ETV Bharat / state

4 ರಾಜ್ಯಗಳ ಚುನಾವಣಾ ಫಲಿತಾಂಶ, ಕರ್ನಾಟಕ ಕಾಂಗ್ರೆಸ್​ಗೂ ಎಚ್ಚರಿಕೆ ಗಂಟೆ: ಬಸವರಾಜ ಬೊಮ್ಮಾಯಿ - Chhattisgarh assembly election 2023

Bommai statement on election result: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಮುಂದಿನ ಲೋಕಸಭೆ ಚುನಾವಣೆಗೆ ಸ್ಪಷ್ಟ ಸಂದೇಶವಾಗಿದೆ ಎಂದು ಮಾಜಿ ಸಿಎಂ ಬಸರಾಜ ಬೊಮ್ಮಾಯಿ ಹೇಳಿದ್ದಾರೆ.

Former CM Basavaraj Bommai
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
author img

By ETV Bharat Karnataka Team

Published : Dec 3, 2023, 4:11 PM IST

Updated : Dec 3, 2023, 5:29 PM IST

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಲೋಕಸಭೆ ಚುನಾವಣೆಯ ದಿಕ್ಸೂಚಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಮತ್ತಷ್ಟು ಹೆಚ್ಚಾಗಿದ್ದು, ಕರ್ನಾಟಕ ಕಾಂಗ್ರೆಸ್​ಗೂ ಇದು ಎಚ್ಚರಿಕೆಯ ಗಂಟೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಆರ್.ಟಿ ನಗರ ನಿವಾಸದಲ್ಲಿ ಇಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಪಂಚರಾಜ್ಯಗಳ ಚುನಾವಣೆ ಲೋಕಸಭೆ ಚುನಾವಣೆಗಿಂತ ಮೊದಲು ಬಂದಿರುವುದರಿಂದ ಇದನ್ನು ಸೆಮಿ ಫೈನಲ್ ಅಂತ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಂತೂ ಮೇಲಿಂದ‌ಮೇಲೆ ಹೇಳಿದ್ದಾರೆ. ಈ ಫಲಿತಾಂಶ ಲೋಕಸಭೆ ಚುನಾವಣೆಗೆ ಸ್ಪಷ್ಟ ಸಂದೇಶ ನೀಡಿದೆ ಎಂದರು.

ಮಧ್ಯಪ್ರದೇಶದಲ್ಲಿ ಮೂರನೇ ಎರಡರಷ್ಟು ಬಹುಮತ ಪಡೆದಿದ್ದೇವೆ. ಛತ್ತೀಸ್​ಘಡ, ರಾಜಸ್ಥಾನದಲ್ಲೂ ಸ್ಪಷ್ಟ ಬಹುಮತ ಪಡೆದಿದ್ದೇವೆ. ತೆಲಂಗಾಣದಲ್ಲಿ ನಮ್ಮ ಸಂಖ್ಯೆ 1 ರಿಂದ 8ಕ್ಕೆ ಏರಿದ್ದೇವೆ. ಈ‌ ಫಲಿತಾಂಶಕ್ಕೆ ಕಾರಣವಾಗಿರುವ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಅಮಿತ್ ಶಾ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್​ ಸೇರಿದಂತೆ ಎಲ್ಲ ನಾಯಕರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.

ಈ ಚುನಾವಣೆಯಲ್ಲಿ ಕಾಂಗ್ರೆಸ್​ನವರು ಪ್ರಧಾನಿ ಮೋದಿ ಅವರನ್ನು ಟಾರ್ಗೆಟ್ ಮಾಡಿದ್ದರು. ಜಾತಿ ರಾಜಕಾರಣ, ಸನಾತನ ಧರ್ಮದ ವಿರುದ್ಧ ಅಪಪ್ರಚಾರ ಮಾಡಿದ್ದಾರೆ. ಗ್ಯಾರೆಂಟಿಗಳನ್ನು ಆಪ್ ಆರಂಭ ಮಾಡಿತ್ತು. ಅದನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಮುಂದುವರೆಸಿತು. ಸುಳ್ಳು ಹೇಳಿ ಜನರ ವಿಶ್ವಾಸ ಗಳಿಸುವ ಪ್ರಯತ್ನ ಮಾಡಿದರು. ಗ್ಯಾರೆಂಟಿಗಳನ್ನು ಜನ ತಿರಸ್ಕರಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲೂ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುತ್ತದೆ ಎಂದು ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂಡಿಯಾ ಒಕ್ಕೂಟದ ಪರಿಸ್ಥಿತಿ ಈಗ ನಡೆದ ಚುನಾವಣೆಗಳಲ್ಲಿ ಛಿದ್ರವಾಗಿದೆ. ಕಾಂಗ್ರೆಸ್ ಅದರಿಂದ ದೂರವಾಗುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಸಂಪೂರ್ಣ ನೆಲ ಕಚ್ಚಲಿದೆ ಎಂದು ಹೇಳಿದರು.

ಇನ್ನು, ಈ ಫಲಿತಾಂಶದ ಪರಿಣಾಮ ಕರ್ನಾಟಕದ ಮೇಲೂ ಆಗಲಿದೆ. ಕರ್ನಾಟಕದಲ್ಲಿ ಇಷ್ಟೊಂದು ಬರ ಇದೆ.‌ ಜಿಲ್ಲಾಧಿಕಾರಿಗಳ ಅಕೌಂಟ್​ನಲ್ಲಿ 400 ಕೋಟಿಗೂ ಅಧಿಕ ರೂ. ಹಣ ಇದ್ದರೂ, ಅದನ್ನು ಬಿಡುಗಡೆ ಮಾಡದೇ ಕೇಂದ್ರದ ಕಡೆಗೆ ಬೆರಳು ಮಾಡುತ್ತಿದ್ದಾರೆ‌. ಹಿಂದಿನ ಯಾವುದೇ ಸರ್ಕಾರ ಈ ರೀತಿ ಮಾಡಿಲ್ಲ.‌ ಮೊದಲು ತನ್ನ ಬಳಿ ಇರುವ ಹಣವನ್ನು ರೈತರಿಗೆ ಪರಿಹಾರ ನೀಡಬೇಕು. ನಾವು ಪ್ರವಾಹ ಬಂದಾಗ ಮೊದಲು ಪರಹಾರ ನೀಡಿದ್ದೆವು. ಅತಿ ಹೆಚ್ಚು ಭ್ರಷ್ಟಾಚಾರ ಇರುವ ರಾಜ್ಯ ಕರ್ನಾಟಕ, ಪಿಎಸ್​ಐ ಹಗರಣದ ಕುರಿತು ನಾವು ಚಾರ್ಜ್​ಶೀಟ್ ಸಲ್ಲಿಸಿದ್ದರೂ ಮತ್ತೆ ಆಯೋಗ ಮಾಡಿದ್ದಾರೆ ಎಂದು ಮಾಜಿ ಸಿಎಂ ಆರೋಪಿಸಿದರು.

ಅಧಿವೇಶನದ ನಂತರ‌ ಜನಾಂದೋಲನ: ರಾಜ್ಯ ಸರ್ಕಾರದ ಗ್ಯಾರೆಂಟಿಗಳು ಕೇವಲ 25% ರಷ್ಟು ಜನರಿಗೆ ಮಾತ್ರ ತಲುಪಿವೆ. ಅಧಿವೇಶನ ಮುಗಿದ ಮೇಲೆ ಬಿಜೆಪಿಯಿಂದ ಗ್ಯಾರೆಂಟಿ ಸರಿಯಾದ ಅನುಷ್ಠಾನಕ್ಕಾಗಿ ಬೃಹತ್ ಚಳವಳಿ ನಡೆಸಲು ತೀರ್ಮಾನ ಮಾಡಿದ್ದೇವೆ. ಗ್ಯಾರೆಂಟಿ ದೊರೆಯದ ಫಲಾನುಭವಿಗಳ ಮುಂದಾಳತ್ವದಲ್ಲಿ ಹೋರಾಟ ರೂಪಿಸಲಾಗುವುದು ಎಂದು ಹೇಳಿದರು.

ಮೋದಿ ವರ್ಚಸ್ಸು ಹೆಚ್ಚಾಗಿದೆ: ದೇಶದಲ್ಲಿ ಈಗಿನ ವಾತಾವರಣ ನೋಡಿದರೆ ಮತ್ತೆ ಕೇಂದ್ರದಲ್ಲಿ ನರೇಂದ್ರ ಮೋದಿಯೇ ಪ್ರಧಾನಿಯಾಗುತ್ತಾರೆ ಎನ್ನುವ ವಿಶ್ವಾಸ ಮೂಡಿದೆ. ರಾಜ್ಯದಲ್ಲಿ 25 ಎಂಪಿ ಸ್ಥಾನ ಗೆಲ್ಲುತ್ತೇವೆ. ಜೆಡಿಎಸ್ ಜೊತೆಗಿನ ಹೊಂದಾಣಿಕೆ ನಮಗೆ ಹೆಚ್ಚು ಅನುಕೂಲವಾಗಲಿದೆ. ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಗೆದ್ದರೆ ಇಡೀ ದೇಶ ಗೆದ್ದಂತೆ ಅಂತ ಹೇಳುತ್ತಾರೆ. ಪ್ರಧಾನಿ ಮೋದಿಯವರ ವರ್ಚಸ್ಸು ಈಗ ಮತ್ತೆ ಹೆಚ್ಚಾಗಿದೆ. ಕಾಂಗ್ರೆಸ್​ನ ಯಾವ ನಾಯಕರಿಗೂ ಮೋದಿಯವರ ಶೇ 1% ರಷ್ಟೂ ವರ್ಚಸ್ಸಿಲ್ಲ. ಮೋದಿಯವರು ಪ್ರಧಾನಿ ಎನ್ನುವ ಅಹಂ ಬಿಟ್ಟು ಹೋರಾಟ ಮಾಡುತ್ತಾರೆ. ಈ ಸ್ವಭಾವ ಯಾವ ನಾಯಕರಿಗೂ‌ ಇಲ್ಲ ಎಂದು ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ: ರಾಜ್ಯ ಬಿಜೆಪಿ ಕಚೇರಿಯಲ್ಲಿ ವಿಜಯೋತ್ಸವ: ದೇಶ ಯಾರ ಕೈಯಲ್ಲಿದ್ದರೆ ಒಳ್ಳೆಯದು ಎಂದು ಜನ ತೀರ್ಮಾನಿಸಿದ್ದಾರೆ: ಅಶೋಕ್

Last Updated : Dec 3, 2023, 5:29 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.