ETV Bharat / state

ಅ.28 ರಂದು 252 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ

2022ರ ಆಗಸ್ಟ್​​ನಿಂದ ನವೆಂಬರ್​​ವರೆಗೆ ಅವಧಿ ಮುಕ್ತಾಯವಾಗಲಿರುವ 252 ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ 187 ಖಾಲಿ ಇರುವ ಗ್ರಾಮ ಪಂಚಾಯತ್​​ ಸದಸ್ಯ ಸ್ಥಾನಗಳಿಗೆ ಉಪಚುನಾವಣೆಯ ದಿನಾಂಕ ಪ್ರಕಟಗೊಂಡಿದೆ.

Representative image
ಸಾಂದರ್ಭಿಕ ಸುದ್ದಿ
author img

By

Published : Oct 4, 2022, 7:34 AM IST

ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಹಾಗೂ ಗಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ದಿನಾಂಕವನ್ನು ಘೋಷಿಸಿದೆ.

2022ರ ಆಗಸ್ಟ್​​ನಿಂದ ನವೆಂಬರ್​​ವರೆಗೆ ಅವಧಿ ಮುಕ್ತಾಯವಾಗಲಿರುವ 252 ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ 187 ಖಾಲಿ ಇರುವ ಗ್ರಾಮ ಪಂಚಾಯತ್​​ ಸದಸ್ಯ ಸ್ಥಾನಗಳಿಗೆ ಉಪಚುನಾವಣೆಯ ದಿನಾಂಕ ಪ್ರಕಟಿಸಿದೆ. ಅದರಂತೆ ಅಕ್ಟೋಬರ್ 28ರಂದು ಮತದಾನ ನಡೆಯಲಿದೆ.

ಅ.18 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅ.19 ನಾಮಪತ್ರ ಪರಿಶೀಲನೆ ನಡೆಯಲಿದೆ. ಅ.21 ನಾಮಪತ್ರ ಹಿಂಪಡೆಯುವ ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ಅ.28ಕ್ಕೆ ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ.

ಇದನ್ನೂ ಓದಿ: ಗ್ರಾಮ ಪಂಚಾಯಿತಿಗಳು, 7 ಪುರಸಭೆ, ಒಂದು ನಗರ ಸಭೆಗೆ ಚುನಾವಣೆ ದಿನಾಂಕ ನಿಗದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.