ETV Bharat / state

ಚುನಾವಣೆಗೆ ಸಾಮೂಹಿಕ ನಾಯಕತ್ವ: ಸಲೀಂ ಅಹ್ಮದ್ - ETv Bharat Kannada news

ಎಐಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ನವ ದೆಹಲಿಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಂಡ ಹಲವು ತೀರ್ಮಾನಗಳ ಬಗ್ಗೆ ಸಲೀಂ ಅಹ್ಮದ್ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.

KPCC Working President Salim Ahmed
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್
author img

By

Published : Dec 13, 2022, 8:05 PM IST

ಬೆಂಗಳೂರು: ಎಐಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ನಿನ್ನೆ ನವದೆಹಲಿಯಲ್ಲಿ ಮಹತ್ವದ ಸಭೆ ನಡೆದಿತ್ತು. ಈ ಸಂದರ್ಭದಲ್ಲಿ ಹಲವು ವಿಚಾರಗಳ ಬಗ್ಗೆ ತೀರ್ಮಾನವಾಗಿದೆ. ಪ್ರಮುಖವಾಗಿ, ಮುಂಬರುವ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜನವರಿ ಮೊದಲ ವಾರದಲ್ಲಿ ಎಲ್ಲ ಮುಖಂಡರೂ ಸೇರಿ 20 ಜಿಲ್ಲೆಗಳಲ್ಲಿ ಒಟ್ಟಾಗಿ 100 ದಿನಗಳ ಬಸ್ ಯಾತ್ರೆ ಮಾಡುವ ಮೂಲಕ ರಾಜ್ಯದ 150 ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಿದ್ದೇವೆ. ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದರು.

ಈ ಮೂಲಕ ಪಕ್ಷ ಸಂಘಟನೆ, ಸರ್ಕಾರದ ವೈಫಲ್ಯ, 40% ಕಮಿಷನ್, ಬೆಲೆ ಏರಿಕೆ, ಮತದಾರರ ಮಾಹಿತಿ ಕಳವು, ನಿರುದ್ಯೋಗ ಸೇರಿದಂತೆ ಹಲವು ವಿಚಾರವಾಗಿ ಜನರಿಗೆ ಮಾಹಿತಿ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ನೀಡುವಂತೆ ಮನವಿ ಮಾಡಲಾಗುವುದು. ಈ ತಿಂಗಳು 30ರಂದು ಬಿಜಾಪುರದಲ್ಲಿ ಮತ್ತು ಜನವರಿ 2ರಂದು ಹುಬ್ಬಳ್ಳಿಯಲ್ಲಿ ಕೃಷ್ಣಾ ಯೋಜನೆ ಹಾಗೂ ಮಹದಾಯಿ ವಿಚಾರವಾಗಿ, ಜನವರಿ 8 ರಂದು ಚಿತ್ರದುರ್ಗದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಇನ್ನು ಇಂದು ಅಲ್ಪಸಂಖ್ಯಾತರ ಸಭೆ ಮಾಡಿದ್ದು, ಮಾಜಿ ಸಚಿವರು, ಅಲ್ಪಸಂಖ್ಯಾತ ಘಟಕದ ಮುಖ್ಯಸ್ಥರು, ಮಾಜಿ ಸಂಸದರು ಸೇರಿದಂತೆ ಎಲ್ಲರೂ ಸೇರಿ ಚರ್ಚಿಸಿದ್ದೇವೆ. ಅಲ್ಪಸಂಖ್ಯಾತರ ಮತ ಡಿಲೀಟ್ ಮಾಡಿರುವುದರ ಬಗ್ಗೆ ಚರ್ಚೆ ಮಾಡಿ ಮತ ತೆಗೆದುಹಾಕುವ ಮೂಲಕ ಸರ್ಕಾರ ಷಡ್ಯಂತ್ರ ರೂಪಿಸಿರುವುದನ್ನು ಮುಂದಿನ ದಿನಗಳಲ್ಲಿ ಹೇಗೆ ಸರಿಪಡಿಸಬೇಕು ಎಂದು ಚರ್ಚೆ ಮಾಡಿದ್ದೇವೆ ಎಂದು ಹೇಳಿದರು. ಚಿಲುಮೆ ಸಂಸ್ಥೆ ವಿರುದ್ಧ ನಾವು ನೀಡಿದ ದೂರು ಸಾಬೀತಾಗಿದ್ದು, ಇದೇ ಮಾದರಿಯಲ್ಲಿ ಇತರ ಜಿಲ್ಲೆಗಳಲ್ಲಿ ಮತದಾರರ ಮಾಹಿತಿ ಕಳವು ಮಾಡಲಾಗಿದೆ. ಜನವರಿ ತಿಂಗಳಲ್ಲಿ 5 ವಲಯಗಳ ಸಭೆ ಮಾಡಿ ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಸಮಾವೇಶವನ್ನು ಒಟ್ಟಾಗಿ ಮಾಡುತ್ತೇವೆ ಎಂದು ಸಲೀಂ ತಿಳಿಸಿದರು. ಇನ್ನು ಪಕ್ಷದ ಟಿಕೆಟ್ ಪಡೆಯಲು 100ಕ್ಕೂ ಹೆಚ್ಚು ಹೆಚ್ಚು ಅರ್ಜಿಗಳು ಬಂದಿದ್ದು, ಅದನ್ನು ಸಮಿತಿ ಮೂಲಕ ಪರಿಶೀಲಿಸಿ ನಂತರ ಪರಿಷ್ಕೃತ ಪಟ್ಟಿಯನ್ನು ಕೆಪಿಸಿಸಿ ನೀಡಿ ಎಷ್ಟು ಟಿಕೆಟ್ ನೀಡಬೇಕೆಂದು ಪಕ್ಷಕ್ಕೆ ಮನವಿ ಮಾಡಲಾಗುವುದು ಎಂದು ಮಾಹಿತಿ ಒದಗಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ಅಧಿಕಾರಕ್ಕೆ ಬರಲಿದೆ: ಸಲೀಂ ಅಹ್ಮದ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.