ಬೆಂಗಳೂರು: ಚುನಾವಣೆ ಹಿನ್ನೆಲೆ ನಾಳೆ ನಡೆಯಬೇಕಿದ್ದ ಬೆಂಗಳೂರು ವಿವಿ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ. ವಿವಿ ಮೌಲ್ಯಮಾಪನ ಕುಲಸಚಿವ ಡಾ.ಶಿವರಾಜ್ ಈ ಆದೇಶ ಹೊರಡಿಸಿದ್ದಾರೆ.
ಬಿಬಿಎಂಪಿ ಉಪಚುನಾವಣೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, 2 ಮತ್ತು 6ನೇ ಸೆಮಿಸ್ಟರ್ನ ಎಲ್ಲ ಪರೀಕ್ಷೆಗಳು ಜೂನ್ 2 ಭಾನುವಾರದಂದು ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ. ಬಿಎ, ಬಿಎಸ್ಸಿ, ಬಿಕಾಂ, ಬಿಬಿಎ, ಬಿಹೆಚ್ಎಂ, ಬಿಸಿಎ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಅಂದು ಬೆಳಗ್ಗೆ 9:30 ರಿಂದ 12:30ಕ್ಕೆ ಮತ್ತು 2 ರಿಂದ 5 ಗಂಟೆಗೆ ಪರೀಕ್ಷೆ ನಡೆಯಲಿವೆ.