ಹೇಳಿದ್ದಾರೆ. ಹೆಚ್.ಎಸ್.ಆರ್ ಬಡಾವಣೆ 19ನೇ ಮುಖ್ಯರಸ್ತೆಯಲ್ಲಿ 7 ಎಕರೆ ಪ್ರದೇಶದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಆಟದ ಮೈದಾನಕ್ಕೆ ಭೇಟಿ ನೀಡಿದರು.

ಕ್ರೀಡಾಂಗಣದಲ್ಲಿ ಈಗಾಗಲೇ ಬ್ಯಾಸ್ಕೆಟ್ ಬಾಲ್ ಕೋರ್ಟ್, ಕಬಡ್ಡಿ ಮೈದಾನ, ವಾಲಿಬಾಲ್ ಕೋರ್ಟ್, ಗ್ಯಾಲರಿ ಹಾಗೂ ಫ್ಲಡ್‌ಲೈಟ್ ಅಳವಡಿಸಲಾಗಿದೆ. ಜೊತೆಗೆ ಕ್ರಿಕೆಟ್ ಪಿಚ್, ಗ್ಯಾಲರಿ, ಇಂಡೋರ್ ಸ್ಟೇಡಿಯಂ, ಶೌಚಾಲಯ, ವಾಕಿಂಗ್ ಟ್ರ್ಯಾಕ್ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಾಯ್ದುಕೊಂಡು ಬಾಕಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಹೇಳಿದ್ದಾರೆ.

ಬೇಗೂರು ಕೆರೆ ಕಾಮಗಾರಿ ಪರಿಶೀಲನೆ: ಬೇಗೂರು ಕೆರೆಯಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಮಳೆಗಾಲ ಪ್ರಾರಂಭವಾಗುವುದಕ್ಕೂ ಮುನ್ನ ಸ್ಲೂಯಿಸ್ ಗೇಟ್ ಅಳವಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪರಿಶೀಲನೆಯ ವೇಳೆ ವಲಯ ಆಯುಕ್ತ ಡಾ.ಹರೀಶ್ ಕುಮಾರ್, ಚುನಾವಣಾ ವಿಭಾಗದ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ಘೋಷ್, ವಲಯ ಜಂಟಿ ಆಯುಕ್ತ ಕೃಷ್ಣಮೂರ್ತಿ, ಅಪರ ಜಿಲ್ಲಾ ಚುನಾವಣಾ ಅಧಿಕಾರಿ ಡಾ. ಜಗದೀಶ್ ನಾಯ್ಕ್(ದಕ್ಷಿಣ), ವಲಯ ಮುಖ್ಯ ಅಭಿಯಂತರ ಶಶಿಕುಮಾರ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್​ರಿಂದ ಮತದಾರರ ಪಟ್ಟಿ ಪರಿಶೀಲನೆ.. ಬಿಎಲ್​ಒ ಗಳಿಗೆ ಎಚ್ಚರಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.