ETV Bharat / state

ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ: ವೇಳಾಪಟ್ಟಿ ಪ್ರಕಟಿಸಿದಂತೆ ಹೈಕೋರ್ಟ್ ಸೂಚನೆ - ಬೆಂಗಳೂರು ಶಿಕ್ಷಕರ ಕ್ಷೇತ್ರ

ರಾಜ್ಯ ಸರ್ಕಾರದ ಪರ ವಕೀಲರು ವಾದಿಸಿ, ಮತದಾರರ ಪಟ್ಟಿಯನ್ನು ಪರಿಶೀಲಿಸಿ ಒಟ್ಟು 1,100 ಅನರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆಯಲಾಗಿದೆ ಎಂದು ತಿಳಿಸಿದರು.

Elections for Bangalore Teachers constituency

author img

By

Published : Sep 19, 2020, 1:28 AM IST

ಬೆಂಗಳೂರು : ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಅನರ್ಹ ಮತದಾರರ ಹೆಸರು ಸೇರಿಸಲಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಿರುವ ಅರ್ಜಿ ಇತ್ಯರ್ಥವಾಗುವವರೆಗೆ ಚುನಾವಣಾ ವೇಳಾ ಪಟ್ಟಿ ಪ್ರಕಟಿಸಬಾರದು ಎಂದು ರಾಜ್ಯ ಸರ್ಕಾರ ಮತ್ತು ಕೇಂದ್ರ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಮೌಖಿಕವಾಗಿ ಸೂಚಿಸಿದೆ.

ಈ ಕುರಿತು ಸಂಘಟನೆಯೊಂದು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಡಿ.ಆರ್.ರವಿಶಂಕರ್​ ವಾದಿಸಿ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಶಿಕ್ಷಕರಲ್ಲದ, ಕ್ಷೇತ್ರದಲ್ಲಿ ವಾಸಿಸದ ಮತ್ತು ಮತದಾರರಾಗಲು ನಿಗದಿತ ಸೇವಾವಧಿ ಪೂರೈಸದ ಶಿಕ್ಷಕರ ಹೆಸರುಗಳನ್ನು ಸೇರಿಸಲಾಗಿದೆ. ನಮಗಿರುವ ಮಾಹಿತಿ ಪ್ರಕಾರ ಅಂತಿಮ ಮತದಾರರ ಪಟ್ಟಿಯಲ್ಲಿ 3,500 ಮಂದಿ ಅನರ್ಹ ಮತದಾರರ ಹೆಸರು ಇವೆ. ಇನ್ನೂ ಮತದಾರರ ಪಟ್ಟಿಗೆ ನೋಂದಾಯಿಸಲು ಕೋರಿ ಸಲ್ಲಿಸಿರುವ 8 ಸಾವಿರ ಅರ್ಜಿಗಳನ್ನು ಪರಿಗಣಿಸಿಲ್ಲ. ಕೊನೆ ಕ್ಷಣದಲ್ಲಿ ಈ 8 ಸಾವಿರ ಅರ್ಜಿದಾರರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸುವ ಸಾಧ್ಯತೆಯೂ ಇದೆ ಎಂದು ವಿವರಿಸಿದರು.

ರಾಜ್ಯ ಸರ್ಕಾರದ ಪರ ವಕೀಲರು ವಾದಿಸಿ, ಮತದಾರರ ಪಟ್ಟಿಯನ್ನು ಪರಿಶೀಲಿಸಿ ಒಟ್ಟು 1,100 ಅನರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆಯಲಾಗಿದೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಯಾವ ಮತದಾರರ ಹೆಸರು ಮತ್ತು ಏಕೆ ತೆಗೆಯಲಾಗಿದೆ? ಬಾಕಿಯಿರುವ 8 ಸಾವಿರ ಅರ್ಜಿಗಳನ್ನು ಈವರೆಗೆ ಏಕೆ ಪರಿಗಣಿಸಿಲ್ಲ? ಅವುಗಳನ್ನು ಪರಿಗಣಿಸಲು ಕಾಲಮಿತಿ ಇದೆಯೇ? ಎಂಬ ಬಗ್ಗೆ ವಿವರಣೆ ನೀಡಿ ಸಮಗ್ರ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಸರ್ಕಾರ ಮತ್ತು ಕೇಂದ್ರ ಚುನಾವಣಾ ಅಯೋಗಕ್ಕೆ ಮೌಖಿಕವಾಗಿ ಸೂಚಿಸಿತು.

ಅಲ್ಲದೆ, ಪ್ರತಿ ಬಾರಿ ಚುನಾವಣೆ ನಡೆಸುವಾಗಲೂ ಶೋಧಿಸಿ ಮತದಾರರ ಪಟ್ಟಿ ಸಿದ್ಧ ಮಾಡಬೇಕು. ಇಲ್ಲವಾದರೆ ಮತದಾರರ ಪಟ್ಟಿ ಸಮರ್ಪಕವಾಗಿಲ್ಲ ಎಂದು ನ್ಯಾಯಾಲಯ ಭಾವಿಸಬೇಕಾಗುತ್ತದೆ. ಆದ್ದರಿಂದ ವೇಳಾಪಟ್ಟಿ ಪ್ರಕಟಿಸುವ ಮುನ್ನವೇ ಎಲ್ಲ ಅನರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆಯಬೇಕು. ಈ ಅರ್ಜಿ ಇತ್ಯರ್ಥವಾಗುವವರೆಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಬಾರದು ಎಂದು ಮೌಖಿಕವಾಗಿ ಸೂಚಿಸಿ ವಿಚಾರಣೆಯನ್ನು ಸೆ.22ಕ್ಕೆ ಮುಂದೂಡಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.